AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore weather: ದಶಕದ ಬಳಿಕ ಬೆಂಗಳೂರಿನಲ್ಲಿ ಭಾರೀ ಚಳಿಯ ಅನುಭವ

ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದ್ದು, ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಚಳಿಯ ವರದಿಯಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ ದಶಕದಲ್ಲೇ ಕನಿಷ್ಠ ತಾಪಮಾನ ದಾಖಲಾಗಿದೆ.

Bangalore weather: ದಶಕದ ಬಳಿಕ ಬೆಂಗಳೂರಿನಲ್ಲಿ ಭಾರೀ ಚಳಿಯ ಅನುಭವ
ದಶಕದ ಬಳಿಕ ಬೆಂಗಳೂರಿನಲ್ಲಿ ಭಾರೀ ಚಳಿಯ ಅನುಭವ
TV9 Web
| Edited By: Rakesh Nayak Manchi|

Updated on:Oct 26, 2022 | 9:08 AM

Share

ಬೆಂಗಳೂರು: ರಾಜ್ಯದಲ್ಲಿ ವಿಪರೀತ ಚಳಿಯಾಗುತ್ತಿದ್ದು, ಈ ವಿಚಾರದಲ್ಲಿ ಬೆಂಗಳೂರು ದಾಖಲೆಯನ್ನು ಸೃಷ್ಟಿಸಿದೆ. ಕಳೆದ ವಾರ ಭರ್ಜರಿ ಮಳೆಯಾದ ಬೆಂಗಳೂರಿನಲ್ಲಿ ಈಗ ತೀವ್ರ ಚಳಿಯ ಕಾಟ ಆರಂಭವಾಗಿದೆ. ಕಳೆದ 3 ದಿನಗಳಿಂದ ಭಾರೀ ಚಳಿಯ ಅನುಭವ ಆಗುತ್ತಿದ್ದು, ಈ ಅನುಭವವು ಬರೋಬ್ಬರಿ 10 ವರ್ಷಗಳ ಬಳಿಕ ಆರಂಭವಾಗಿದೆ. ಚಳಿ ವಿಪರೀತ ಇರುವುದರಿಂದ ನಗರದ ಜನತೆ  ತಲೆಗೆ ಟೋಪಿ, ಸ್ವೆಟರ್ ಧರಿಸಿ ವಾಕಿಂಗ್ ಮಾಡುತ್ತಿದ್ದಾರೆ. ಚಳಿ ನಡುವೆಯೂ ಎಂದಿನಂತೆ ಲಾಲ್ ಬಾಗ್​ನಲ್ಲಿ ವಾಕಿಂಗ್ ಮತ್ತು ಜಾಗಿಂಗ್ ಮಾಡುತ್ತಿರುವ ದೃಶ್ಯ ಕಂಡುಬಂದಿದೆ.

ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ದಾಖಲಾಗಿದ್ದಲ್ಲದೆ ಬೇರೆ ಜಿಲ್ಲೆಗಳಲ್ಲೂ ವಾಡಿಕೆಗಿಂತ ಕಡಿಮೆ ಉಷ್ಣಾಂಶ ವರದಿಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದ್ದು, ದಕ್ಷಿಣ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ ಇಳಿಕೆಯಾಗಿದೆ.

ರಾಜ್ಯದ ಶೇ 73ರಷ್ಟು ಭೂ ಭಾಗದಲ್ಲಿ 12 ರಿಂದ 16 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ದಾಖಲಾದರೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಹಾಸನ, ಮಂಡ್ಯ, ಕೊಡಗು ಸೇರಿದಂತೆ ಹಲವೆಡೆ ಕನಿಷ್ಠ 10 ರಿಂದ 13 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಕಸಿತಗೊಂಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚಳಿಯೊಂದಿಗೆ ಮಜಾ ಮಾಡುತ್ತಿರುವ ಸಿಟಿ ಮಂದಿ

ಬೆಂಗಳೂರಿನಲ್ಲಿ ಚಳಿ ಜೋರಾಗಿಯೇ ಇದ್ದರೂ ಅದರೊಂದಿಗೆ ಆನಂದಿಸುತ್ತಿದ್ದಾರೆ. ಚಳಿ ಇದ್ದರೂ ಈ ವಾತಾವರಣ ತುಂಬಾ ಖುಷಿಯಾಗುತ್ತಿದೆ, ಚಳಿ ಹೆಚ್ಚಿದ್ದರೂ ವಾಕಿಂಗ್ ಬೇಕೇ ಬೇಕು. ದೇಹದ ಫಿಟ್ನೆಸ್​ಗೆ ಇದು ಅವಶ್ಯಕ. ಮಾತ್ರವಲ್ಲದೆ ಮನಸ್ಸನ್ನು ಶಾಂತವಾಗಿರಿಸುತ್ತದೆ. ಚಳಿಯನ್ನು ತಡೆಯಲು ಸ್ವೆಟರ್, ಸ್ಕಾಫ್, ಶೂಸ್ ಹಾಕೊಂಡು ಬರುತ್ತಿದ್ದೇವೆ ಎಂದು ಮುಂಜಾನೆ ವೇಳೆ ಚಳಿಯಲ್ಲಿ ವಾಕಿಂಗ್ ಮಾಡುತ್ತಿದ್ದವರು ಹೇಳುತ್ತಿದ್ದಾರೆ.

ರಾಜ್ಯಾದಲ್ಲಿ ಸುರಿದ ಭಾರೀ ಮಳೆಯಿಂದ ಜನರು ಅಕ್ಷರಶಃ ನಲುಗಿದ್ದರು. ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಕಡೆಗಳಲ್ಲಿ ಭಾರೀ ಚಳಿಯಾಗುತ್ತಿದ್ದು, ಮಳೆ ನಂತರ ವಿಪರೀತ ಚಳಿಯನ್ನು ಎದುರಿಸುವಂತಾಗಿದೆ. ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಪ್ರವಾಹ ಸ್ಥಿತಿ ತಲೆ ದೋರಿ ನಗರವಾಸಿಗಳು ಪರದಾಡುವಂತಾಗಿತ್ತು. ಈ ಸ್ಥಿತಿ ಬೇರೆ ಜಿಲ್ಲೆಗಳಲ್ಲೂ ಸಂಭವಿಸಿತ್ತು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 am, Wed, 26 October 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್