ರೈಲಿನಲ್ಲೇ ಡೆಲಿವರಿ, ಹೆರಿಗೆ ಮಾಡಿಸಿದ ಅಂಗನವಾಡಿ ಕಾರ್ಯಕರ್ತೆಯರು
ಯಾದಗಿರಿ: ಚಲಿಸುತ್ತಿರುವ ರೈಲಿನಲ್ಲಿ ಮಗುವಿಗೆ ಮಹಿಳೆಯೊಬ್ಬರು ಜನ್ಮ ನೀಡಿರುವ ಘಟನೆ ನಡೆದಿದೆ. ಸೈದಾಪುರ ನಿವಾಸಿ ಗೀತಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪತಿ ಜೊತೆ ರೈಲಿನಲ್ಲಿ ಬೆಂಗಳೂರಿಗೆ ಗೀತಾ ಹೊರಟಿದ್ದರು. ಪ್ರಯಾಣದ ಮಾರ್ಗ ಮಧ್ಯೆ ಗೀತಾಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ಬೋಗಿಯಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಹೊರಟಿದ್ದರು. ಕೂಡಲೆ ಗೀತಾಗೆ ಅಂಗನವಾಡಿ ಕಾರ್ಯಕರ್ತೆಯರು ಹೆರಿಗೆ ಮಾಡಿಸಿದ್ದಾರೆ. ಸದ್ಯ ಗೀತಾ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.
ಯಾದಗಿರಿ: ಚಲಿಸುತ್ತಿರುವ ರೈಲಿನಲ್ಲಿ ಮಗುವಿಗೆ ಮಹಿಳೆಯೊಬ್ಬರು ಜನ್ಮ ನೀಡಿರುವ ಘಟನೆ ನಡೆದಿದೆ. ಸೈದಾಪುರ ನಿವಾಸಿ ಗೀತಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಪತಿ ಜೊತೆ ರೈಲಿನಲ್ಲಿ ಬೆಂಗಳೂರಿಗೆ ಗೀತಾ ಹೊರಟಿದ್ದರು. ಪ್ರಯಾಣದ ಮಾರ್ಗ ಮಧ್ಯೆ ಗೀತಾಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ಬೋಗಿಯಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಹೊರಟಿದ್ದರು. ಕೂಡಲೆ ಗೀತಾಗೆ ಅಂಗನವಾಡಿ ಕಾರ್ಯಕರ್ತೆಯರು ಹೆರಿಗೆ ಮಾಡಿಸಿದ್ದಾರೆ. ಸದ್ಯ ಗೀತಾ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.
Published On - 12:10 pm, Tue, 10 December 19