ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ತಯಾರಾಗ್ತಿದೆ ವಿಶೇಷ ಚಾಕೋಲೇಟ್!
ಬೆಳಗಾವಿ: ದೇಶಾದ್ಯಂತ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ರೋಗನಿರೋಧಕ ಶಕ್ತಿ ವೃದ್ದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊಸ ಪ್ಲಾನ್ ಮಾಡಿಕೊಂಡಿದೆ. ಮಕ್ಕಳು ಕೊರೊನಾ ಸೋಂಕಿಗೆ ಬೇಗ ಗುರಿಯಾಗುತ್ತಾರೆ. ಅವರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತೆ. ಹೀಗಾಗಿ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಶೇಷ ಚಾಕೋಲೇಟ್ ನೀಡಲು ಮುಂದಾಗಿದೆ. ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಈ ಚಾಕೋಲೇಟ್ ನೀಡಿ ಪೌಷ್ಟಿಕತೆ ಹೆಚ್ಚಿಸಲು ಇಲಾಖೆ ಮುಂದಾಗಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಬೆಳಗಾವಿ, ಶಿವಮೊಗ್ಗ, ವಿಜಯಪುರ […]
ಬೆಳಗಾವಿ: ದೇಶಾದ್ಯಂತ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ರೋಗನಿರೋಧಕ ಶಕ್ತಿ ವೃದ್ದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊಸ ಪ್ಲಾನ್ ಮಾಡಿಕೊಂಡಿದೆ. ಮಕ್ಕಳು ಕೊರೊನಾ ಸೋಂಕಿಗೆ ಬೇಗ ಗುರಿಯಾಗುತ್ತಾರೆ. ಅವರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತೆ. ಹೀಗಾಗಿ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಶೇಷ ಚಾಕೋಲೇಟ್ ನೀಡಲು ಮುಂದಾಗಿದೆ.
ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಈ ಚಾಕೋಲೇಟ್ ನೀಡಿ ಪೌಷ್ಟಿಕತೆ ಹೆಚ್ಚಿಸಲು ಇಲಾಖೆ ಮುಂದಾಗಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಬೆಳಗಾವಿ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ಚಾಕಲೇಟ್ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಅಗ್ರಿ ಕ್ರಾಫ್ ಎಂಬ ಸಂಸ್ಥೆಯಿಂದ ತಯಾರಿಸಲ್ಪಟ್ಟಿರುವ ರೆಡಿ ಟೂ ಈಟ್ ಸಪ್ಲೀಮೆಂಟ್ ಫುಡ್ ಎಂಬ ಚಾಕೋಲೇಟ್ ಕಿಟ್ ಇದಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಚಿಕ್ಕೋಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕಿಟ್ ನೀಡುವ ಮೂಲಕ ಚಾಲನೆ ನೀಡಿದ್ರು. ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಕಿಟ್ ವಿತರಣೆ ಮಾಡಲಿದ್ದಾರೆ.
Published On - 3:24 pm, Wed, 13 May 20