AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣ ಬಗ್ಗೆ ಸಿದ್ದರಾಮಯ್ಯ ವಿಶೇಷ ಮುತುವರ್ಜಿ; ಕ್ಷೇತ್ರದ ಸಮಸ್ಯೆ ಬಗೆಹರಿಸಲು ವಿಶೇಷ ವ್ಯವಸ್ಥೆ

ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿ ಕೆಎನ್ ವಿಜಯ್​​ಗೆ ವರುಣ ಕ್ಷೇತ್ರದ ಜವಾಬ್ದಾರಿ ನೀಡಿದ್ದು, ಕ್ಷೇತ್ರದ ಎಲ್ಲ ವಿಷಯಗಳ ನಿರ್ವಹಣೆಗೆ ಸೂಚನೆ ನೀಡಲಾಗಿದೆ.

ವರುಣ ಬಗ್ಗೆ ಸಿದ್ದರಾಮಯ್ಯ ವಿಶೇಷ ಮುತುವರ್ಜಿ; ಕ್ಷೇತ್ರದ ಸಮಸ್ಯೆ ಬಗೆಹರಿಸಲು ವಿಶೇಷ ವ್ಯವಸ್ಥೆ
ಸಿದ್ದರಾಮಯ್ಯ
ಗಣಪತಿ ಶರ್ಮಾ
|

Updated on: Jun 21, 2023 | 4:25 PM

Share

ಬೆಂಗಳೂರು: ತಾವು ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ (Varuna Assembly Constituency) ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಶೇಷ ಮುತುವರ್ಜಿ ವಹಿಸಿದ್ದಾರೆ. ಮುಖ್ಯಮಂತ್ರಿ ಸಚಿವಾಲಯ ಕಾರ್ಯನಿರ್ವಹಣೆಗೆ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿರುವ ಸಿದ್ದರಾಮಯ್ಯ, ವರುಣ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ವ್ಯವಸ್ಥೆ ಕಲ್ಪಿಸಿದ್ದಾರೆ. ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿ ಕೆಎನ್ ವಿಜಯ್​​ಗೆ ವರುಣ ಕ್ಷೇತ್ರದ ಜವಾಬ್ದಾರಿ ನೀಡಿದ್ದು, ಕ್ಷೇತ್ರದ ಎಲ್ಲ ವಿಷಯಗಳ ನಿರ್ವಹಣೆಗೆ ಸೂಚನೆ ನೀಡಿದ್ದಾರೆ.

ಇಷ್ಟೇ ಅಲ್ಲದೆ ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳಿಗೆ ವಲಯವಾರು ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಕಂದಾಯ ವಿಭಾಗವಾರು ಜವಾಬ್ದಾರಿ ಹಂಚಿಕೆ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ. ಸಂಸದರು, ಶಾಸಕರ ಕುಂದುಕೊರತೆ, ಅನುದಾನಕ್ಕೆ ಸಂಬಂಧಪಟ್ಟಂತೆ ನಿರ್ವಹಣೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಕಲಬುರಗಿ, ಮೈಸೂರು, ಬೆಳಗಾವಿ, ಬೆಂಗಳೂರು ವಿಭಾಗಕ್ಕೆ ಪ್ರತ್ಯೇಕವಾಗಿ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಈ ಭಾಗದ ಶಾಸಕರು ಹಾಗೂ ಸಂಸದರ ಕುಂದುಕೊರತೆಗಳನ್ನು, ಕ್ಷೇತ್ರದ ಸಮಸ್ಯೆಗಳನ್ನು ಅಧಿಕಾರಿಗಳು ನಿರ್ವಹಿಸಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Siddaramaiah: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸಚಿವ ಮನ್ಸುಖ್ ಎಲ್. ಮಾಂಡವಿಯಾಗೆ ಪತ್ರ ಬರೆದ ಸಿದ್ಧರಾಮಯ್ಯ

ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವುದಕ್ಕಾಗಿ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ದಿನನಿತ್ಯದ ಮಾಧ್ಯಮಗಳ ವರದಿಗಳಲ್ಲಿ ಬರುವ ಸಮಸ್ಯೆಗಳ ಪರಿಹಾರಕ್ಕೂ ಅಧಿಕಾರಿಯೊಬ್ಬರಿಗೆ ಪ್ರತ್ಯೇಕ ಜವಾಬ್ದಾರಿ ನೀಡಲಾಗಿದೆ. ಕೇಂದ್ರ ಸರ್ಕಾರದ ಜೊತೆಗೆ ಪತ್ರ ವ್ಯವಹಾರ ನಡೆಸಲು ಸಿಎಂ ಸಚಿವಾಲಯದ ಅಧಿಕಾರಿಯೊಬ್ಬರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂಬುದು ಆದೇಶದ ಪ್ರತಿಯಿಂದ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!