ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅವಘಡ; ಚಿಮಣಿಯ ಮೇಲಿಂದ ಬಿದ್ದು ಕಾರ್ಮಿಕ ಸಾವು

ಇಂಡಿಯನ್ ಬ್ಯಾಗ್ ಪ್ರೈವೇಟ್ ಲಿಮಿಟೆಡ್ ಮೂಲಕ ಎನ್​ಟಿಪಿಸಿಯಲ್ಲಿ‌ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕಿಶನಕುಮಾರ ಎಂಬ ವ್ಯಕ್ತಿ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಚಿಮಣಿಯಲ್ಲಿ ಕೇಬಲ್ ಅಳವಡಿಸುತ್ತಿದ್ದ ವೇಳೆ ಆಯತಪ್ಪಿ 130 ಅಡಿ ಎತ್ತರದಿಂದ ಬಿದ್ದು ಮೃತಪಟ್ಟಿದ್ದಾರೆ.

ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅವಘಡ; ಚಿಮಣಿಯ ಮೇಲಿಂದ ಬಿದ್ದು ಕಾರ್ಮಿಕ ಸಾವು
ಕೂಡಗಿ ಉಷ್ಣ ವಿದ್ಯುತ್ ಸ್ಥಾವರ
Edited By: ಆಯೇಷಾ ಬಾನು

Updated on: May 15, 2024 | 10:32 AM

ವಿಜಯಪುರ, ಮೇ.15: ಕೊಲ್ಹಾರ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅವಘಡ ಸಂಭವಿಸಿದೆ. ಸ್ಥಾವರದ ಚಿಮಣಿಯ ಮೇಲಿಂದ ಬಿದ್ದು ಕಾರ್ಮಿಕ ಮೃತಪಟ್ಟಿದ್ದಾನೆ (Death). ಚಿಮಣಿಯಲ್ಲಿ ಕೇಬಲ್ ಅಳವಡಿಸುತ್ತಿದ್ದ ಕಾರ್ಮಿಕ ಆಯತಪ್ಪಿ 130 ಅಡಿ ಎತ್ತರದಿಂದ ಕಳೆಗೆ ಬಿದ್ದು ಮೃತಪಟ್ಟಿದ್ದಾನೆ. ಉತ್ತರಪ್ರದೇಶದ ಗಾಜಿಪುರ ಮೂಲದ ಕಿಶನಕುಮಾರ ಭಾರದ್ವಾಜ್ (32) ಮೃತ ದುರ್ದೈವಿ.

ಇಂಡಿಯನ್ ಬ್ಯಾಗ್ ಪ್ರೈವೇಟ್ ಲಿಮಿಟೆಡ್ ಮೂಲಕ ಎನ್​ಟಿಪಿಸಿಯಲ್ಲಿ‌ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕಿಶನಕುಮಾರ ನಿನ್ನೆ ಸಾಯಂಕಾಲ‌ ಮೃತಪಟ್ಟಿದ್ದಾನೆ. ಕಾರ್ಮಿಕನ ಸಾವಿಗೆ ಆಕ್ರೋಶ ವ್ಯಕ್ತವಾಗಿದ್ದು ಸೂಕ್ತ ರಕ್ಷಣೆ ಇಲ್ಲದೇ ಕೆಲಸ ಮಾಡಿಸಲಾಗುತ್ತಿದೆ ಎಂದು ಎನ್​ಟಿಪಿಸಿ ಎದುರು ಇತರೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಕೂಡಗಿ ಎನ್​ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾರ್ಟ್ ​ಸರ್ಕ್ಯೂಟ್​ನಿಂದಾಗಿ ಹೊತ್ತಿ ಉರಿದ ಮನೆ

ಕಲಬುರಗಿ ತಾಲೂಕಿನ ಆಲಗೂಡ ಗ್ರಾಮದಲ್ಲಿ ಸೈಬಣ್ಣ ಎಂಬುವವರ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಶಾರ್ಟ್ ​ಸರ್ಕ್ಯೂಟ್​ನಿಂದಾಗಿ ಮನೆ ಹೊತ್ತಿ ಉರಿದಿದ್ದು ಅಗ್ನಿ ಅವಘಡದಲ್ಲಿ ಮನೆಯಲ್ಲಿದ್ದ 20 ಸಾವಿರ ನಗದು, ಚಿನ್ನಾಭರಣ, ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕಲಬುರಗಿ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹೆಸರಘಟ್ಟ ಕೆರೆ ಸ್ವಚ್ಛತಾ ಕಾರ್ಯಕ್ಕೆ ಮುಂದಾದ ರೈತ ಸಂಘ, ಹಸಿರು ಸೇನೆ; ಸ್ವಚ್ಛತಾ ಅಭಿಯಾನ ಶುರು

ಅಕ್ರಮವಾಗಿ ಸಂಗ್ರಹಿಸಿದ್ದ 15 ಕ್ವಿಂಟಾಲ್​ ಪಡಿತರ ಅಕ್ಕಿ ಜಪ್ತಿ

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಸ್ಲಂ ಬೋರ್ಡ್​ನ ಒಂಟಿ ಸೈಯದ್ ಮನೆಯಲ್ಲಿ 15 ಕ್ವಿಂಟಾಲ್​ ಅಕ್ಕಿ ಜಪ್ತಿ ಮಾಡಲಾಗಿದೆ. ಅನ್ನ ಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಲಾಗಿತ್ತು ಎಂದು ತಿಳಿದುಬಂದಿದೆ. ಖಚಿತ ಮಾಹಿತಿ ಮೆರೆಗೆ ಆಹಾರ ಇಲಾಖೆ ಹಾಗೂ ಪೊಲೀಸರು ದಾಳಿ ನಡೆಸಿ 30 ಬ್ಯಾಗ್ ನಲ್ಲಿ ಸಂಗ್ರಹಿಸಿದ 15 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ. ಇನ್ನು ಆರೋಪಿ ಮನೆ ಮನೆಗೆ ತೆರಳಿ ಅನ್ನ ಭಾಗ್ಯ ಅಕ್ಕಿ ಜನರಿಂದ ಖರೀದಿ ಮಾಡ್ತಿದ್ದ. ನಂತರ ಮನೆಯಲ್ಲಿ ಸಂಗ್ರಹ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಪಕ್ಕ ನಿಂತಿದ್ದ ವೇಳೆ ಸಿಡಿಲು ಬಡಿದು ಸಾವು

ಉಡುಪಿಯಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಘಟನೆ ನಡೆದಿದ್ದು, ಸುರೇಶ್​ ಶೆಟ್ಟಿ ಎಂಬಾತ ಮೃತಪಟ್ಟಿದ್ದಾನೆ. ಸಂಜೆ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿರುವ ಹೊತ್ತಲ್ಲಿ ಮನೆಯ ಪಕ್ಕ ನಿಂತಿದ್ದ ವೇಳೆ ಸಿಡಿಲು ಬಿಡಿದಿದೆ. ಈ ವೇಳೆ ಸುರೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us