ಆಂಬ್ಯುಲೆನ್ಸ್​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಶುಶ್ರೂಕಿ, ಚಾಲಕ ಸಮಯಪ್ರಜ್ಞೆಗೆ ಶ್ಲಾಘನೆ

ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಬೆಳಗೋಡು ಗ್ರಾಮದ ಮಹಿಳೆಯನ್ನ ಹೆರಿಗೆಗೆಂದು 108 ಆಂಬ್ಯುಲೆನ್ಸ್​ನಲ್ಲಿ ಮೂಡಿಗೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 108 ಆಂಬ್ಯುಲೆನ್ಸ್​ನಲ್ಲಿ ಮಹಿಳೆಯ ಜೊತೆಗಿದ್ದ ಶುಶ್ರೂಕಿ ಮಂಜುಳಾ ಮತ್ತು ಚಾಲಕ ಗಂಗಾಧರ್ ಅವರ ಸಮಯ ಹಾಗೂ ಕರ್ತವ್ಯಪ್ರಜ್ಞೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಆಂಬ್ಯುಲೆನ್ಸ್​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಶುಶ್ರೂಕಿ, ಚಾಲಕ ಸಮಯಪ್ರಜ್ಞೆಗೆ ಶ್ಲಾಘನೆ
ಆಂಬ್ಯುಲೆನ್ಸ್​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
Follow us
TV9 Web
| Updated By: ಆಯೇಷಾ ಬಾನು

Updated on: Dec 31, 2023 | 8:36 AM

ಚಿಕ್ಕಮಗಳೂರು, ಡಿ. 31: ತುಂಬುಗರ್ಭಿಣಿಯನ್ನು ಹೆರಿಗೆಗೆಂದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಆಕೆ ಆಂಬ್ಯುಲೆನ್ಸ್​ನಲ್ಲೇ (Ambulance) ಗಂಡು ಮಗುವಿಗೆ ಜನ್ಮ (Birth) ನೀಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ. ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಬೆಳಗೋಡು ಗ್ರಾಮದ ಮಹಿಳೆಯನ್ನ ಹೆರಿಗೆಗೆಂದು 108 ಆಂಬ್ಯುಲೆನ್ಸ್​ನಲ್ಲಿ ಮೂಡಿಗೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಬೆಳಗೋಡು ಗ್ರಾಮದ ಮಹಿಳೆಯನ್ನ 108 ಆಂಬ್ಯುಲೆನ್ಸ್​ನಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆ ತಲುಪಲು ಇನ್ನೂ 15 ಕಿ.ಮೀ. ದೂರವಿರುವಾಗಲೇ ಆಕೆಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಗಂಗಾಧರನಾಯ್ಕ ವಾಹನವನ್ನು ಅತಿವೇಗವಾಗಿ ಚಲಾಯಿಸಿದ್ದಾರೆ. ಆದರೆ, ಗರ್ಭೀಣಿ ಮಹಿಳೆಯನ್ನ ಆಸ್ಪತ್ರೆಗೆ ತಲುಪಿಸಲು ಮುಂದಾದರೂ ನೋವು ತಡೆಯಲಾಗದೆ ಮಹಿಳೆ ಕೂಗಾಡಿದ್ದಾಳೆ. ಆಗ ಬೇರೆ ದಾರಿ ಕಾಣದೆ ಶುಶ್ರೂಕಿ ಮಂಜುಳಾ ಆಂಬ್ಯುಲೆನ್ಸ್​ನಲ್ಲೇ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆ ಮಗುವಿಗೆ ಜನ್ಮ ನೀಡುತ್ತಿದ್ದಂತೆ ಚಾಲಕ ವಾಹನವನ್ನು ನಿಲ್ಲಿಸಿದ್ದು ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ಸಾಗಿಸಲಾಗಿತು. ತಾಯಿ ಮಗು ಆರೋಗ್ಯವಾಗಿದ್ದಾರೆಂದು ಮಹಿಳೆಯ ಜೊತೆಗಿದ್ದ ಅವರ ಪತಿ ಮಾಹಿತಿ ನೀಡಿದ್ದಾರೆ. 108 ಆಂಬ್ಯುಲೆನ್ಸ್​ನಲ್ಲಿ ಮಹಿಳೆಯ ಜೊತೆಗಿದ್ದ ಶುಶ್ರೂಕಿ ಮಂಜುಳಾ ಮತ್ತು ಚಾಲಕ ಗಂಗಾಧರ್ ಅವರ ಸಮಯ ಹಾಗೂ ಕರ್ತವ್ಯಪ್ರಜ್ಞೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಸಜ್ಜಾದ ಹುಬ್ಬಳ್ಳಿ: ಮೋಜು ಮಸ್ತಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸ್​ ಇಲಾಖೆ

ಸಫಾರಿ ವೇಳೆ ಹುಲಿ, ಆನೆ ಮರಿ ದರ್ಶನ

ಕಬಿನಿ ಹಿನ್ನೀರಿನ ಸಫಾರಿ ವೇಳೆ ಹುಲಿ, ಆನೆ ಮರಿ ದರ್ಶನವಾಗಿದೆ. ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರು ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಹುಲಿ, ಆನೆ ಮರಿ ವಿಹಾರ ಮಾಡ್ತಿದ್ವು. ಹುಲಿಯೂ ಹೊಂಡದಲ್ಲಿ ನೀರು ಕುಡಿಯುತ್ತಿತ್ತು. ಅತ್ತ ಆನೆಯೂ ಮರಿ ಜೊತೆ ವಾಕಿಂಗ್ ಮಾಡ್ತಿತ್ತು. ಈ ಅಪರೂಪದ ದೃಶ್ಯಗಳನ್ನ ಪ್ರವಾಸಿಗರು ಮೊಬೈಲ್‌ನಲ್ಲಿ ಸೆರೆಹಿಡಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ