ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲೇ ಅತ್ಯಂತ ಕಡಿಮೆ

ಕರ್ನಾಟಕ ವಿಧಾನಸಭೆಯಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಗಮನಿಸಿದರೆ ನಿಜಕ್ಕೂ ಬೇಸರವಾಗುತ್ತದೆ. ಅಂಸೆಂಬ್ಲಿಯ ಒಟ್ಟು ಬಲದಲ್ಲಿ ಶೇ 4.5 ರಷ್ಟು ಮಾತ್ರ ಮಹಿಳೆಯರು ಸದನವನ್ನು ಪ್ರವೇಶಿಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ ದಕ್ಷಿಣ ಭಾರತದಲ್ಲಿ ಕರ್ನಾಟಕ ಆರನೇ ಸ್ಥಾನದಲ್ಲಿದೆ.

ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲೇ ಅತ್ಯಂತ ಕಡಿಮೆ
ವಿಧಾನಸೌಧ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 22, 2023 | 8:45 AM

ಬೆಂಗಳೂರು ಸೆ.22: ಮಹಿಳಾ ಮೀಸಲಾತಿ (Women’s Reservation Bill) ಮಸೂದೆಯು ಸಂಸತ್ತಿನಲ್ಲಿ ಅಂಗೀಕಾರಗೊಂಡಿದೆ. ಈ ಮಸೂದೆ ಲೋಕಸಭೆ (Loksabha) ಮತ್ತು ವಿಧಾನಸಭೆಯಲ್ಲಿ (Vidhan Sabha) ಶೇ 33 ರಷ್ಟು ಮಹಿಳೆಯರಿಗೆ ಮೀಸಲಾತಿ ನೀಡುತ್ತದೆ. ಈ ಮೂಲಕ ಮಹಿಳೆಯರು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಾರೆ. ಕರ್ನಾಟಕ ರಾಜಕೀಯದಲ್ಲಿ ಮಹಿಳೆಯರಿಗೆ ಸಿಕ್ಕಿರುವ ಸ್ಥಾನಮಾನ ಎಷ್ಟು? ಎಷ್ಟು ಜನ ಮಹಿಳೆಯರು ವಿಧಾನಸಭೆಗೆ ಪ್ರವೇಶಿಸಿದ್ದಾರೆ ಎಂಬುವುದನ್ನು ಇಲ್ಲಿ ನೋಡೋಣ.

ಕರ್ನಾಟಕ ವಿಧಾನಸಭೆಯಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಗಮನಿಸಿದರೆ ನಿಜಕ್ಕೂ ಬೇಸರವಾಗುತ್ತದೆ. ಅಂಸೆಂಬ್ಲಿಯ ಒಟ್ಟು ಬಲದಲ್ಲಿ ಶೇ 4.5 ರಷ್ಟು ಮಾತ್ರ ಮಹಿಳೆಯರು ಸದನವನ್ನು ಪ್ರವೇಶಿಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ ದಕ್ಷಿಣ ಭಾರತದಲ್ಲಿ ಕರ್ನಾಟಕ ಆರನೇ ಸ್ಥಾನದಲ್ಲಿದೆ. ವಾಸ್ತವವಾಗಿ, ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕ ಅತ್ಯಂತ ಕಡಿಮೆ ಮಹಿಳಾ ಶಾಸಕಿಯರನ್ನು ಹೊಂದಿದೆ. ಆಂಧ್ರಪ್ರದೇಶದಲ್ಲಿ ಶೇ 8, ಕೇರಳದಲ್ಲಿ ಶೇ 7.9, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ಶೇ 5.1 ಮತ್ತು ಶೇ 5 ರಷ್ಟು ಮಹಿಳೆಯರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ.

1957 ಮತ್ತು 1962 ರಲ್ಲಿ ನಡೆದ ಮೊದಲ ಎರಡು ಚುನಾವಣೆಗಳಲ್ಲಿ ಕ್ರಮವಾಗಿ 13 ಮತ್ತು 18 ಜನ ಮಹಿಳೆಯರು ಚುನಾಯಿತರಾಗಿದ್ದರು. 1989, 2018 ಮತ್ತು 2023 ರಲ್ಲಿ 10 ಜನ ಮಹಿಳೆಯರು ಚುನಾಯಿತರಾಗಿದ್ದನ್ನು ಹೊರತುಪಡಿಸಿದರೇ, 1967 ರಿಂದ 2018 ಮಹಿಳಾ ಪ್ರಾತಿನಿಧ್ಯ ಸಂಖ್ಯೆ ಒಂದೇ ಅಂಕಿಯಲ್ಲಿ ಇತ್ತು.

ಇದನ್ನೂ ಓದಿ: ಪಕ್ಷಾತೀತವಾಗಿ ಧನ್ಯವಾದಗಳು; ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿದವರಿಗೆ ನಮೋ ಎಂದ ಪ್ರಧಾನಿ ಮೋದಿ

ಪ್ರಸ್ತುತ, ವಿಧಾನಸಭೆಯ 10 ರಲ್ಲಿ, ಬಿಜೆಪಿಯ ಮೂವರು, ಕಾಂಗ್ರೆಸ್​ನ ನಾಲ್ವರು, ಜೆಡಿಎಸ್‌ನಿಂದ ಇಬ್ಬರು ಮತ್ತು ಒಬ್ಬರು ಪಕ್ಷೇತರ ಶಾಸಕಿಯರಿದ್ದಾರೆ. ಆದರೆ, ಮಹಿಳಾ ಮತದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. 1962ರಲ್ಲಿ 55.13 ಲಕ್ಷ ಇದ್ದ ಮಹಿಳಾ ಮತದಾರರ ಸಂಖ್ಯೆ ಈ ವರ್ಷ 2.63 ಕೋಟಿ ತಲುಪಿದೆ. ಈ ವರ್ಷ ರಾಜ್ಯದ 34 ಚುನಾವಣಾ ವಿಭಾಗಗಳ ಪೈಕಿ ಕನಿಷ್ಠ 17 ಚುನಾವಣಾ ವಿಭಾಗಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಪುರುಷ ಮತದಾರರಿಗಿಂತ ಹೆಚ್ಚಾಗಿದೆ.

1967 ರಿಂದ 2023 ರವರೆಗೆ ಒಟ್ಟು 1,297 ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೇ, ಕೇವಲ 110 ಮಹಿಳೆಯರು (8.48%) ಗೆದ್ದಿದ್ದಾರೆ. ಇವರಲ್ಲಿ 74 ಕಾಂಗ್ರೆಸ್‌ನಿಂದ (ಅತಿ ಹೆಚ್ಚು), 19 ಜನ ಜನತಾ ಪರಿವಾರದಿಂದ (ಜನತಾ ಪಕ್ಷ, ಜನತಾ ದಳ, ಜೆಡಿ (ಎಸ್), ಮತ್ತು ಜೆಡಿ-ಯು), ಮತ್ತು 13 ಜನ ಬಿಜೆಪಿಯಿಂದ ವಿಜಯಶಾಲಿಯಾಗಿದ್ದಾರೆ.

2018 ವಿಧಾನಸಭೆ ಚುನಾವಣೆಯಲ್ಲಿ 36 ಪ್ರಮುಖ ರಾಜಕೀಯ ಪಕ್ಷಗಳಿಂದ 219 ಮಹಿಳೆಯರು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ 15 ಮಹಿಳೆಯರನ್ನು ಕಣಕ್ಕಿಳಿಸಿದ್ದರೇ, ಬಿಜೆಪಿ ಮತ್ತು ಜೆಡಿ (ಎಸ್) ಕ್ರಮವಾಗಿ ಐದು ಮತ್ತು ಆರು ಮಹಿಳೆಯರಿಗೆ ಸ್ಥಾನ ನೀಡಿದ್ದವು. ಉಳಿದವರು ಸಣ್ಣ ಪಕ್ಷಗಳು ಮತ್ತು ಸ್ವತಂತ್ರರು. 2023ರ ಚುನಾವಣೆಯಲ್ಲಿ ಬಿಜೆಪಿಯಿಂದ 12, ಕಾಂಗ್ರೆಸ್‌ನಿಂದ 11, ಮತ್ತು ಜೆಡಿಎಸ್‌ನಿಂದ 13 ಜನ ಮಹಿಳೆಯರು ಕಣಕ್ಕೆ ಇಳಿದ್ದಿದ್ದರು. ಅತಿ ಹೆಚ್ಚು ಮಹಿಳೆಯರು (17) ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡಿದ್ದರೂ, ಗೆಲ್ಲಲಿಲ್ಲ.

ಮಹಿಳೆಯರಲ್ಲಿನ ಹಿಂಜರಿಕೆ ಮತ್ತು ಆತ್ಮವಿಶ್ವಾಸದ ಕೊರತೆಯು ಕಳಪೆ ಪ್ರಾತಿನಿಧ್ಯಕ್ಕೆ ಕಾರಣವಾಗಿದೆ. ಹೆಚ್ಚಿನ ಸಮಯ, ಮಹಿಳೆಯರು ಇತರ ಜವಾಬ್ದಾರಿಗಳನ್ನು ಹೊಂದಿರುವುದರಿಂದ ರಾಜಕೀಯವನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಭಾವಿಸುತ್ತಾರೆ. ಪುರುಷರಂತೆ ಮಹಿಳೆಯರು ರಾಜಕೀಯಕ್ಕೆ ಹೆಚ್ಚು ಸಮಯ ಮೀಸಲಿಡಲು ಸಾಧ್ಯವಿಲ್ಲ ಎಂಬ ಅಭಿಪ್ರಾಯವೂ ಸಮಾಜದಲ್ಲಿದೆ. ಮಹಿಳಾ ಮೀಸಲಾತಿ ಮಸೂದೆ (Nari Shakti Vandan Adhiniyam) ಸ್ವಾಗತಾರ್ಹ ಕ್ರಮವಾಗಿದೆ. ಮಹಿಳೆಯರು ರಾಜಕೀಯದಲ್ಲಿ ನೆಲೆಯೂರಬೇಕು, ಗುರಿ, ಸ್ಪಷ್ಟತೆ ಮತ್ತು ದೂರದೃಷ್ಟಿ ಹೊಂದಿರಬೇಕು. ಇಷ್ಟು ವರ್ಷ ನಾವು ಮೀಸಲಾತಿಗೆ ಬೇಡಿಕೆ ಇಟ್ಟಿದ್ದೆವು. ನಾವು ನಮ್ಮ ನಾಯಕತ್ವವನ್ನು ಸಾಬೀತುಪಡಿಸಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:43 am, Fri, 22 September 23

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್