ಬೆಂಗಳೂರು: 2020ನೇ ಸಾಲಿನ ಪ್ರೆಸ್ ಕ್ಲಬ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದ್ದು ದೇಶದ ಪ್ರತಿಷ್ಠಿತ ಉದ್ಯಮಿ ಹಾಗೂ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್ಜಿ ಅವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.
ಜೊತೆಗೆ, ನಟ ಸುದೀಪ್ ಮತ್ತು ನಾರಾಯಣ ಹೃದಯಾಲಯದ ಸಂಸ್ಥಾಪಕ ಡಾ.ದೇವಿಪ್ರಸಾದ್ ಶೆಟ್ಟಿ ಅವರಿಗೆ ಸಹ ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಇದಲ್ಲದೆ, 25 ಹಿರಿಯ ಪತ್ರಕರ್ತರಿಗೆ ಸಹ ವಾರ್ಷಿಕ ಪ್ರೆಸ್ ಕ್ಲಬ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಫೆಬ್ರವರಿ ಮೂರನೇ ವಾರದಲ್ಲಿ ನಡೆಯುವ ಕಾರ್ಯಕ್ರಮದ ವೇಳೆ ಮೂವರು ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡುವರು.