ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಯಾಕೆ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿಲ್ಲ? ಸಚಿವ ಕೋಟ ಶ್ರೀನಿವಾಸ ಮಾರ್ಮಿಕ ಪ್ರಶ್ನೆ

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿ ಜನಗಣತಿ ಮಾಡಿದ್ದರು. ಕಾಂತರಾಜು ಅವರಿಗೆ ಜಾತಿಗಣತಿ ಜವಾಬ್ದಾರಿ ವಹಿಸಲಾಗಿತ್ತು. ಅವರ ಅವಧಿಯಲ್ಲೇ ಜಾತಿಗಣತಿ ವರದಿಯೂ ಸಿದ್ಧವಾಗಿತ್ತು. ಆಗ ಜಾತಿ ಗಣತಿ ವರದಿ ಬಿಡುಗಡೆಗೆ ನಾವು ಆಗ್ರಹಿಸಿದ್ದೆವು.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಯಾಕೆ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿಲ್ಲ? ಸಚಿವ ಕೋಟ ಶ್ರೀನಿವಾಸ ಮಾರ್ಮಿಕ ಪ್ರಶ್ನೆ
ಕೋಟ ಶ್ರೀನಿವಾಸ ಪೂಜಾರಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 23, 2021 | 1:36 PM

ಉಡುಪಿ: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರವಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿ ಜನಗಣತಿ ಮಾಡಿದ್ದರು. ಆದ್ರೆ ಅವರು ಯಾಕೆ ಅದರ ವರದಿಯನ್ನು ಬಿಡುಗಡೆ ಮಾಡಿಲ್ಲ ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿ ಜನಗಣತಿ ಮಾಡಿದ್ದರು. ಕಾಂತರಾಜು ಅವರಿಗೆ ಜಾತಿಗಣತಿ ಜವಾಬ್ದಾರಿ ವಹಿಸಲಾಗಿತ್ತು. ಅವರ ಅವಧಿಯಲ್ಲೇ ಜಾತಿಗಣತಿ ವರದಿಯೂ ಸಿದ್ಧವಾಗಿತ್ತು. ಆಗ ಜಾತಿ ಗಣತಿ ವರದಿ ಬಿಡುಗಡೆಗೆ ನಾವು ಆಗ್ರಹಿಸಿದ್ದೆವು. ಆದ್ರೆ ಸಿದ್ದರಾಮಯ್ಯ ಅವರು ಯಾಕೆ ಬಿಡುಗಡೆ ಮಾಡಿಲ್ಲವೆಂದು ಗೊತ್ತಿಲ್ಲ ಎಂದು ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕಾಂತರಾಜು ಅವಧಿಯಲ್ಲಿ ವರದಿ ಸರ್ಕಾರಕ್ಕೆ ಮಂಡನೆಯಾಗಿಲ್ಲ. ಈಗ ಜಯಪ್ರಕಾಶ್ ಹೆಗ್ಡೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಇದ್ದಾರೆ. ಕೆಲವು ಪ್ರಕರಣಗಳು ಹೈಕೋರ್ಟ್‌ನಲ್ಲಿ ದಾಖಲಾಗಿವೆ. ಜಾತಿ ಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗುವ ನಿರೀಕ್ಷೆಯಿದೆ. ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ ಎಂದೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

ನಮ್ಮ ಜಿಲ್ಲೆಗಳಿಗೆ ಇದೊಂದು ಸಾಂಕೇತಿಕ ಎಚ್ಚರಿಕೆ: ಕೊಡಗು ದ.ಕ. ಉಡುಪಿ ಜಿಲ್ಲೆ ಪಾಸಿಟಿವಿಟಿ ರೇಟ್ ಜಾಸ್ತಿ ಇದೆ. ರಾಜ್ಯಕ್ಕೆ ಹೋಲಿಸಿದಾಗ ಉಡುಪಿ ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಶೇಕಡಾ 2.5 ಕಿಂತ ಜಾಸ್ತಿ ಇದೆ. ಈ ಕಾರಣಕ್ಕಾಗಿ ಶಾಲೆ ಪ್ರಾರಂಭ ಮಾಡಿಲ್ಲ. ರಾಜ್ಯದ ಇತರ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭವಾಗಿದೆ. ನಮ್ಮ ಜಿಲ್ಲೆಗಳಿಗೆ ಇದೊಂದು ಸಾಂಕೇತಿಕ ಎಚ್ಚರಿಕೆ.

ಕೋವಿಡ್ ಗೈಡ್ ಲೈನ್ ಗಟ್ಟಿಗೊಳಿಸಬೇಕು, ಪಾಸಿಟಿವಿಟಿ ರೇಟ್ ಕಡಿಮೆಯಾಗಬೇಕು. ಶಾಲೆ ಶೀಘ್ರ ಪ್ರಾರಂಭಿಸಲು ನಮಗೆ ಆಸಕ್ತಿ ಇದೆ. ಪಾಸಿಟಿವಿಟಿ ರೇಟ್ ಇಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದೂ ಸಚಿವ ಕೋಟಾ ಶ್ರೀ ನಿವಾಸ್ ಪೂಜಾರಿ ಹೇಳಿದರು.

Census India: ಜನಗಣತಿಗೆ ಸಿದ್ಧತೆ: ಮತ್ತೊಮ್ಮೆ ಜಾತಿ ಆಧರಿತ ಮಾಹಿತಿ ಸಂಗ್ರಹಿಸುವ ಉದ್ದೇಶವಿಲ್ಲ ಎಂದ ಕೇಂದ್ರ ಸರ್ಕಾರ

(wonder why siddaramaiah government did not adopt caste report in karnataka asks kota srinivas poojary)

Published On - 1:34 pm, Mon, 23 August 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್