AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್, ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ: ಸಿದ್ದರಾಮಯ್ಯ ಘೋಷಣೆ

ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದಿರಾ ಕ್ಯಾಂಟೀನ್, ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ: ಸಿದ್ದರಾಮಯ್ಯ ಘೋಷಣೆ
ಸಿಎಂ ಸಿದ್ದರಾಮಯ್ಯ, ಚಲುವರಾಯಸ್ವಾಮಿ
TV9 Web
| Edited By: ವಿವೇಕ ಬಿರಾದಾರ|

Updated on:Jan 05, 2024 | 2:30 PM

Share

ಬೆಂಗಳೂರು, ಜನವರಿ 05: ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ (Cereal) ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಹತ್ವದ ಘೋಷಣೆ ಮಾಡಿದರು. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಘೋಷಿಸಿದರು.

ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಸಿರಿಧಾನ್ಯ ಮೇಳವನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದರು.

ಇದನ್ನೂ ಓದಿ: ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಸಿದ್ದರಾಮಯ್ಯ ಚಾಲನೆ

ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತಿದೆ ಎಂದರು.

2004 ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯ ಆಗುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾದ್ದರಿಂದ ಆಹಾರ ಸ್ವಾವಲಂಭನೆ ಸಾಧಿಸಲು ಇಂದಿರಾಗಾಂಧಿ ಅವರ ಅವಧಿಯಲ್ಲಿ ಹಸಿರು ಕ್ರಾಂತಿ ನಡೆಸಲಾಯಿತು. ಪ್ರತಿಯೊಬ್ಬರಿಗೂ ಆಹಾರ ಒದಗಿಸಲು ಹಸಿರು ಕ್ರಾಂತಿ ನೆರವಾಯಿತು ಎಂದರು.

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:29 pm, Fri, 5 January 24

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?