ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆಗಳು ಮೊಳಗುತ್ತಿವೆ. ನಿನ್ನೆ ಫ್ರೀಡಂ ಪಾರ್ಕ್ನಲ್ಲಿ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ದೇಶದ್ರೋಹಿ ಘೋಷಣೆ ಕೂಗಿ ಅಮೂಲ್ಯಾ ಎಂಬ ಯುವತಿ ಶಿಕ್ಷೆಗೆ ಒಳಗಾಗಿದ್ದಾಳೆ. ಆದರೆ ಇಂದು ಟೌನ್‌ಹಾಲ್‌ನಲ್ಲಿ ಮತ್ತೆ ಪಾಕಿಸ್ತಾನ ಪರ ಘೋಷಣೆ ಕೇಳಿ ಬಂದಿದೆ.
ಅಮೂಲ್ಯಾ ಪಾಕ್ ಪರ ಘೋಷಣೆ ಖಂಡಿಸಿ ಇಂದು ಟೌನ್‌ಹಾಲ್‌ನಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದವು. ಈ ವೇಳೆ ಏಕಾಏಕಿ ಅಪ್ರಾಪ್ತೆಯೊಬ್ಬಳು ಕಾಶ್ಮೀರ ಮತ್ತು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಳೆ. ಸದ್ಯ ಘೋಷಣೆ ಕೂಗಿದ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Published On - 1:11 pm, Fri, 21 February 20