ಉಡುಪಿ: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರವಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿ ಜನಗಣತಿ ಮಾಡಿದ್ದರು. ಆದ್ರೆ ಅವರು ಯಾಕೆ ಅದರ ವರದಿಯನ್ನು ಬಿಡುಗಡೆ ಮಾಡಿಲ್ಲ ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿ ಜನಗಣತಿ ಮಾಡಿದ್ದರು. ಕಾಂತರಾಜು ಅವರಿಗೆ ಜಾತಿಗಣತಿ ಜವಾಬ್ದಾರಿ ವಹಿಸಲಾಗಿತ್ತು. ಅವರ ಅವಧಿಯಲ್ಲೇ ಜಾತಿಗಣತಿ ವರದಿಯೂ ಸಿದ್ಧವಾಗಿತ್ತು. ಆಗ ಜಾತಿ ಗಣತಿ ವರದಿ ಬಿಡುಗಡೆಗೆ ನಾವು ಆಗ್ರಹಿಸಿದ್ದೆವು. ಆದ್ರೆ ಸಿದ್ದರಾಮಯ್ಯ ಅವರು ಯಾಕೆ ಬಿಡುಗಡೆ ಮಾಡಿಲ್ಲವೆಂದು ಗೊತ್ತಿಲ್ಲ ಎಂದು ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕಾಂತರಾಜು ಅವಧಿಯಲ್ಲಿ ವರದಿ ಸರ್ಕಾರಕ್ಕೆ ಮಂಡನೆಯಾಗಿಲ್ಲ. ಈಗ ಜಯಪ್ರಕಾಶ್ ಹೆಗ್ಡೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಇದ್ದಾರೆ. ಕೆಲವು ಪ್ರಕರಣಗಳು ಹೈಕೋರ್ಟ್ನಲ್ಲಿ ದಾಖಲಾಗಿವೆ. ಜಾತಿ ಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗುವ ನಿರೀಕ್ಷೆಯಿದೆ. ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ ಎಂದೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.
ನಮ್ಮ ಜಿಲ್ಲೆಗಳಿಗೆ ಇದೊಂದು ಸಾಂಕೇತಿಕ ಎಚ್ಚರಿಕೆ:
ಕೊಡಗು ದ.ಕ. ಉಡುಪಿ ಜಿಲ್ಲೆ ಪಾಸಿಟಿವಿಟಿ ರೇಟ್ ಜಾಸ್ತಿ ಇದೆ. ರಾಜ್ಯಕ್ಕೆ ಹೋಲಿಸಿದಾಗ ಉಡುಪಿ ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಶೇಕಡಾ 2.5 ಕಿಂತ ಜಾಸ್ತಿ ಇದೆ. ಈ ಕಾರಣಕ್ಕಾಗಿ ಶಾಲೆ ಪ್ರಾರಂಭ ಮಾಡಿಲ್ಲ. ರಾಜ್ಯದ ಇತರ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭವಾಗಿದೆ. ನಮ್ಮ ಜಿಲ್ಲೆಗಳಿಗೆ ಇದೊಂದು ಸಾಂಕೇತಿಕ ಎಚ್ಚರಿಕೆ.
ಕೋವಿಡ್ ಗೈಡ್ ಲೈನ್ ಗಟ್ಟಿಗೊಳಿಸಬೇಕು, ಪಾಸಿಟಿವಿಟಿ ರೇಟ್ ಕಡಿಮೆಯಾಗಬೇಕು. ಶಾಲೆ ಶೀಘ್ರ ಪ್ರಾರಂಭಿಸಲು ನಮಗೆ ಆಸಕ್ತಿ ಇದೆ. ಪಾಸಿಟಿವಿಟಿ ರೇಟ್ ಇಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದೂ ಸಚಿವ ಕೋಟಾ ಶ್ರೀ ನಿವಾಸ್ ಪೂಜಾರಿ ಹೇಳಿದರು.
Census India: ಜನಗಣತಿಗೆ ಸಿದ್ಧತೆ: ಮತ್ತೊಮ್ಮೆ ಜಾತಿ ಆಧರಿತ ಮಾಹಿತಿ ಸಂಗ್ರಹಿಸುವ ಉದ್ದೇಶವಿಲ್ಲ ಎಂದ ಕೇಂದ್ರ ಸರ್ಕಾರ
(wonder why siddaramaiah government did not adopt caste report in karnataka asks kota srinivas poojary)
Published On - 1:34 pm, Mon, 23 August 21