ಬೆಂಗಳೂರು: ನೈಸ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಗೆ ಬಂದಿದೆ.ಅಪಘಾತದ ರಭಸಕ್ಕೆ ಸ್ವಿಫ್ಟ್ ಕಾರಿನಲ್ಲಿದ್ದ ಮಹಿಳೆ ಶಶಿಕಲಾ(49) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು, ಅಪಘಾತದಲ್ಲಿ ಶಶಿಕಲಾ ಪತಿ ಗಂಗಾಧರಯ್ಯಗೆ ಗಾಯಗಳಾಗಿದೆ. ನಿಲ್ಲಿಸಿದ್ದ ಸ್ವಿಫ್ಟ್ ಕಾರ್ಗೆ ಜಾಗ್ವಾರ್ ಕಾರು ಡಿಕ್ಕಿ ಹೊಡೆದ ಬಳಿಕ ಸ್ವಿಫ್ಟ್ ಕಾರ್ ಲಾರಿಯೊಂದಕ್ಕೆ ಡಿಕ್ಕಿಯಾಗಿದೆ. ಈ ವೇಳೆ, ವೈಕುಂಠ ಏಕಾದಶಿ ಪೂಜೆಗೆಂದು ತೆರಳುತ್ತಿದ್ದ ಶಶಿಕಲಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸದ್ಯ, ಅಪಘಾತದ ಬಳಿಕ ಜಾಗ್ವಾರ್ ಕಾರ್ನಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ.