ಪುರುಷರಿಗಿಂತ ದುರ್ಬಲರೆಂದು ಭಾವಿಸುತ್ತಾರೆ: ಋತುಚಕ್ರ ರಜೆ ಆದೇಶ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಮಹಿಳೆಯರು

ಇತ್ತೀಚೆಗೆ ರಾಜ್ಯ ಸರ್ಕಾರ ಋತುಚಕ್ರದ ರಜೆ ಘೋಷಿಸಿದಾಗ ಮಹಿಳೆಯರು ಖುಷಿಪಟ್ಟಿದ್ದರು. ಆದರೆ ಇದೀಗ ಶಾಕ್​ ಎದುರಾಗಿದೆ. ಏಕೆಂದರೆ ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ರಿಟ್​ ಅರ್ಜಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ ಈ ಋತುಚಕ್ರ ರಜೆ ಆದೇಶ ರದ್ದುಪಡಿಸಲು ಮನವಿ ಮಾಡಿದ್ದಾರೆ.

ಪುರುಷರಿಗಿಂತ ದುರ್ಬಲರೆಂದು ಭಾವಿಸುತ್ತಾರೆ: ಋತುಚಕ್ರ ರಜೆ ಆದೇಶ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಮಹಿಳೆಯರು
ಕರ್ನಾಟಕ ಹೈಕೋರ್ಟ್‌, ಋತುಚಕ್ರ
Image Credit source: google
Edited By:

Updated on: Mar 26, 2026 | 3:56 PM

ಬೆಂಗಳೂರು, ಮಾರ್ಚ್​ 26: ರಾಜ್ಯ ಸರ್ಕಾರ ಮಹಿಳಾ ನೌಕರರ ಆರೋಗ್ಯ ಮತ್ತು ಕಾರ್ಯದಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಋತುಚಕ್ರ ರಜೆ (Menstrual Leave) ಸೌಲಭ್ಯವನ್ನು ನೀಡಿದೆ. ಈ ಬಗ್ಗೆ ಇತ್ತೀಚೆಗೆ ಸರ್ಕಾರಿ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದರು. ಈ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರದ ಮೂಲಕ ಮನವಿ ಮಾಡಲಾಗಿತ್ತು. ಈ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ ಋತುಚಕ್ರ ರಜೆ ಪ್ರಶ್ನಿಸಿ ವಿವಿಧ ಕಂಪನಿಗಳ ಮಹಿಳಾ ಉದ್ಯೋಗಿಗಳಿಂದಲೇ ಹೈಕೋರ್ಟ್‌ಗೆ (High Court) ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಆದೇಶ ರದ್ದುಪಡಿಸುವಂತೆ ಮನವಿ ಮಾಡಲಾಗಿದೆ.

ಋತುಚಕ್ರದ ಕಾರಣಕ್ಕೆ ಕಡ್ಡಾಯ ರಜೆ ಅಗತ್ಯ

ಕಡ್ಡಾಯ ಋತುಚಕ್ರ ರಜೆ ಆದೇಶ ರದ್ದುಪಡಿಸುವಂತೆ ಶ್ರೀಮತಿ ವರ್ಷಾ ಸೇರಿ ವಿವಿಧ ಕಂಪನಿಗಳ 17 ಮಹಿಳೆಯರಿಂದ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಆದೇಶ ಸಮಾನತೆ ಹಕ್ಕಿಗೆ ವಿರುದ್ಧವಾಗಿದೆ. ಮಹಿಳಾ ಉದ್ಯೋಗಿಗಳ ನೇಮಕಕ್ಕೆ ಕಂಪನಿಗಳು ಹಿಂದೇಟು ಹಾಕುತ್ತಾರೆ. ಮಹಿಳೆಯರು ಪುರುಷರಿಗಿಂತ ದುರ್ಬಲರೆಂದು ಭಾವಿಸುತ್ತಾರೆ. ಹೀಗಾಗಿ ಋತುಚಕ್ರದ ಕಾರಣಕ್ಕೆ ಕಡ್ಡಾಯ ರಜೆ ನೀಡುವ ಅಗತ್ಯವಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಋತುಚಕ್ರ ರಜೆಗೆ ಪುರುಷ ನೌಕರರ ವಿರೋಧ, ಮರು ಪರಿಶೀಲನೆಗಾಗಿ ಸರ್ಕಾರಕ್ಕೆ ಪತ್ರ: ಇದಕ್ಕಿದೆ ಹಲವು ಕಾರಣ!

ಸರ್ಕಾರದ ಕ್ರಮ ಲಿಂಗ ತಾರತಮ್ಯಗೆ ಎಡೆ ಮಾಡಿಕೊಡುತ್ತದೆ. ಪ್ರತಿ ಮಹಿಳೆಗೂ ಋತುಚಕ್ರ ರಜೆ ಬೇಕೆಂದು ಸರ್ಕಾರ ಊಹೆ ಮಾಡಿದೆ. ನೀತಿ ರೂಪಿಸುವಾಗ ಸರ್ಕಾರ ಮಹಿಳೆಯರ ಅಭಿಪ್ರಾಯ ಪಡೆದಿಲ್ಲ. ಕಡ್ಡಾಯ ರಜೆಯಿಂದ ಸ್ಪರ್ಧಾತ್ಮಕ ವೃತ್ತಿಜೀವನದಲ್ಲಿ ಮಹಿಳೆಯರಿಗೆ ಹಿನ್ನಡೆ ಉಂಟಾಗಲಿದೆ.

ಇದನ್ನೂ ಓದಿ: ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಗೆ ತಾತ್ಕಾಲಿಕ ಮಾರ್ಪಾಡು ಮಾಡಿದ ಹೈಕೋರ್ಟ್

ಉದ್ಯೋಗದಾತರಿಗೆ ಹೊರೆ ಹೆಚ್ಚುತ್ತದೆ ಮತ್ತು ದಕ್ಷತೆ ಕಡಿಮೆಯಾಗುತ್ತದೆ. ಮಹಿಳೆಯರ ಸಬಲೀಕರಣಕ್ಕೂ ಋತುಚಕ್ರ ರಜೆ ಅಡ್ಡಿಯಾಗುತ್ತದೆ. ಹೀಗಾಗಿ ಕಡ್ಡಾಯ ಋತುಚಕ್ರ ರಜೆ ಆದೇಶ ರದ್ದುಪಡಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:55 pm, Thu, 26 March 26

Follow Us