ಕರ್ನಾಟಕದಲ್ಲಿ ಸ್ಥಾಪನೆಯಾಗಲಿದೆ ವಿಶ್ವ ದರ್ಜೆಯ ಕೃತಕ ಬುದ್ಧಿಮತ್ತೆ ಕೇಂದ್ರ: ಏನಿದರ ವಿಶೇಷ? ಇಲ್ಲಿದೆ ವಿವರ

Centre for Artificial Intelligence: ಕರ್ನಾಟಕ ರಾಜ್ಯದಲ್ಲಿ ವಿಶ್ವ ದರ್ಜೆಯ ಕೃತಕ ಬುದ್ಧಿಮತ್ತೆ ಕೇಂದ್ರ ಸ್ಥಾಪಿಸಲು ವಿಶ್ವ ಆರ್ಥಿಕ ವೇದಿಕೆ ಹಾಗೂ ರಾಜ್ಯ ಐಟಿ ಬಿಟಿ ಇಲಾಖೆ ಒಪ್ಪಂದಕ್ಕೆ ಸಹಿ ಹಾಕಿವೆ. ಇದು ದೇಶದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್​ಗೆ ಸಂಬಂಧಿಸಿದ ವಿಶ್ವ ಮಟ್ಟದ ಮೊದಲ ಕೇಂದ್ರವಾಗಿರಲಿದೆ ಎಂದು ಐಟಿ ಬಿಟಿ ಸಚಿವಾಲಯ ತಿಳಿಸಿದೆ.

ಕರ್ನಾಟಕದಲ್ಲಿ ಸ್ಥಾಪನೆಯಾಗಲಿದೆ ವಿಶ್ವ ದರ್ಜೆಯ ಕೃತಕ ಬುದ್ಧಿಮತ್ತೆ ಕೇಂದ್ರ: ಏನಿದರ ವಿಶೇಷ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Mar 01, 2024 | 10:54 AM

ಬೆಂಗಳೂರು, ಮಾರ್ಚ್​ 1: ಕರ್ನಾಟಕದಲ್ಲಿ ಕೃತಕ ಬುದ್ಧಿಮತ್ತೆ (Artificial Intelligence) ಕೇಂದ್ರವನ್ನು ಸ್ಥಾಪಿಸಲು ವಿಶ್ವ ಆರ್ಥಿಕ ವೇದಿಕೆಯೊಂದಿಗೆ (World Economic Forum) ರಾಜ್ಯ ಸರ್ಕಾರವು ಗುರುವಾರ ಒಪ್ಪಂದ ಪತ್ರಕ್ಕೆ ಸಹಿ ಹಾಕಿದೆ. ಇದು ಭಾರತದಲ್ಲಿ ಕೃತಕ ಬುದ್ಧಿಮತ್ತೆಗೆ ಮೀಸಲಾದ ವಿಶ್ವ ಆರ್ಥಿಕ ವೇದಿಕೆಯ ಏಕೈಕ ಕೇಂದ್ರವಾಗಿರಲಿದೆ. ರಾಜ್ಯದಲ್ಲಿ ಸ್ಥಾಪನೆಯಾಗಲಿರುವ

ಕರ್ನಾಟಕ ಕೇಂದ್ರವು ವಿಶ್ವ ಆರ್ಥಿಕ ವೇದಿಕೆಯ ‘ಸೆಂಟರ್ ಫಾರ್ ಫೋರ್ತ್ ಇಂಡಸ್ಟ್ರಿಯಲ್ ರೆವಲ್ಯೂಷನ್ (ಸಿ4ಐಆರ್) ನೆಟ್‌ವರ್ಕ್‌’ನ ಭಾಗವಾಗಿರಲಿದೆ. ಇದು ಜಾಗತಿಕ ವೇದಿಕೆಯಾಗಿದ್ದು, ಆಡಳಿತದಲ್ಲಿ ತಂತ್ರಜ್ಞಾನ ಅಳವಡಿಕೆ ಮತ್ತು ಡಿಜಿಟಲ್ ಪರಿವರ್ತನೆಯನ್ನು ಕೇಂದ್ರೀಕರಿಸಲಿದೆ ಎಂದು ಐಟಿ-ಬಿಟಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕೇಂದ್ರವು ಉದ್ಯಮ ಕ್ಷೇತ್ರ ಮತ್ತು ಶಿಕ್ಷಣ ಸಂಸ್ಥೆಗಳ ಜಾಲವನ್ನು ಸ್ಥಾಪಿಸಲು ನೆರವಾಗಲಿದೆ. ಜತೆಗೆ ತಂತ್ರಜ್ಞಾನದ ವಿನಿಮಯ, ಸಂಶೋಧನಾ ಸಹಯೋಗಗಳ ಉತ್ತೇಜನಕ್ಕೆ ಸಹಕಾರಿಯಾಗಿರಲಿದೆ. ಜಾಗತಿಕ ಸಮಸ್ಯೆಗಳಿಗೆ ಸಕ್ರಿಯವಾಗಿ ಪ್ರತಿಕ್ರಿಯಿಸಲಿದೆ. ವಿಶ್ವಾದ್ಯಂತ ಇತರ ಪ್ರಾದೇಶಿಕ ಕೇಂದ್ರಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ, ಕರ್ನಾಟಕ ಕೇಂದ್ರವು ಜಾಗತಿಕ ಮಟ್ಟದಲ್ಲಿ ಕೊಡುಗೆ ನೀಡುವ ಗುರಿಯನ್ನು ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕದಲ್ಲಿ ಕೃತಕ ಬುದ್ಧಿಮತ್ತೆ ಸ್ಟಾರ್ಟ್‌ಅಪ್‌ಗಳನ್ನು ಬೆಂಬಲಿಸುವುದು ಮತ್ತು ಪೋಷಿಸುವುದು ನಮ್ಮ ವಿಶಾಲ ದೃಷ್ಟಿಯ ಭಾಗವಾಗಿದೆ. ವಿಶ್ವ ಆರ್ಥಿಕ ವೇದಿಕೆ ಸ್ಥಾಪಿಸುವ ಕೇಂದ್ರವು ಜಾಗತಿಕವಾಗಿ ಸಂಪರ್ಕಿತ ವೇದಿಕೆಯನ್ನು ಒದಗಿಸುತ್ತದೆ. ಕೃತಕ ಬುದ್ಧಿಮತ್ತೆಯ ಡೊಮೇನ್‌ನೊಳಗೆ ಸ್ಟಾರ್ಟ್‌ಅಪ್‌ಗಳಿಗೆ ಸಹಯೋಗ ಮತ್ತು ನೆಟ್‌ವರ್ಕಿಂಗ್ ಅವಕಾಶಗಳನ್ನು ಉತ್ತೇಜಿಸುತ್ತದೆ ಎಂದು ಇಲಾಖೆ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ತುಮಕೂರು ಮೆಟ್ರೋ: ಕಾರ್ಯಸಾಧ್ಯತೆ ಅಧ್ಯಯನಕ್ಕೆ ಬಿಡ್ ಆಹ್ವಾನಿಸಿದ ಬಿಎಂಆರ್​ಸಿಎಲ್

ಕೃತಕ ಬುದ್ಧಿಮತ್ತೆಯು ಡಿಜಿಟಲ್ ಆರ್ಥಿಕತೆ, ಹೂಡಿಕೆಗಳು ಮತ್ತು ಉದ್ಯೋಗ ಬೆಳವಣಿಗೆ ನಿಟ್ಟಿನಲ್ಲಿ ಪ್ರಮುಖವಾಗಲಿದೆ ಎಂದು ಭಾವಿಸಿದ್ದೇವೆ. ಜಾಗತಿಕವಾಗಿ ಕೃತಕ ಬುದ್ಧಿಮತ್ತೆಗೆ ವಿಫುಲ ಅವಕಾಶವುಳ್ಳ ಅಗ್ರ ಐದು ನಗರಗಳಲ್ಲಿ ಬೆಂಗಳೂರು ಗುರುತಿಸಲ್ಪಟ್ಟಿದೆ ಎಂದು ಕರ್ನಾಟಕ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕೃತಕ ಬುದ್ಧಿಮತ್ತೆಯು ಇಂದು ವಿಶ್ವಮಟ್ಟದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿದೆ. ಶಿಕ್ಷಣ, ಆರೋಗ್ಯ, ಆಡಳಿತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ ಕ್ರಮೇಣ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಇದೀಗ ಕೇಂದ್ರ ಸ್ಥಾಪಿಸುವುದರಿಂದ ಕೃತಕ ಬುದ್ಧಿಮತ್ತೆಯ ಕುರಿತಾದ ಅಧ್ಯಯನ, ಬಳಕೆಯ ಸಾಧ್ಯತೆ ಇನ್ನಷ್ಟು ಹೆಚ್ಚಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:47 am, Fri, 1 March 24

Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ