ಉದ್ಯೋಗ ಸೃಷ್ಟಿಗೆ ಪ್ರವಾಸೋದ್ಯಮ ಅಗತ್ಯ: ವಿಶ್ವ ಪ್ರವಾಸೋದ್ಯಮ ದಿನದಂದು ಹಲವು ಸಚಿವರ ಪ್ರತಿಕ್ರಿಯೆ

ಉದ್ಯೋಗ ಸೃಷ್ಟಿಗೆ ಪ್ರವಾಸೋದ್ಯಮದ ಅಭಿವೃದ್ಧಿ ಅತ್ಯಗತ್ಯ ಎಂದು ಕರ್ನಾಟಕದ ಹಲವು ಸಚಿವರು ಒಕ್ಕೊರಲಿನಿಂದ ಹೇಳಿದ್ದಾರೆ.

ಉದ್ಯೋಗ ಸೃಷ್ಟಿಗೆ ಪ್ರವಾಸೋದ್ಯಮ ಅಗತ್ಯ: ವಿಶ್ವ ಪ್ರವಾಸೋದ್ಯಮ ದಿನದಂದು ಹಲವು ಸಚಿವರ ಪ್ರತಿಕ್ರಿಯೆ
ಚಿತ್ರಕೃಪೆ: karnatakatourism
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 27, 2021 | 7:24 PM

ಬೆಂಗಳೂರು: ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯ ಕೋರಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯದ ಬಹುತೇಕ ಸಚಿವರು, ಉದ್ಯೋಗ ಸೃಷ್ಟಿಗೆ ಪ್ರವಾಸೋದ್ಯಮದ ಅಭಿವೃದ್ಧಿ ಅತ್ಯಗತ್ಯ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

‘ಸರ್ವರಿಗೂ ವಿಶ್ವ ಪ್ರವಾಸೋದ್ಯಮ ದಿನದ ಹಾರ್ದಿಕ ಶುಭಾಶಯಗಳು. ಕರ್ನಾಟಕ-ಒಂದು ರಾಜ್ಯ ಹಲವು ಜಗತ್ತು. ಪಕೃತಿ ವೈವಿಧ್ಯ, ವನ್ಯಜೀವಿ, ಸುಂದರ ಕಡಲತೀರ, ಸಾಂಸ್ಕೃತಿಕ ವೈಭವ, ಐತಿಹಾಸಿಕ ಪರಂಪರೆ, ಧಾರ್ಮಿಕ ಪುಣ್ಯಕ್ಷೇತ್ರಗಳು, ದಿವ್ಯ, ಭವ್ಯ, ಅಸಾಧಾರಣ ಅನುಭವ ಬನ್ನಿ, ಕರ್ನಾಟಕಕ್ಕೆ!’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂ ಮಾಡಿದ್ದಾರೆ.

‘ಇಂದು ವಿಶ್ವ ಪ್ರವಾಸೋದ್ಯಮ ದಿನ. ಸ್ಥಳೀಯ ಆರ್ಥಿಕತೆ, ಉದ್ಯೋಗ ಸೃಷ್ಟಿಗೆ ಪ್ರವಾಸೋದ್ಯಮ ಸಹಕಾರಿಯಾಗಿರುವ ಜೊತೆಗೆ ರಾಜ್ಯದ ಪ್ರಕೃತಿ ಸೌಂದರ್ಯ, ಇತಿಹಾಸ, ಪರಂಪರೆ, ಕಲೆ, ಸಂಸ್ಕೃತಿಗಳ ಪರಿಚಯದ ವೇದಿಕೆಯೂ ಆಗಿದೆ. ಸರ್ವರಿಗೂ ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯಗಳು’ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

‘ಪ್ರವಾಸೋದ್ಯಮದಲ್ಲಿ ಉದ್ಯೋಗ ಸೃಷ್ಟಿಗೆ, ಸುಸ್ಥಿರ ಅಭಿವೃದ್ಧಿಗೆ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ. ಪ್ರವಾಸಿತಾಣಗಳ ಸ್ವಚ್ಛತೆ, ಸುರಕ್ಷತೆಯನ್ನು ಕಾಪಾಡೋಣ. ಎಲ್ಲರಿಗೂ ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯಗಳು’ ಎಂದು ಶಿರಾ ಶಾಸಕ ಸಿ.ಎಂ.ರಾಜೇಶ್ ಗೌಡ ತಿಳಿಸಿದ್ದಾರೆ.

‘ಇಂದು ವಿಶ್ವ ಪ್ರವಾಸೋದ್ಯಮ ದಿನ. ಸ್ಥಳೀಯ ಆರ್ಥಿಕತೆ, ಉದ್ಯೋಗ ಸೃಷ್ಠಿಗೆ ಪ್ರವಾಸೋದ್ಯಮ ಸಹಕಾರಿಯಾಗಿರುವ ಜೊತೆಗೆ ರಾಜ್ಯದ ಪ್ರಕೃತಿ ಸೌಂದರ್ಯ, ಇತಿಹಾಸ, ಪರಂಪರೆ, ಕಲೆ, ಸಂಸ್ಕೃತಿಗಳ ಪರಿಚಯದ ವೇದಿಕೆಯೂ ಆಗಿದೆ. ಪ್ರವಾಸೋದ್ಯಮ ತಾಣಗಳನ್ನು ಸಂರಕ್ಷಿಸುವುದರ ಜೊತೆಗೆ ಸ್ವಚ್ಛವಾಗಿಡೋಣ‌, ಸರ್ವರಿಗೂ ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯಗಳು’ ಎಂದು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದ್ದಾರೆ.

‘ನಾಡಿನ ಜನತೆಗೆ, ನಾಡನ್ನು ಅರಸಿ ಬರುವ ಪ್ರವಾಸಿಗರಿಗೆ ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯಗಳು. ನಾಡಿನ ಅದ್ವಿತೀಯ ಸೊಬಗು, ಇತಿಹಾಸ, ಸಂಸ್ಕೃತಿ, ಕಲೆ, ಜನಪದಗಳನ್ನು ಜಗತ್ತಿಗೆ ಪರಿಚಯಿಸುವ ದೊಡ್ಡ ವೇದಿಕೆ ಪ್ರವಾಸೋದ್ಯಮ. ಈ ವಲಯದ ಸುಧಾರಣೆ, ಪ್ರಗತಿಗೆ ಪೂರಕ. ನಾವೂ ನಮ್ಮ ರಾಜ್ಯದ ಪ್ರವಾಸಿ ತಾಣಗಳಿಗೆ ಭೇಟಿ ನೀಡೋಣ, ಕರ್ನಾಟಕವನ್ನು ತಿಳಿಯೋಣ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

‘ಮಂಜು ಮುಸುಕಿದ ಬೆಟ್ಟಗಳು, ವಿಸ್ಮಯಕಾರಿ ಚಾರಣ ದಾರಿಗಳು, ಸರ್ ಎಂ.ವಿಶ್ವೇಶ್ವರಯ್ಯನವರ ಹುಟ್ಟೂರು, ಐತಿಹಾಸಿಕ ಗುಡಿ-ಗೋಪುರಗಳು. ಇಷ್ಟೆಲ್ಲ ವೈಶಿಷ್ಟ್ಯತೆ, ವೈವಿಧ್ಯತೆಗಳುಳ್ಳ ಚಿಕ್ಕಬಳ್ಳಾಪುರ ಎಲ್ಲ ವಯೋಮಾನದ ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿದೆ. ಬನ್ನಿ ನಮ್ಮೂರಿಗೆ, ಚಿಕ್ಕಬಳ್ಳಾಪುರಕ್ಕೆ. ಎಲ್ಲರಿಗೂ ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯಗಳು’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೂ ಮಾಡಿದ್ದಾರೆ.

(World Tourism Day CM Basavaraj Bommai remembers importance of tourism in employment generation)

ಇದನ್ನೂ ಓದಿ: World Tourism Day 2021: ವಿಶ್ವ ಪ್ರವಾಸೋದ್ಯಮ ದಿನಕ್ಕೆ ವಿಶೇಷ ಅಂಚೆ ಕವರ್ ಬಿಡುಗಡೆ ಮಾಡಿದ ಸಚಿವ ಆನಂದ್ ಸಿಂಗ್

ಇದನ್ನೂ ಓದಿ: World Tourism Day 2021: ವಿಶ್ವ ಪ್ರವಾಸೋದ್ಯಮ ದಿನದ ಇತಿಹಾಸ, ಆಶಯ ಮತ್ತು ವಿಶೇಷತೆಗಳೇನು? ಇಲ್ಲಿದೆ ವಿವರ

Published On - 7:20 pm, Mon, 27 September 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ