ಚಿಕ್ಕಮಗಳೂರು, ಡಿ. 31: ತುಂಬುಗರ್ಭಿಣಿಯನ್ನು ಹೆರಿಗೆಗೆಂದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಆಕೆ ಆಂಬ್ಯುಲೆನ್ಸ್ನಲ್ಲೇ (Ambulance) ಗಂಡು ಮಗುವಿಗೆ ಜನ್ಮ (Birth) ನೀಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ. ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಬೆಳಗೋಡು ಗ್ರಾಮದ ಮಹಿಳೆಯನ್ನ ಹೆರಿಗೆಗೆಂದು 108 ಆಂಬ್ಯುಲೆನ್ಸ್ನಲ್ಲಿ ಮೂಡಿಗೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಳಗೋಡು ಗ್ರಾಮದ ಮಹಿಳೆಯನ್ನ 108 ಆಂಬ್ಯುಲೆನ್ಸ್ನಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆ ತಲುಪಲು ಇನ್ನೂ 15 ಕಿ.ಮೀ. ದೂರವಿರುವಾಗಲೇ ಆಕೆಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಗಂಗಾಧರನಾಯ್ಕ ವಾಹನವನ್ನು ಅತಿವೇಗವಾಗಿ ಚಲಾಯಿಸಿದ್ದಾರೆ. ಆದರೆ, ಗರ್ಭೀಣಿ ಮಹಿಳೆಯನ್ನ ಆಸ್ಪತ್ರೆಗೆ ತಲುಪಿಸಲು ಮುಂದಾದರೂ ನೋವು ತಡೆಯಲಾಗದೆ ಮಹಿಳೆ ಕೂಗಾಡಿದ್ದಾಳೆ. ಆಗ ಬೇರೆ ದಾರಿ ಕಾಣದೆ ಶುಶ್ರೂಕಿ ಮಂಜುಳಾ ಆಂಬ್ಯುಲೆನ್ಸ್ನಲ್ಲೇ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆ ಮಗುವಿಗೆ ಜನ್ಮ ನೀಡುತ್ತಿದ್ದಂತೆ ಚಾಲಕ ವಾಹನವನ್ನು ನಿಲ್ಲಿಸಿದ್ದು ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ಸಾಗಿಸಲಾಗಿತು. ತಾಯಿ ಮಗು ಆರೋಗ್ಯವಾಗಿದ್ದಾರೆಂದು ಮಹಿಳೆಯ ಜೊತೆಗಿದ್ದ ಅವರ ಪತಿ ಮಾಹಿತಿ ನೀಡಿದ್ದಾರೆ. 108 ಆಂಬ್ಯುಲೆನ್ಸ್ನಲ್ಲಿ ಮಹಿಳೆಯ ಜೊತೆಗಿದ್ದ ಶುಶ್ರೂಕಿ ಮಂಜುಳಾ ಮತ್ತು ಚಾಲಕ ಗಂಗಾಧರ್ ಅವರ ಸಮಯ ಹಾಗೂ ಕರ್ತವ್ಯಪ್ರಜ್ಞೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.
ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಸಜ್ಜಾದ ಹುಬ್ಬಳ್ಳಿ: ಮೋಜು ಮಸ್ತಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ
ಕಬಿನಿ ಹಿನ್ನೀರಿನ ಸಫಾರಿ ವೇಳೆ ಹುಲಿ, ಆನೆ ಮರಿ ದರ್ಶನವಾಗಿದೆ. ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರು ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಹುಲಿ, ಆನೆ ಮರಿ ವಿಹಾರ ಮಾಡ್ತಿದ್ವು. ಹುಲಿಯೂ ಹೊಂಡದಲ್ಲಿ ನೀರು ಕುಡಿಯುತ್ತಿತ್ತು. ಅತ್ತ ಆನೆಯೂ ಮರಿ ಜೊತೆ ವಾಕಿಂಗ್ ಮಾಡ್ತಿತ್ತು. ಈ ಅಪರೂಪದ ದೃಶ್ಯಗಳನ್ನ ಪ್ರವಾಸಿಗರು ಮೊಬೈಲ್ನಲ್ಲಿ ಸೆರೆಹಿಡಿದ್ರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ