Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸಿಎಂ ಹೇಳಿಕೆ: ಕೋಡಿಶ್ರೀ ಭವಿಷ್ಯದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ

ಮಹಿಳಾ ಸಿಎಂ ಬಗ್ಗೆ ಕೋಡಿಮಠದ ಶ್ರೀಗಳ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅದೇಲ್ಲ ನಗಣ್ಯ ಎಂದು ಗರಂ ಆಗಿದ್ದಾರೆ. ಈ ವಿಚಾರವಾಗಿ ನಾನು ಏನೂ ಮಾತನಾಡಲು ಬಯಸಲ್ಲ ಎಂದಿದ್ದಾರೆ.

ಮಹಿಳಾ ಸಿಎಂ ಹೇಳಿಕೆ: ಕೋಡಿಶ್ರೀ ಭವಿಷ್ಯದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ
ಮಹಿಳಾ ಸಿಎಂ ಹೇಳಿಕೆ: ಕೋಡಿಶ್ರೀ ಭವಿಷ್ಯದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on: Sep 11, 2024 | 3:11 PM

ಬೆಳಗಾವಿ, ಸೆಪ್ಟೆಂಬರ್​ 11: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿಬರುತ್ತಿದೆ. ಈ ಮಧ್ಯೆ ಮಹಿಳಾ ಸಿಎಂ ಬಗ್ಗೆ ಕೋಡಿಮಠದ ಶ್ರೀಗಳ ಹೇಳಿಕೆ ಕೂಡ ವೈರಲ್​ ಆಗಿತ್ತು. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೋಡಿಮಠದ ಶ್ರೀಗಳ ಹೇಳಿಕೆ ಬಗ್ಗೆ ಗರಂ ಆಗಿದ್ದು, ಅದೇಲ್ಲ ನಗಣ್ಯ ಎಂದು ಹೇಳಿದ್ದಾರೆ.

ಹಾದಿ ಬೀದಿಯಲ್ಲಿ ಮಾತನಾಡುವ ವಿಷಯ ಅಲ್ಲ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಬಗ್ಗೆ ಸುಳ್ಳು ದಾಖಲೆ ಕೊಟ್ಟು ಬಿಜೆಪಿಯವರು ಏನೋ ಮಾಡುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ನಾವೆಲ್ಲ ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ ನಿಲ್ಲಬೇಕಿದೆ. ಇದೆಲ್ಲ ಬಾಲಿಷ ಅನಿಸುತ್ತದೆ. ಈ ವಿಚಾರವಾಗಿ ನಾನು ಏನೂ ಮಾತನಾಡಲು ಬಯಸಲ್ಲ ಎಂದಿದ್ದಾರೆ.

ಇದನ್ನೂ ಓದಿ: Kodi Mutt Swamiji: ರಾಜ್ಯ ಸರ್ಕಾರದ ಬಗ್ಗೆ ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತೇನೆ. ಪಕ್ಷದಲ್ಲಿ ಹೈಕಮಾಂಡ್, ಶಾಸಕಾಂಗ ಅಂತ ಇದೆ. ಆದರೆ ಇಂತಹ ವಿಚಾರವನ್ನು ಅಲ್ಲಿ, ಇಲ್ಲಿ ಗಲ್ಲಿಯಲ್ಲಿ ಮಾತನಾಡುವ ವಿಚಾರ ಅಲ್ಲ. ಧೀಮಂತ ನಾಯಕತ್ವ ನಮ್ಮ ಪಕ್ಷಕ್ಕೆ ಇದೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಗಟ್ಟಿಯಾಗಿ ಇರುತ್ತಾರೆ. ಸಿದ್ದರಾಮಯ್ಯ ಎಲ್ಲಿಯವರೆಗೆ ಗಟ್ಟಿಯಾಗಿ ಇರುತ್ತಾರೆ ಅಲ್ಲಿಯವರೆಗೆ ಅವರೇ ಸಿಎಂ. ಅಲ್ಲಿ ಇಲ್ಲಿ ಗಲ್ಲಿ, ಹಾದಿ ಬೀದಿಯಲ್ಲಿ ಮಾತನಾಡುವ ವಿಷಯ ಅಲ್ಲ. ಸಿದ್ದರಾಮಯ್ಯ ಎಲ್ಲಿಯವರೆಗೆ ಇರುತ್ತೇನೆ ಅಂತಾರೆ ಅಲ್ಲಿಯವರೆಗೆ ನಮ್ಮ ಬೆಂಬಲ ಅವರಿಗೆ ಇದೆ ಎಂದು ಖಡಕ್​ ಆಗಿ ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ

ಕಳೆದ ತಿಂಗಳು ಮಾತನಾಡಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಗಳು ರಾಜ್ಯದಲ್ಲಿ ಮುಂದಿನ ಸಿಎಂ ಮಹಿಳೆ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಇದರ ಬೆನ್ನಲ್ಲೇ ಇದೀಗ ಲಕ್ಷೀ ಹೆಬ್ಬಾಳ್ಕರ್​ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಮುಂದಿನ ಸಿಎಂ ಲಕ್ಷೀ ಹೆಬ್ಬಾಳ್ಕರ್​ ಎಂದು ಪೋಸ್ಟ್​ ಹರಿಬಿಟ್ಟಿದ್ದಾರೆ.​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್