ಕರ್ನಾಟಕದಲ್ಲಿ ಮೊದಲ ಬಾರಿ ಪುರುಷ ಮತದಾರರನ್ನು ಮೀರಿಸಿದ ಮಹಿಳೆಯರು!

ಕರ್ನಾಟಕದ ಕರಡು ಮತದಾರರ ಪಟ್ಟಿಯ ಪ್ರಕಾರ, ರಾಜ್ಯದಲ್ಲಿ ಮೊದಲ ಬಾರಿಗೆ ಮಹಿಳಾ ಮತದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಿದೆ. ರಾಜ್ಯದಲ್ಲಿ 2.72 ಕೋಟಿ ಮಹಿಳಾ ಮತದಾರರು ಮತ್ತು 2.71 ಕೋಟಿ ಪುರುಷ ಮತದಾರರಿದ್ದಾರೆ. ಉಪಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಈ ಅಂಕಿಅಂಶಗಳು ಲಭ್ಯವಾಗಿವೆ. ಈ ಬೆಳವಣಿಗೆ ರಾಜಕೀಯ ಲೆಕ್ಕಾಚಾರಗಳನ್ನು ಬದಲಾಯಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಕರ್ನಾಟಕದಲ್ಲಿ ಮೊದಲ ಬಾರಿ ಪುರುಷ ಮತದಾರರನ್ನು ಮೀರಿಸಿದ ಮಹಿಳೆಯರು!
ಸಾಂದರ್ಭಿಕ ಚಿತ್ರ
Follow us
|

Updated on:Oct 30, 2024 | 8:07 AM

ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (ಸಿಇಒ) ಪ್ರಕಟಿಸಿರುವ ಮತದಾರರ ಕರಡು ಪಟ್ಟಿಯ ಪ್ರಕಾರ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚು ಇರುವ ಸುಳಿವು ದೊರೆತಿದೆ. ಆದಾಗ್ಯೂ, ಉಪಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಮತದಾರರ ವಿವರವನ್ನು ಕರಡು ಪಟ್ಟಿ ಒಳಗೊಳ್ಳದೇ ಇರುವುದರಿಂದ ಮಹಿಳಾ ಮತದಾರರೇ ಹೆಚ್ಚು ಎಂದು ಅಧಿಕೃತವಾಗಿ ಹೇಳಲಾಗದು. ಆದರೆ, ಅಂಕಿಅಂಶಗಳಿಂದಾಗಿ ಮಹಿಳಾ ಮತದಾರರೇ ಹೆಚ್ಚಿರುವ ನಿರೀಕ್ಷೆ ದಟ್ಟವಾಗಿದೆ.

ಕರ್ನಾಟಕದಲ್ಲಿ 2.72 ಕೋಟಿ ಮಹಿಳಾ ಮತದಾರರು

ಕರ್ನಾಟಕದ ಒಟ್ಟು 221 ವಿಧಾನಸಭಾ ಕ್ಷೇತ್ರಗಳ ಕರಡು ಪಟ್ಟಿಯ ಪ್ರಕಾರ, ಮಹಿಳೆಯರು 2.72 ಕೋಟಿ ಮಹಿಳಾ ಮತದಾರರಿದ್ದರೆ, 2.71 ಕೋಟಿ ಪುರುಷ ಮತದಾರರಿದ್ದಾರೆ. 5,022 ತೃತೀಯ ಲಿಂಗಿ ಮತದಾರರಿದ್ದಾರೆ.

ನವೆಂಬರ್ 13 ರಂದು ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತದಾರರ ವಿವರನ್ನು ಕರಡು ಪಟ್ಟಿ ಒಳಗೊಂಡಿಲ್ಲ. ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ದೇಶನದಂತೆ ಈ ಮೂರು ಕ್ಷೇತ್ರಗಳ ಮತದಾರರ ಪಟ್ಟಿಯ ಸಾರಾಂಶ ಪರಿಷ್ಕರಣೆಯನ್ನು ತಡೆಹಿಡಿಯಲಾಗಿದೆ.

ಆದಾಗ್ಯೂ, ಅಸ್ತಿತ್ವದಲ್ಲಿರುವ ಮಾಹಿತಿಯ ಪ್ರಕಾರ, ಆ ಮೂರು ಕ್ಷೇತ್ರಗಳ ಆಯಾ ಅಂಕಿಅಂಶಗಳನ್ನು ಸೇರಿಸಿದರೂ ಸಹ ಪುರುಷರಿಗಿಂತ 36,462 ಮಹಿಳಾ ಮತದಾರರು ಹೆಚ್ಚಿದ್ದಾರೆ ಎಂದು ವರದಿಯಾಗಿದೆ. ಈವರೆಗೆ ಕರಾವಳಿ ಪ್ರದೇಶದಲ್ಲಷ್ಟೇ ಮಹಿಳಾ ಮತದಾರರ ಸಂಖ್ಯೆ ಪುರುಷ ಮತದಾರರ ಸಂಖ್ಯೆಗಿಂತ ಹೆಚ್ಚಾಗಿತ್ತು. ಆದರೆ, ಇದೀಗ ರಾಜ್ಯದಲ್ಲೇ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ.

ಚುನಾವಣೆಗಳ ಮೇಲೆ ಪರಿಣಾಮ

ಈ ಅಂಕಿಅಂಶಗಳು ಸಂಭಾವ್ಯವಾಗಿ ಚುನಾವಣೆಗಳಲ್ಲಿ ಮಹತ್ವ ಪಡೆಯಬಹದು. ವಿವಿಧ ಪಕ್ಷಗಳ ರಾಜಕೀಯ ಲೆಕ್ಕಾಚಾರಗಳನ್ನು ಬದಲಾಯಿಸಬಹುದು ಮತ್ತು ಅವರ ಕಾರ್ಯತಂತ್ರವನ್ನು ಮರು ರೂಪಿಸಲು ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಮಹಿಳಾ ಮತದಾರರು ಹೆಚ್ಚು ಎಂಬ ಅಂಶ ನೇರವಾಗಿ ಚುನಾವಣಾ ಡೈನಾಮಿಕ್ಸ್ ಅನ್ನು ಬದಲಾಯಿಸುವುದಿಲ್ಲ. ಆದರೆ ಲಿಂಗ ಅಂಶವು ಚುನಾವಣಾ ಪರಿಗಣನೆಗೆ ಬಂದೇ ಬರುತ್ತದೆ. ಹಿಂದಿನ ಚುನಾವಣೆಗಳಲ್ಲಿಯೂ ಸಹ, ಪುರುಷ ಮತದಾರರಿಗಿಂತ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದ ಹಲವು ಕ್ಷೇತ್ರಗಳಿವೆ. ಹೆಚ್ಚಿನ ಮಹಿಳೆಯರ ಪಾಲ್ಗೊಳ್ಳುವಿಕೆಯ ಮಾದರಿಯು ಯಾವಾಗಲೂ ಕಂಡುಬಂದಿದೆ ಎಂದು ರಾಜಕೀಯ ವಿಶ್ಲೇಷಕ ಸಂದೀಪ್ ಶಾಸ್ತ್ರಿ ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಉದ್ಯೋಗಕ್ಕಾಗಿ ಹೊರ ರಾಜ್ಯಗಳಿಗೆ ಪುರುಷರ ವಲಸೆ ಹೆಚ್ಚಾಗಿರುವುದು ಕೂಡ ಮಹಿಳಾ ಮತದಾರರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗಲು ಕಾರಣ ಇರಬಹುದು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್​​ನಿಂದ ಮತ್ತೆ ಬಿಗ್ ಆಪರೇಷನ್

ಮತದಾರರಿಗೆ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ನವೆಂಬರ್ 28 ರವರೆಗೆ ಅವಕಾಶವಿದೆ. ಅಂತಿಮ ಮತದಾರರ ಪಟ್ಟಿಯನ್ನು 2025 ರ ಜನವರಿ 6 ರಂದು ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 30 October 24

ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು
ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ
ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ
ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಕಾಮೆಂಟ್ ಮಾಡಲ್ಲ: ಡಿಕೆ ಶಿವಕುಮಾರ್
ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಕಾಮೆಂಟ್ ಮಾಡಲ್ಲ: ಡಿಕೆ ಶಿವಕುಮಾರ್