ಚಿಲ್ಲರೆ ಮದ್ಯ ಮಾರಾಟಗಾರರು ಮತ್ತು ಕುಟುಂಬಕ್ಕೆ ಆದ್ಯತೆ ಮೇರೆಗೆ ಲಸಿಕೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ
ಹಳೇ ಆರ್ಥಿಕ ವರ್ಷದ ಶುಲ್ಕ ಹೊಂದಾಣಿಕೆ ಮಾಡಿಕೊಳ್ಳಿ. ಸನ್ನದು ಶುಲ್ಕ ಹೊಂದಾಣಿಕೆ ಮಾಡಿಕೊಳ್ಳಿ ಎಂದು ಕೂಡ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು: ಚಿಲ್ಲರೆ ಮದ್ಯ ಮಾರಾಟಗಾರರ ಕುಟುಂಬಕ್ಕೆ ಆದ್ಯತೆ ಮೇರೆಗೆ ಕೊರೊನಾ ಲಸಿಕೆ ನೀಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ವೈನ್ ಮರ್ಚಂಟ್ಸ್ ಅಸೋಸಿಯೇಷನ್ನವರು ಮನವಿ ಸಲ್ಲಿಸಿದ್ದಾರೆ. ಆದ್ಯತೆ ಮೇರೆಗೆ ಕೊರೊನಾ ಲಸಿಕೆಯನ್ನು ನೀಡಲು ಮನವಿ ಮಾಡಿದ್ದಾರೆ.
ಸನ್ನದು ನವೀಕರಣ ವೇಳೆ ಶುಲ್ಕ ವಿನಾಯಿತಿ ನೀಡಬೇಕು. ಶುಲ್ಕ ಪಾವತಿಗೆ ನಾಲ್ಕು ಕಂತು ನೀಡಬೇಕು. ಹಳೇ ಆರ್ಥಿಕ ವರ್ಷದ ಶುಲ್ಕ ಹೊಂದಾಣಿಕೆ ಮಾಡಿಕೊಳ್ಳಿ. ಸನ್ನದು ಶುಲ್ಕ ಹೊಂದಾಣಿಕೆ ಮಾಡಿಕೊಳ್ಳಿ ಎಂದು ಕೂಡ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ 18 ರಿಂದ 44 ವರ್ಷದೊಳಗಿನವರಿಗೆ ಮೇ 22ರಿಂದ ಕೊರೊನಾ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. ಈ ವಯೋಮಾನದವರಲ್ಲೂ ಆದ್ಯತೆ ಮೇರೆಗೆ ಕೊವಿಡ್ ವಾರಿಯರ್ಸ್ಗಳಿಗೆ ಮತ್ತು ಆಯ್ದ ಗುಂಪುಗಳಿಗೆ ಮಾತ್ರ ಸದ್ಯ ಲಸಿಕೆ ವಿತರಣೆ ಮಾಡಲು ತೀರ್ಮಾನಿಸಲಾಗಿದೆ. ಈ ಕುರಿತು ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಸದ್ಯ ಕೊವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೆಲವು ಆದ್ಯತಾ ಗುಂಪುಗಳಿಗೆ ಮಾತ್ರ ಮೇ 22ರಿಂದ ಕೊವಿಡ್ ಲಸಿಕೆ ನೀಡಲು ನಿರ್ಧರಿಸಲಾಗಿದೆ.
ಈ ಕೆಳಕಂಡ ವರ್ಗಕ್ಕೆ ಮೇ 22ರಿಂದಲೇ ಲಸಿಕೆ ಲಭ್ಯವಾಗಲಿದೆ ಅಂಗವೈಕಲ್ಯ ಹೊಂದಿರುವ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಫಲಾನುಭವಿಗಳು ಮತ್ತು ಒರ್ವ ಆರೈಕೆದಾರರು ಖೈದಿಗಳು ಚಿತಾಗಾರ/ ಸ್ಮಶಾನ/ ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರು ಆರೋಗ್ಯ ಕಾರ್ಯಕರ್ತರ ನಿಕಟ ಕುಟುಂಬಸ್ಥರು ಕೊವಿಡ್ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಶಿಕ್ಷಕರು ಸರ್ಕಾರಿ ಸಾರಿಗೆ ಸಿಬ್ಬಂದಿ ಆಟೋ ಮತ್ತು ಕ್ಯಾಬ್ ಚಾಲಕರು ವಿದ್ಯುತ್ ಮತ್ತು ನೀರು ಸರಬರಾಜು ಮಾಡುವವರು ಅಂಚೆ ಇಲಾಖೆ ಸಿಬ್ಬಂದಿ ಭದ್ರತೆ ಮತ್ತು ಕಚೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿ ನ್ಯಾಯಾಂಗ ಅಧಿಕಾರಿಗಳು ವಯೋವೃದ್ಧರ/ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರ ಆರೈಕೆದಾರರು ಮಾಧ್ಯಮದವರು ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು ಆಯಿಲ್ ಇಂಡಸ್ಟ್ರಿ ಮತ್ತು ಗ್ಯಾಸ್ ಸರಬರಾಜು ಮಾಡುವವರು ಪೆಟ್ರೋಲ್ ಬಂಕ್, ಕರ್ಮಚಾರಿಗಳು ಒಳಗೊಂಡಂತೆ ಔಷಧಿ ತಯಾರಿಕಾ ಕಂಪನಿಗಳ ಸಿಬ್ಬಂದಿ ಆಸ್ಪತ್ರೆಗಳಿಗೆ ಆಕ್ಸಿಜನ್, ಔಷಧಿಗಳು ಮತ್ತು ವೈದ್ಯಕೀಯ ಉಪಕರಣ ಸರಬರಾಜು ಸಿಬ್ಬಂದಿ ಅಧಿಕೃತ ಗುರುತಿನ ಚೀಟಿ ಹೊಂದಿರದ ಫಲಾನುಭವಿಗಳು (ವೃದ್ದಾಶ್ರಮ ವಾಸಿಗಳು, ನಿರ್ಗತಿಕರು) ಭಾರತೀಯ ಆಹಾರ ನಿಗಮ ಸಿಬ್ಬಂದಿ
ಇದನ್ನೂ ಓದಿ: ಹೋಮ್ ಕ್ವಾರೆಂಟೈನ್ ಆಗಿರುವ ಕೊರೊನಾ ಸೋಂಕಿತರು ಗಮನಿಸಿ: ಬೇಗ ಗುಣವಾಗಲು ಆಯುಷ್-64 ಔಷಧ ಸಹಕಾರಿ; ವಿವರ ಇಲ್ಲಿದೆ
ಕೊರೊನಾ ಸೋಂಕಿತರಿಗೆ ಆಯುರ್ವೇದದಲ್ಲಿ ಚಿಕಿತ್ಸೆ; 10 ಸಾವಿರದಷ್ಟು ಜನರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ
Published On - 6:24 pm, Fri, 21 May 21