ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವು
ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿದ್ದ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಮಹಿಳೆಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾತಪಾಳ್ಯ ನಿವಾಸಿ ವೆಂಕಟಲಕ್ಷ್ಮೀ ಮೃತ ಮಹಿಳೆ. ಹೊಟ್ಟೆಯಲ್ಲಿ ಗಡ್ಡೆ ಇರುವ ಕಾರಣ ಜಿಲ್ಲಾಸ್ಪತ್ರೆಯಲ್ಲಿ ಡಿಸೆಂಬರ್ 12ರಂದು ವೈದ್ಯ ಅರುಣ್ ಕುಮಾರ್ ವೆಂಕಟಲಕ್ಷ್ಮೀಗೆ ಶಸ್ತ್ರಚಿಕಿತ್ಸೆ ಮಾಡಿದ್ದರು. ಡಿಸೆಂಬರ್14ರಂದು ಮಹಿಳೆ ಅಸ್ವಸ್ಥಳಾದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದ್ರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ನಿನ್ನೆ ಸಂಜೆ ಮೃತಪಟ್ಟಿದ್ದಾರೆ. ಇದ್ರಿಂದ ಮೃತ […]
ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿದ್ದ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಮಹಿಳೆಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾತಪಾಳ್ಯ ನಿವಾಸಿ ವೆಂಕಟಲಕ್ಷ್ಮೀ ಮೃತ ಮಹಿಳೆ.
ಹೊಟ್ಟೆಯಲ್ಲಿ ಗಡ್ಡೆ ಇರುವ ಕಾರಣ ಜಿಲ್ಲಾಸ್ಪತ್ರೆಯಲ್ಲಿ ಡಿಸೆಂಬರ್ 12ರಂದು ವೈದ್ಯ ಅರುಣ್ ಕುಮಾರ್ ವೆಂಕಟಲಕ್ಷ್ಮೀಗೆ ಶಸ್ತ್ರಚಿಕಿತ್ಸೆ ಮಾಡಿದ್ದರು. ಡಿಸೆಂಬರ್14ರಂದು ಮಹಿಳೆ ಅಸ್ವಸ್ಥಳಾದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದ್ರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ನಿನ್ನೆ ಸಂಜೆ ಮೃತಪಟ್ಟಿದ್ದಾರೆ. ಇದ್ರಿಂದ ಮೃತ ಮಹಿಳೆಯ ಸಂಬಂಧಿಕರು ಸರ್ಕಾರಿ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳೆ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.