ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ವಿರುದ್ಧ ಕೊಲೆ ಆರೋಪ
ಹಾವೇರಿ: ಹಿರೇಕೆರೂರು ತಾಲೂಕಿನ ಕೋಡಮಗ್ಗಿ ಗ್ರಾಮದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆಯಾಗಿದೆ. 25 ವರ್ಷದ ಪ್ರಿಯಾಂಕಾ ನಾಯ್ಕ ಮೃತ ಮಹಿಳೆ. ಪತಿ ವಿಜಯ ನಾಯ್ಕ ಹಾಗೂ ಆತನ ಕುಟುಂಬಸ್ಥರು ಪ್ರಿಯಾಂಕಾರನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆಂದು ಪ್ರಿಯಾಂಕಾ ಕುಟುಂಬದವರು ಆರೋಪಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿಜಯ ನಾಯ್ಕ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಘಟನೆ ನಂತರ ವಿಜಯ ನಾಯ್ಕ ಮತ್ತು ಆತನ ಕುಟುಂಬದವರು ಮನೆಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಹಿರೇಕೆರೂರು […]
ಹಾವೇರಿ: ಹಿರೇಕೆರೂರು ತಾಲೂಕಿನ ಕೋಡಮಗ್ಗಿ ಗ್ರಾಮದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆಯಾಗಿದೆ. 25 ವರ್ಷದ ಪ್ರಿಯಾಂಕಾ ನಾಯ್ಕ ಮೃತ ಮಹಿಳೆ.
ಪತಿ ವಿಜಯ ನಾಯ್ಕ ಹಾಗೂ ಆತನ ಕುಟುಂಬಸ್ಥರು ಪ್ರಿಯಾಂಕಾರನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆಂದು ಪ್ರಿಯಾಂಕಾ ಕುಟುಂಬದವರು ಆರೋಪಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿಜಯ ನಾಯ್ಕ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಘಟನೆ ನಂತರ ವಿಜಯ ನಾಯ್ಕ ಮತ್ತು ಆತನ ಕುಟುಂಬದವರು ಮನೆಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.