AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಚೇರಿಯಲ್ಲಿ ಚೆನ್ನರಾಜ್‌ ಹಟ್ಟಿಹೊಳಿ ದರ್ಪ; ಕಾಂಗ್ರೆಸ್‌ನ ಸಂಸ್ಕಾರವೇ ಇಷ್ಟು ಎಂದ ಬಿಜೆಪಿ

ಚೆನ್ನರಾಜ್ ಹಟ್ಟಿಹೊಳಿ ದರ್ಪ ತೋರಿದ ಬಗ್ಗೆ ಕಿಡಿಕಾರಿರುವ ಬಿಜೆಪಿ, ಕಾಂಗ್ರೆಸ್‌ನ ಸಂಸ್ಕಾರವೇ ಇಷ್ಟು ಎಂಬುದು ಮತ್ತೆ ಸಾಬೀತಾಗಿದೆ ಎಂದು ಬಿಜೆಪಿ ಟೀಕಿಸಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಚೇರಿಯಲ್ಲಿ ಚೆನ್ನರಾಜ್‌ ಹಟ್ಟಿಹೊಳಿ ದರ್ಪ; ಕಾಂಗ್ರೆಸ್‌ನ ಸಂಸ್ಕಾರವೇ ಇಷ್ಟು ಎಂದ ಬಿಜೆಪಿ
ಲಕ್ಷ್ಮೀ ಹೆಬ್ಬಾಳ್ಕರ್
Ganapathi Sharma
|

Updated on: Jun 09, 2023 | 4:13 PM

Share

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕಚೇರಿಯಲ್ಲಿ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಚೆನ್ನರಾಜ್‌ ಹಟ್ಟಿಹೊಳಿ ಮಾಧ್ಯಮದವರ ಜತೆ ದರ್ಪ ಪ್ರದರ್ಶಿಸಿದ್ದು ಟೀಕೆಗೆ ಗುರಿಯಾಗಿದೆ. ಇದೀಗ ಆ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್‌ನ ಸಂಸ್ಕಾರವೇ ಇಷ್ಟು ಎಂದು ಟೀಕಿಸಿದೆ. ವಿಧಾನಸೌಧದ ಸಚಿವರ ಕಚೇರಿಯಲ್ಲಿ ಕುಳಿತು ಎಂಎಲ್​​ಸಿ ಚೆನ್ನರಾಜ್ ಹಟ್ಟಿಹೊಳಿ, ಗ್ಯಾರಂಟಿ ಯೋಜನೆಗಳ ಕುರಿತಾದ ಅನುಮಾನಗಳನ್ನು ಬಗೆಹರಿಸಿಕೊಳ್ಳುವುದಕ್ಕಾಗಿ ತೆರಳಿದ್ದ ಮಾಧ್ಯಮದವರ ಜತೆ ಅಹಂಕಾರದಿಂದ ವರ್ತಿಸಿದ್ದರು.

ಚೆನ್ನರಾಜ್ ಹಟ್ಟಿಹೊಳಿ ದರ್ಪ ತೋರಿದ ಬಗ್ಗೆ ಕಿಡಿಕಾರಿರುವ ಬಿಜೆಪಿ, ಕಾಂಗ್ರೆಸ್‌ನ ಸಂಸ್ಕಾರವೇ ಇಷ್ಟು ಎಂಬುದು ಮತ್ತೆ ಸಾಬೀತಾಗಿದೆ. ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರಧಾನಿ ಕಾರ್ಯಾಲಯವನ್ನು ರಾಬರ್ಟ್‌ ವಾದ್ರಾ ಅವರಿಗೆ ಸಮರ್ಪಿಸಿದ್ದರು. ಈಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಚೇರಿಯು ಅವರ ಸಹೋದರ ಚೆನ್ನರಾಜ್‌ ಹಟ್ಟಿಹೊಳಿಗೆ! ವಾಸ್ತವವಾಗಿ, ಮತ ನೀಡಿದ ಜನರನ್ನು ವಂಚಿಸಿ ಭ್ರಷ್ಟಾಚಾರವನ್ನು ವ್ಯವಸ್ಥಿತ ರೀತಿಯಲ್ಲಿ ನಡೆಸುವ ಫಾರ್ಮುಲಾವಿದು ಎಂದು ಟೀಕಿಸಿದೆ.

ಲಕ್ಷ್ಮಿ ಹೆಬ್ಬಾಳ್ಕರ್ ಕಚೇರಿಯಲ್ಲಿ ನಡೆದಿದ್ದೇನು?

ಗ್ಯಾರಂಟಿ ಯೋಜನೆಗಳ ಕುರಿತಾದ ಅನುಮಾನಗಳನ್ನು ಬಗೆಹರಿಸಿಕೊಳ್ಳುವುದಕ್ಕಾಗಿ ಮಾಧ್ಯಮ ಪ್ರತಿನಿಧಿಗಳು ಲಕ್ಷ್ಮೀ ಹೆಬ್ಬಾಳ್ಕರ್ ಕಚೇರಿಗೆ ತೆರಳಿದ್ದರು. ಇದೇ ವೇಳೆ ದರ್ಪದಿಂದ ವರ್ತಿಸಿದ್ದ ಚೆನ್ನರಾಜ್‌ ಹಟ್ಟಿಹೊಳಿ, ಏನೂ ಉತ್ತರ ಕೊಡಲ್ಲ ನಡೀರಿ ಇಲ್ಲಿಂದ ಎಂದು ಆವಾಜ್ ಹಾಕಿದ್ದಾರೆ. ಇಷ್ಟೇ ಅಲ್ಲದೆ, ಜನರ ಪತ್ರಗಳಿಗೂ ತಾವೇ ಸಹಿ ಹಾಕುತ್ತಾ ಕುಳಿತಿದ್ದರು. ಇದೇ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಸುಮ್ಮನೇ ಕುಳಿತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ