ಜಿಲ್ಲಾಸ್ಪತ್ರೆ ವಾರ್ಡ್ ಮುಂದೆಯೇ ಹೆರಿಗೆ, ಮಗು ಸಾವು; ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಹೃದಯ ವಿದ್ರಾವಕ ಘಟನೆ

ಎರಡು ಗಂಟೆಗಳ ಕಾಲ ನರಳಾಡಿದ್ದ ಗರ್ಭಿಣಿಗೆ ಕೊನೆಗೆ ನಿಂತಿದ್ದ ಸ್ಥಳದಲ್ಲೇ ಹೆರಿಗೆಯಾಗಿದೆ. ಆದರೆ ಹುಟ್ಟಿದ ಮಗು ಸಾವನ್ನಪ್ಪಿದೆ. ಗರ್ಭಿಣಿ ಮಹಿಳೆಗೆ ಬೆಳಿಗ್ಗೆ 6 ಗಂಟೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಕೆಯ ಪೋಷಕರು ಸುಮಾರು 8 ಗಂಟೆಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಜಿಲ್ಲಾಸ್ಪತ್ರೆ ವಾರ್ಡ್ ಮುಂದೆಯೇ ಹೆರಿಗೆ, ಮಗು ಸಾವು; ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಹೃದಯ ವಿದ್ರಾವಕ ಘಟನೆ
ಹೆರಿಗೆ ನೋವಿನಿಂದ ವಾರ್ಡ್ ಮುಂದೆ ಪರದಾಡಿದ ಸೋನು
Follow us
sandhya thejappa
|

Updated on: May 26, 2021 | 12:28 PM

ಮಂಡ್ಯ: ಜಿಲ್ಲಾಸ್ಪತ್ರೆ ವಾರ್ಡ್ ಮುಂದೆಯೇ ಮಹಿಳೆಯೊಬ್ಬರಿಗೆ ಹೆರಿಗೆಯಾಗಿದೆ. ಆದರೆ ಮಗು ಸಾವನ್ನಪ್ಪಿದ್ದು, ಈ ಹೃದಯ ವಿದ್ರಾವಕ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೆರಿಗೆ ನೋವು ಹಿನ್ನೆಲೆ ಸೋನು ಎಂಬ ಮಹಿಳೆ ಆಸ್ಪತ್ರೆಗೆ ಹೋಗಿದ್ದರು. ಕೊವಿಡ್ ಟೆಸ್ಟ್ ವರದಿ ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿಲ್ಲ. ಸುಮಾರು 2 ಗಂಟೆಗಳ ಕಾಲ ವಾರ್ಡ್ ಮುಂದೆ ಗರ್ಭಿಣಿ ನರಳಾಟ ಪಟ್ಟಿದ್ದಾರೆ.

ಎರಡು ಗಂಟೆಗಳ ಕಾಲ ನರಳಾಡಿದ್ದ ಗರ್ಭಿಣಿಗೆ ಕೊನೆಗೆ ನಿಂತಿದ್ದ ಸ್ಥಳದಲ್ಲೇ ಹೆರಿಗೆಯಾಗಿದೆ. ಆದರೆ ಹುಟ್ಟಿದ ಮಗು ಸಾವನ್ನಪ್ಪಿದೆ. ಗರ್ಭಿಣಿ ಮಹಿಳೆಗೆ ಬೆಳಿಗ್ಗೆ 6 ಗಂಟೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಕೆಯ ಪೋಷಕರು ಸುಮಾರು 8 ಗಂಟೆಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. 2 ಗಂಟೆ ಕಾದರು ಆಸ್ಪತ್ರೆ ಸಿಬ್ಬಂದಿ ದಾಖಲು ಮಾಡಿಕೊಂಡಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ಮಗು ಸಾವನ್ನಪ್ಪಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊವಿಡ್​ನಿಂದ ಬಳಲುತ್ತಿದ್ದ ಗರ್ಭಿಣಿ ಹೆರಿಗೆ ಬಳಿಕ ಸಾವು ಜಿಲ್ಲೆಯ ಮದ್ದೂರು ತಾಲೂಕಿನ ಅರೆತಿಪ್ಪೂರು ನಿವಾಸಿಯಾದ ಗುಣಶ್ರೀ ಕೊವಿಡ್ನಿಂದ ಬಳಲುತ್ತಿದ್ದರು. ಕೊವಿಡ್ನಿಂದ ಬಳಲುತ್ತಿದ್ದ ಗರ್ಭಿಣಿ ಗುಣಶ್ರೀ ಹೆರಿಗೆ ಬಳಿಕ ಸಾವನ್ನಪ್ಪಿದ್ದಾರೆ. ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲ ಗಂಟೆಗಳಲ್ಲೇ ಮಹಿಳೆ ಕೊನೆಯುಸಿರೆಳೆದಿದ್ದಾರೆ. ಅರೆತಿಪ್ಪೂರಿನ ಮನೋಹರಗೌಡ ಎಂಬುವವರಿಗೆ ಗುಣಶ್ರೀಯನ್ನು ಮದುವೆ ಮಾಡಿಕೊಡಲಾಗಿತ್ತು. ಮಳವಳ್ಳಿಯ ಶಾಂತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿಯಾಗಿದ್ದರು. ಮದುವೆಯಾಗಿ 4 ವರ್ಷಗಳಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಏಳೂವರೆ ತಿಂಗಳ ಗರ್ಭಿಣಿಯಾಗಿದ್ದ ಗುಣಶ್ರೀ ಅವರಿಗೆ ಇತ್ತಿಚೆಗೆ ಕೊರೋನಾ ಸೋಂಕು ತಗುಲಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ

ವೈದ್ಯರ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಗೋಪಾಲಯ್ಯ ಚಾಲನೆ, ಹಳ್ಳಿಗಳತ್ತ ಹೊರಟ ವೈದ್ಯರು

ತೋಟದಲ್ಲಿ ವಶಪಡಿಸಿಕೊಂಡ ಚಿಕನ್ ಟಿಕ್ಕ ಸವಿದ ಪೊಲೀಸರು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

(woman in front of district hospital ward is giving birth but baby is death at mandya)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?