ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು ಶಕ್ತಿ ಸ್ಮಾರ್ಟ್​​ಕಾರ್ಡ್​; ಅರ್ಜಿ ಸಲ್ಲಿಸುವುದು ಹೇಗೆ?

ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ (KSRTC Bus) ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ (Shakti Scheme) ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಸೋಮವಾರ ಹೊರಡಿಸಿದೆ.

ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು ಶಕ್ತಿ ಸ್ಮಾರ್ಟ್​​ಕಾರ್ಡ್​; ಅರ್ಜಿ ಸಲ್ಲಿಸುವುದು ಹೇಗೆ?
ಕೆಎಸ್​ಆರ್​ಟಿಸಿ ಬಸ್​
Follow us
Ganapathi Sharma
|

Updated on:Jun 05, 2023 | 5:21 PM

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ (KSRTC Bus) ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ (Shakti Scheme) ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್​​ಕಾರ್ಡ್’ (Shakti smart card) ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್​​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸ್ಮಾರ್ಟ್​​ಕಾರ್ಡ್ ದೊರೆಯುವ ವರೆಗೆ ಉಚಿತ ಪ್ರಯಾಣ ಹೇಗೆ?

ಶಕ್ತಿ ಸ್ಮಾರ್ಟ್‌ಕಾರ್ಡ್‌ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆ / ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್‌ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೌಲಭ್ಯ ಒದಗಿಸಲು ಆದೇಶಿಸಲಾಗಿದೆ. ರಾಜ್ಯದ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (ಬೆ೦.ಮ.ಸಾ.ಸ೦ಸ್ಥೆ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ (ವಾ.ಕ.ರ.ಸಾ.ಸ೦ಸ್ಥೆ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ) ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ನಗರ, ಸಾಮಾನ್ಯ ಹಾಗೂ ವೇಗದೂತ (ಐ/65) ಬಸ್ಸುಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಅಧಿಸೂಚನೆ ತಿಳಿಸಿದೆ.

ಯಾವೆಲ್ಲ ಬಸ್​ಗಳಲ್ಲಿ ಉಚಿತ ಪ್ರಯಾಣ?

ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್​​ಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಯಾವೆಲ್ಲ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಇಲ್ಲ?

  • ಎಸಿ, ನಾನ್​ ಎಸಿ ಸ್ಲೀಪರ್​ ಬಸ್​ಗಳು
  • ಎಸಿ ಮತ್ತು ಐಷಾರಾಮಿ ಬಸ್​ಗಳು
  • ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್​ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್​ ಬಸ್​ಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ
  • ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ
  • ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಶೇ 50ರಷ್ಟು ಸೀಟ್ ಪುರುಷರಿಗೆ ಮೀಸಲು

ಇದನ್ನೂ ಓದಿ: Shakti Scheme: ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ; ಸಿದ್ದರಾಮಯ್ಯ ಘೋಷಣೆ, ಯಾವೆಲ್ಲ ಬಸ್​​ಗಳಲ್ಲಿ?

ಜೂನ್​ 2ರಂದು ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಕ್ತಿ ಯೋಜನೆಯ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದರು. ಶಕ್ತಿ’ ಯೋಜನೆಯನ್ನು ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಅವರು ಹೇಳಿದ್ದರು. ಅದರಂತೆ ಇದೀಗ ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:43 pm, Mon, 5 June 23

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?