
ಬೆಂಗಳೂರು, ಅಕ್ಟೋಬರ್ 22: ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ(GangRape) ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿ ಮನೆಗೆ ನುಗ್ಗಿ ಮೂವರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ. ಮಹಿಳೆ ವಾಸವಿದ್ದ ಬಾಡಿಗೆ ಮನೆಯಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆದಿದೆ. ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆರೋಪಿಗಳು ಅಪರಾಧ ಎಸಗುವ ಮುನ್ನ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಯುವಕರು ಪ್ರಕರಣ ನಂತರ ನಾಪತ್ತೆಯಾಗಿದ್ದಾರೆ, ಅವರನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ. ಮಹಿಳೆಗೂ ಹಾಗೂ ಈ ಯುವಕರಿಗೂ ಮೊದಲೇ ಪರಿಚಯವಿತ್ತೇ ಎನ್ನುವುದಿನ್ನೂ ದೃಢಪಟ್ಟಿಲ್ಲ.ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:09 pm, Wed, 22 October 25