ರೂಪಾಂತರಿ ಕೊರೊನಾ ತಂದಿಟ್ಟ ಫಜೀತಿ; ಸಂಪರ್ಕಿತರ ಪತ್ತೆ ಹಚ್ಚಲು ಹೆಣಗಾಡುತ್ತಿರುವ ಸಚಿವ, ಅಧಿಕಾರಿಗಳು
ಬ್ರಿಟನ್ನಿಂದ ರಾಜ್ಯಕ್ಕೆ ಆಗಮಿಸಿದ 26 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ ಮೂವರಿಗೆ ಹೊಸ ಪ್ರಭೇದ ಸೋಂಕು ತಗುಲಿದೆ. ಈ ಮಾಹಿತಿಯನ್ನು ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿದೆ.
ಬೆಂಗಳೂರು: ರಾಜ್ಯದಲ್ಲಿ ಮೂವರಲ್ಲಿ ಕೊರೊನಾ ರೂಪಾಂತರ ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕದಲ್ಲಿ ಇರುವವರನ್ನೆಲ್ಲ ಕ್ವಾರಂಟೈನ್ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬ್ರಿಟನ್ನಿಂದ ರಾಜ್ಯಕ್ಕೆ ಆಗಮಿಸಿದ 26 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ ಮೂವರಿಗೆ ಹೊಸ ಪ್ರಭೇದ ಸೋಂಕು ತಗುಲಿದೆ. ಈ ಮಾಹಿತಿಯನ್ನು ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿದೆ. ಸದ್ಯ ರೂಪಾಂತರ ಕೊರೊನಾ ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರನ್ನು ಇನ್ನು 48 ಗಂಟೆಗಳಲ್ಲಿ ಪತ್ತೆ ಹಚ್ಚುವುದಾಗಿ ಗೃಹ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಆದರೆ ಕೆಲವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ನಮಗೆ ಮಾರ್ಗಸೂಚಿಗಳನ್ನು ನೀಡಿದ್ದು, ಅದರಂತೆ ನಡೆಯಲಾಗುವುದು ಎಂದು ಹೇಳಿದ್ದಾರೆ.
ರೂಪಾಂತರಿ ಕೊರೊನಾ; ಬ್ರಿಟನ್ನಿಂದ ಬಂದ 6 ಮಂದಿಯಲ್ಲಿ ವೈರಸ್ ಪಕ್ಕಾ.. ಬೆಂಗಳೂರಲ್ಲೂ ಮೂವರಿಗೆ ಸೋಂಕು