AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸಿಗಂದೂರು ಲಾಂಚ್ ಚಲಿಸುವಾಗಲೇ ಶರಾವತಿ ನದಿಗೆ ಜಿಗಿದ ಮಹಿಳೆ; ವೀರೋಚಿತ ರಕ್ಷಣೆ

ಸ್ವಿಫ್ಟ್​ ಕಾರಿನಲ್ಲಿ ಏಕಾಂಗಿಯಾಗಿ ಸಿಗಂದೂರಿಗೆ ಬಂದಿದ್ದ ಮಹಿಳೆ ಸಿಗಂದೂರು ಚೌಡೇಶ್ವರಿ ದರ್ಶನ ಪಡೆದಿದ್ದಾರೆ. ಆದರೆ ಯಾರೂ ಎಣಿಸದ ರೀತಿಯಲ್ಲಿ ಲಾಂಚ್​ನಲ್ಲಿ ತೆರಳುವಾಗ ಏಕಾಏಕಿ ನದಿಗೆ ಹಾರಿದ್ದಾರೆ.

Viral News: ಸಿಗಂದೂರು ಲಾಂಚ್ ಚಲಿಸುವಾಗಲೇ ಶರಾವತಿ ನದಿಗೆ ಜಿಗಿದ ಮಹಿಳೆ; ವೀರೋಚಿತ ರಕ್ಷಣೆ
ನದಿಗೆ ಜಿಗಿದ ಮಹಿಳೆಯನ್ನು ರಕ್ಷಿಸಲಾಗಿದೆ.
TV9 Web
| Edited By: |

Updated on: Jun 27, 2021 | 10:44 PM

Share

ಶಿವಮೊಗ್ಗ: ಸಿಂಗಂದೂರು ಲಾಂಚ್ ಚಲಿಸುತ್ತಿರುವಾಗಲೇ ಮಹಿಳೆಯೋರ್ವಳು ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಶರಾವತಿ ಹಿನ್ನೀರಿನ ಹೊಳೆಬಾಗಿಲಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕರೂರು ಗ್ರಾಮದ ರೇಣುಕಾ (48) ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಅವರನ್ನು ತಕ್ಷಣವೇ ಜಾಗೃತಗೊಂಡ ಲಾಂಚ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಈವರೆಗೂ ಇಂತಹದ್ದೊಂದು ಘಟನೆ ಸಿಗಂದೂರು ಲಾಂಜ್​ನಲ್ಲಿ ನಡೆದಿರಲಿಲ್ಲ ಎಂದು ಸ್ಥಳೀಯರಾದ ಜಿ. ಟಿ ಸತ್ಯನಾರಾಯಣ ಎಂಬುವವರು ಹಂಚಿಕೊಂಡಿದ್ದಾರೆ.

ಸ್ವಿಫ್ಟ್​ ಕಾರಿನಲ್ಲಿ ಏಕಾಂಗಿಯಾಗಿ ಸಿಗಂದೂರಿಗೆ ಬಂದಿದ್ದ ಮಹಿಳೆ ಸಿಗಂದೂರು ಚೌಡೇಶ್ವರಿ ದರ್ಶನ ಪಡೆದಿದ್ದಾರೆ. ಆದರೆ ಯಾರೂ ಎಣಿಸದ ರೀತಿಯಲ್ಲಿ ಲಾಂಚ್​ನಲ್ಲಿ ತೆರಳುವಾಗ ಏಕಾಏಕಿ ನದಿಗೆ ಹಾರಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆತ್ಮಹತ್ಯೆ ಕ್ಷಣದಲ್ಲಿ ಸಮಯ ಪ್ರಜ್ಞೆ ಮೆರೆದು ಲಾಂಚ್​ನ್ನು ನಿಯಂತ್ರಣ ತೆಗೆದುಕೊಂಡು ಲಾಂಚ್ ಸಿಬ್ಬಂದಿಗಳಾದ ಗಜಕೋಶ, ಮಂಜುನಾಥ, ಬಲರಾಮ, ಜಗದೀಶ್ ಅವರುಗಳು ಅತಿ ಹತ್ತಿರ ಕ್ರಮಿಸಿ ಸುರಕ್ಷಿತ ಸಾಧನ ತಲುಪಿಸಿದ್ದಾರೆ. ಜತೆಗೆ ನದಿಗೆ ಹಾರಿ ಕೊನೆ ಕ್ಷಣದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಸ್ಥಳೀಯ ಯುವಕ ಪ್ರಕಾಶ್ ಬೆಳಮಕ್ಕಿ, ಪ್ರಶಾಂತ್ ಸಿಗಂದೂರು, ಸುಧಾಕರ್ ಮುಂತಾದವರು ಮಹಿಳೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: 

ಪ್ರವಾಸಿಗರಿಗಾಗಿ ಹೊನ್ನಾವರ-ಗೇರಸೊಪ್ಪಾ ಜಲಯಾನ ಯೋಜನೆ; ಇತಿಹಾಸದ ಕಾಲಗರ್ಭದಿಂದ ಇಲ್ಲಿಯವರೆಗೆ..

ವಿಯೆಟ್ನಾಂ ಯೋಗ: ಬುದ್ಧನ ನಾಡಲ್ಲಿ ಯೋಗ ಕಲಿಸುವ ಕರ್ನಾಟಕದ ಯೋಗ ಶಿಕ್ಷಕರು ಬರೆಯುತ್ತಾರೆ..

(Woman tries to suicide in Sigandur launch in Sharavati river)

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್