ವರುಣ ಬಗ್ಗೆ ಸಿದ್ದರಾಮಯ್ಯ ವಿಶೇಷ ಮುತುವರ್ಜಿ; ಕ್ಷೇತ್ರದ ಸಮಸ್ಯೆ ಬಗೆಹರಿಸಲು ವಿಶೇಷ ವ್ಯವಸ್ಥೆ

|

Updated on: Jun 21, 2023 | 4:25 PM

ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿ ಕೆಎನ್ ವಿಜಯ್​​ಗೆ ವರುಣ ಕ್ಷೇತ್ರದ ಜವಾಬ್ದಾರಿ ನೀಡಿದ್ದು, ಕ್ಷೇತ್ರದ ಎಲ್ಲ ವಿಷಯಗಳ ನಿರ್ವಹಣೆಗೆ ಸೂಚನೆ ನೀಡಲಾಗಿದೆ.

ವರುಣ ಬಗ್ಗೆ ಸಿದ್ದರಾಮಯ್ಯ ವಿಶೇಷ ಮುತುವರ್ಜಿ; ಕ್ಷೇತ್ರದ ಸಮಸ್ಯೆ ಬಗೆಹರಿಸಲು ವಿಶೇಷ ವ್ಯವಸ್ಥೆ
ಸಿದ್ದರಾಮಯ್ಯ
Follow us on

ಬೆಂಗಳೂರು: ತಾವು ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರ(Varuna Assembly Constituency) ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಶೇಷ ಮುತುವರ್ಜಿ ವಹಿಸಿದ್ದಾರೆ. ಮುಖ್ಯಮಂತ್ರಿ ಸಚಿವಾಲಯ ಕಾರ್ಯನಿರ್ವಹಣೆಗೆ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿರುವ ಸಿದ್ದರಾಮಯ್ಯ, ವರುಣ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ವ್ಯವಸ್ಥೆ ಕಲ್ಪಿಸಿದ್ದಾರೆ. ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿ ಕೆಎನ್ ವಿಜಯ್​​ಗೆ ವರುಣ ಕ್ಷೇತ್ರದ ಜವಾಬ್ದಾರಿ ನೀಡಿದ್ದು, ಕ್ಷೇತ್ರದ ಎಲ್ಲ ವಿಷಯಗಳ ನಿರ್ವಹಣೆಗೆ ಸೂಚನೆ ನೀಡಿದ್ದಾರೆ.

ಇಷ್ಟೇ ಅಲ್ಲದೆ ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳಿಗೆ ವಲಯವಾರು ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಕಂದಾಯ ವಿಭಾಗವಾರು ಜವಾಬ್ದಾರಿ ಹಂಚಿಕೆ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ. ಸಂಸದರು, ಶಾಸಕರ ಕುಂದುಕೊರತೆ, ಅನುದಾನಕ್ಕೆ ಸಂಬಂಧಪಟ್ಟಂತೆ ನಿರ್ವಹಣೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಕಲಬುರಗಿ, ಮೈಸೂರು, ಬೆಳಗಾವಿ, ಬೆಂಗಳೂರು ವಿಭಾಗಕ್ಕೆ ಪ್ರತ್ಯೇಕವಾಗಿ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಈ ಭಾಗದ ಶಾಸಕರು ಹಾಗೂ ಸಂಸದರ ಕುಂದುಕೊರತೆಗಳನ್ನು, ಕ್ಷೇತ್ರದ ಸಮಸ್ಯೆಗಳನ್ನು ಅಧಿಕಾರಿಗಳು ನಿರ್ವಹಿಸಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Siddaramaiah: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸಚಿವ ಮನ್ಸುಖ್ ಎಲ್. ಮಾಂಡವಿಯಾಗೆ ಪತ್ರ ಬರೆದ ಸಿದ್ಧರಾಮಯ್ಯ

ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವುದಕ್ಕಾಗಿ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ದಿನನಿತ್ಯದ ಮಾಧ್ಯಮಗಳ ವರದಿಗಳಲ್ಲಿ ಬರುವ ಸಮಸ್ಯೆಗಳ ಪರಿಹಾರಕ್ಕೂ ಅಧಿಕಾರಿಯೊಬ್ಬರಿಗೆ ಪ್ರತ್ಯೇಕ ಜವಾಬ್ದಾರಿ ನೀಡಲಾಗಿದೆ. ಕೇಂದ್ರ ಸರ್ಕಾರದ ಜೊತೆಗೆ ಪತ್ರ ವ್ಯವಹಾರ ನಡೆಸಲು ಸಿಎಂ ಸಚಿವಾಲಯದ ಅಧಿಕಾರಿಯೊಬ್ಬರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂಬುದು ಆದೇಶದ ಪ್ರತಿಯಿಂದ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ