AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ರೆಸಾರ್ಟ್​ನಲ್ಲಿ ರೇವ್ ಪಾರ್ಟಿ; ಮಹಿಳಾ ಕಾನ್ಸ್ಟೇಬಲ್ ಅಮಾನತು

ಕೊರೊನ ಹಿನ್ನೆಲೆಯಲ್ಲಿ ರಾಜ್ಯದ 8 ನಗರಗಳಲ್ಲಿ ನೈಟ್ ಕರ್ಫ್ಯೂ ಇದ್ದುದರಿಂದ ನೈಟ್ ಪಾರ್ಟಿ ಮಾಡಲು ಹಾಸನದತ್ತ ಮುಖ ಮಾಡಿದ್ದರು. ಏಪ್ರಿಲ್10 ರಂದು ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೈದೂರು ಗ್ರಾಮದ ರೆಸಾರ್ಟ್ ಮೇಲೆ ಎಸ್ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಹಾಸನ ರೆಸಾರ್ಟ್​ನಲ್ಲಿ ರೇವ್ ಪಾರ್ಟಿ; ಮಹಿಳಾ ಕಾನ್ಸ್ಟೇಬಲ್ ಅಮಾನತು
ಮಹಿಳಾ ಕಾನ್ಸ್ಟೇಬಲ್ ಶ್ರೀಲತಾ ಮತ್ತು ಶ್ರೀಲತಾ ಪುತ್ರ ಅತುಲ್
sandhya thejappa
| Edited By: |

Updated on: Apr 18, 2021 | 12:11 PM

Share

ಹಾಸನ: ರೆಸಾರ್ಟ್​ನಲ್ಲಿ ನಡೆದ ರೇವ್ ಪಾರ್ಟಿ ವಿಚಾರಕ್ಕೆ ಸಂಬಂಧಿಸಿ ಆರೋಪಿ ಮಹಿಳಾ ಪೊಲೀಸ್ ಸಿಬ್ಬಂದಿ ಶ್ರೀಲತಾ ಅಮಾನತುಗೊಂಡಿದ್ದಾರೆ. ಮಂಗಳೂರಿನ ಎಕನಾಮಿಕ್ ಮತ್ತು ನಾರ್ಕೋಟಿಕ್ ಠಾಣೆಯ ಮಹಿಳಾ ಹೆಡ್ ಕಾನ್ಸ್ಟೇಬಲ್ ಶ್ರೀಲತಾ ಮಗನ ವಿರುದ್ಧ ಪಾರ್ಟಿ ಆಯೋಜನೆ ಆರೋಪ ಕೇಳಿಬಂದ ಕಾರಣ ಶ್ರೀಲತಾ ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಕೊರೊನ ಹಿನ್ನೆಲೆಯಲ್ಲಿ ರಾಜ್ಯದ 8 ನಗರಗಳಲ್ಲಿ ನೈಟ್ ಕರ್ಫ್ಯೂ ಇದ್ದುದರಿಂದ ನೈಟ್ ಪಾರ್ಟಿ ಮಾಡಲು ಹಾಸನದತ್ತ ಮುಖ ಮಾಡಿದ್ದರು. ಏಪ್ರಿಲ್10 ರಂದು ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೈದೂರು ಗ್ರಾಮದ ರೆಸಾರ್ಟ್ ಮೇಲೆ ಎಸ್ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆದಿತ್ತು. ರೇವ್ ಪಾರ್ಟಿ ನಡೆಯುವ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಲಾಗಿತ್ತು. ದಾಳಿ ವೇಳೆ ಡ್ರಗ್ಸ್, ಗಾಂಜಾ ಪತ್ತೆಯಾಗಿತ್ತು. ಘಟನೆಯಲ್ಲಿ 24 ಮಹಿಳೆಯರು ಸೇರಿ 134 ಜನರನ್ನು ಬಂಧಿಸಿದ್ದರು.

ಈ ವೇಳೆ ಮಂಗಳೂರಿನ ಸೈಬರ್ ಕ್ರೈಂ ಮಹಿಳಾ ಕಾನ್ಸ್ಟೇಬಲ್ ಶ್ರೀಲತಾರವರನ್ನು ಕೂಡ ಬಂಧಿಸಲಾಗಿತ್ತು. ಬಂಧನದ ನಂತರ ಶ್ರೀಲತಾ ಪುತ್ರ ಅತುಲ್ ಈ ರೇವ್ ಪಾರ್ಟಿಯ ಪ್ರಮುಖ ಆರೋಪಿ ಎನ್ನುವ ವಿಚಾರ ಬೆಳಕಿಗೆ ಬಂದಿತ್ತು. ಪಾರ್ಟಿ ಹಿಂದೆ ಪೊಲೀಸ್ ಸಿಬ್ಬಂದಿಯ ಬೆಂಬಲ ಇರುವ ಬಗ್ಗೆಯೂ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಕಾನ್ಸ್ಟೇಬಲ್ ಶ್ರೀಲತಾ ಅಮಾನತು ಮಾಡಲಾಗಿದೆ. ವಶಕ್ಕೆ ಪಡೆಯಲಾಗಿದ್ದ 134 ಜನರ ರಕ್ತದ ಮಾದರಿ ಸಂಗ್ರಹಿಸಿ ಫೊರಾನ್ಸಿಕ್ ಲ್ಯಾಬ್​ಗೆ ಕಳುಹಿಸಲಾಗಿದ್ದು, ವರದಿಗಾಗಿ  ಪೊಲೀಸರು ನಿರೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ

ನೈಟ್​ ಕರ್ಫ್ಯೂ; ಪಾರ್ಟಿ ಮಾಡಲು ಹಾಸನ ಎಸ್ಟೇಟ್​ಗೆ ಹೋಗಿದ್ದ 150 ಜನರು ಪೊಲೀಸರ ವಶಕ್ಕೆ!

ಕೊರೊನಾ ಶಂಕಿತ ರೋಗಿಗಳಿಗೆ ಸಂಭಾವ್ಯ ಕೊವಿಡ್ ರೋಗಿಗಳು ಎಂದು ಪರಿಗಣಿಸಿ ಚಿಕಿತ್ಸೆ ನೀಡಲಿದೆ ಉತ್ತರ ಪ್ರದೇಶ ಸರ್ಕಾರ

(Woman Head constable has been suspended over a rave party issue at Hassan Resort)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!