ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ ಮಾಡಿದ್ದ ಪತ್ನಿ, ಆಕೆಯ ಪ್ರಿಯಕರ ಅರೆಸ್ಟ್; ಇಬ್ಬರು ಮಕ್ಕಳು ಅನಾಥ

ಟಿ.ನರಸೀಪುರ ತಾಲೂಕಿನ ಹುಣಸಗಳ್ಳಿಯಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೊಲೆಯೊಂದು ನಡೆದಿತ್ತು. ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನೇ ಕೊಂದಿದ್ದಳು. ಕಾಫಿಯಲ್ಲಿ ನಿದ್ದೆ ಮಾತ್ರೆ ಬೆರೆಸಿ ಕುಡಿಸಿ ಹಲ್ಲೆ ನಡೆಸಿ ಬಳಿಕ ಉಸಿರುಗಟ್ಟಿಸಿ ಆರೋಪಿಗಳು ಕೊಲೆ ಮಾಡಿದ್ದರು.

ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ ಮಾಡಿದ್ದ ಪತ್ನಿ, ಆಕೆಯ ಪ್ರಿಯಕರ ಅರೆಸ್ಟ್; ಇಬ್ಬರು ಮಕ್ಕಳು ಅನಾಥ
ಆರೋಪಿ ಉಮಾ ಮತ್ತು ಅವಿನಾಶ್

ಮೈಸೂರು: ಪ್ರಿಯಕರನ ಜೊತೆ ಸೇರಿ ಪತಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 2020ರ ಅಕ್ಟೋಬರ್‌ನಲ್ಲಿ ನಡೆದ ವೆಂಕಟರಾಜು ಕೊಲೆ ಪ್ರಕರಣಕ್ಕೆ ಸಂಬಂಧಿಸಿ 9 ತಿಂಗಳ ಬಳಿಕ ಪೊಲೀಸರು ಕೊಲೆ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಿಯಕರನ ಜೊತೆ ಸೇರಿ ಪತಿ ಹತ್ಯೆಗೈದಿದ್ದ ಮೃತ ವೆಂಕಟರಾಜು ಪತ್ನಿ ಉಮಾ ಹಾಗೂ ಆಕೆಯ ಪ್ರಿಯಕರ ಅವಿನಾಶ್ನನ್ನು ಮೈಸೂರು ಜಿಲ್ಲೆಯ ಬನ್ನೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಟಿ.ನರಸೀಪುರ ತಾಲೂಕಿನ ಹುಣಸಗಳ್ಳಿಯಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೊಲೆಯೊಂದು ನಡೆದಿತ್ತು. ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನೇ ಕೊಂದಿದ್ದಳು. ಕಾಫಿಯಲ್ಲಿ ನಿದ್ದೆ ಮಾತ್ರೆ ಬೆರೆಸಿ ಕುಡಿಸಿ ಹಲ್ಲೆ ನಡೆಸಿ ಬಳಿಕ ಉಸಿರುಗಟ್ಟಿಸಿ ಆರೋಪಿಗಳು ಕೊಲೆ ಮಾಡಿದ್ದರು. ನಂತರ ಸ್ವಾಭಾವಿಕ ಸಾವು ಎಂಬಂತೆ ಬಿಂಬಿಸಿದ್ದರು. ವೆಂಕಟರಾಜು 50 ಕೊಲೆಯಾಗಿದ್ದ ದುರ್ದೈವಿ. ಘಟನೆ ಬಳಿಕ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪೊಲೀಸರು ಉಮಾ ಮತ್ತು ಅವಿನಾಶ್ ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ.

ಮೃತ ವೆಂಕಟರಾಜು ಮೂಲತಃ ಮಂಡ್ಯ ಜಿಲ್ಲೆ ಹೊನಗಾನಹಳ್ಳಿ ಗ್ರಾಮದ ನಿವಾಸಿ. 10 ವರ್ಷದ ಹಿಂದೆ ಉಮಾಳನ್ನು ಮದುವೆಯಾಗಿದ್ದರು. ಉಮಾ ಶ್ರೀರಂಗಪಟ್ಟಣ ತಾಲೂಕಿನ ಬಳ್ಳೆಕರೆ ಗ್ರಾಮದ ನಿವಾಸಿ. ದಂಪತಿಗೆ 8 ವರ್ಷದ ಒಂದು ಹೆಣ್ಣು ಮಗು 6 ವರ್ಷದ ಗಂಡು ಮಗು ಇದೆ. ವಯಸ್ಸಿನ ಅಂತರದಿಂದಾಗಿ ಗಂಡ ಹೆಂಡತಿ ನಡುವೆ ಬಿರುಕು ಉಂಟಾಗಿತ್ತು. ಈ ವೇಳೆ ಉಮಾಗೆ ಅವಿನಾಶ್ ಪರಿಚಯವಾಗಿದ್ದ. ಇವನು ಉಮಾಳ ಪಕ್ಕದ ಮನೆಯ ನಿವಾಸಿ. ಇಬ್ಬರು ಸೇರಿ ವೆಂಕಟರಾಜು ಕೊಲೆ ಮಾಡಿದ್ದಾರೆ. ಆರೋಪಿ ಅವಿನಾಶ್, ಅಜ್ಜಿ‌ ಮನೆ ಹುಣಸಗಳ್ಳಿಗೆ ಕರೆಸಿಕೊಂಡು ಕಾಫಿಯಲ್ಲಿ ನಿದ್ದೆ ಮಾತ್ರೆ ಬೆರೆಸಿ ನಿದ್ರಾವಸ್ಥೆಯಲ್ಲಿದ್ದಾಗ ಖಾಸಗಿ ಭಾಗಕ್ಕೆ ಹಲ್ಲೆ ನಡೆಸಿ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಂತರ ಸ್ವಾಭಾವಿಕ ಸಾವು ಎಂಬಂತೆ ಬಿಂಬಿಸಿದ್ದಾರೆ. ಈಗ ಇವರಿಬ್ಬರ ಈ ಕೃತ್ಯ ಬಯಲಾಗಿದ್ದು ಕಂಬಿ ಎಣಿಸುತ್ತಿದ್ದಾರೆ. ಆದ್ರೆ ಇಬರಿಬ್ಬರ ಕಳ್ಳಾಟಕ್ಕೆ ಮುದ್ದ ಮಕ್ಕಳು ಅನಾಥರಾಗಿದ್ದಾರೆ. ಅಪ್ಪನ ಪ್ರೀತಿಯಿಂದ ವಂಚಿತರಾಗಿದ್ದಾರೆ.

ಇದನ್ನೂ ಓದಿ: ಯುವತಿ ಸಾವಿಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಕಾರಣವಾಯ್ತು?; ಪ್ರೇಯಸಿಯನ್ನೇ ಕೊಂದ ಪ್ರಿಯಕರ