ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ತಯಾರಾಗ್ತಿದೆ ವಿಶೇಷ ಚಾಕೋಲೇಟ್!

ಬೆಳಗಾವಿ: ದೇಶಾದ್ಯಂತ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ರೋಗನಿರೋಧಕ ಶಕ್ತಿ ವೃದ್ದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊಸ ಪ್ಲಾನ್ ಮಾಡಿಕೊಂಡಿದೆ. ಮಕ್ಕಳು ಕೊರೊನಾ ಸೋಂಕಿಗೆ ಬೇಗ ಗುರಿಯಾಗುತ್ತಾರೆ. ಅವರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತೆ. ಹೀಗಾಗಿ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಶೇಷ ಚಾಕೋಲೇಟ್ ನೀಡಲು ಮುಂದಾಗಿದೆ. ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಈ ಚಾಕೋಲೇಟ್ ನೀಡಿ ಪೌಷ್ಟಿಕತೆ ಹೆಚ್ಚಿಸಲು ಇಲಾಖೆ ಮುಂದಾಗಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಬೆಳಗಾವಿ, ಶಿವಮೊಗ್ಗ, ವಿಜಯಪುರ […]

ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ತಯಾರಾಗ್ತಿದೆ ವಿಶೇಷ ಚಾಕೋಲೇಟ್!
ಸಾಧು ಶ್ರೀನಾಥ್​

Updated on: May 13, 2020 | 3:24 PM

ಬೆಳಗಾವಿ: ದೇಶಾದ್ಯಂತ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ರೋಗನಿರೋಧಕ ಶಕ್ತಿ ವೃದ್ದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊಸ ಪ್ಲಾನ್ ಮಾಡಿಕೊಂಡಿದೆ. ಮಕ್ಕಳು ಕೊರೊನಾ ಸೋಂಕಿಗೆ ಬೇಗ ಗುರಿಯಾಗುತ್ತಾರೆ. ಅವರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತೆ. ಹೀಗಾಗಿ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಶೇಷ ಚಾಕೋಲೇಟ್ ನೀಡಲು ಮುಂದಾಗಿದೆ.

ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಈ ಚಾಕೋಲೇಟ್ ನೀಡಿ ಪೌಷ್ಟಿಕತೆ ಹೆಚ್ಚಿಸಲು ಇಲಾಖೆ ಮುಂದಾಗಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಬೆಳಗಾವಿ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ಚಾಕಲೇಟ್ ಕಿಟ್​ಗಳನ್ನು ವಿತರಿಸಲಾಗುತ್ತಿದೆ.

ಅಗ್ರಿ ಕ್ರಾಫ್ ಎಂಬ ಸಂಸ್ಥೆಯಿಂದ ತಯಾರಿಸಲ್ಪಟ್ಟಿರುವ ರೆಡಿ ಟೂ ಈಟ್ ಸಪ್ಲೀಮೆಂಟ್ ಫುಡ್ ಎಂಬ ಚಾಕೋಲೇಟ್ ಕಿಟ್ ಇದಾಗಿದ್ದು, ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಚಿಕ್ಕೋಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕಿಟ್ ನೀಡುವ ಮೂಲಕ ಚಾಲನೆ ನೀಡಿದ್ರು. ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಕಿಟ್ ವಿತರಣೆ ಮಾಡಲಿದ್ದಾರೆ.

Published On - 3:24 pm, Wed, 13 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us