World Yoga Day 2021: ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ.. ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಸಿಎಂ ಯಡಿಯೂರಪ್ಪ

ಸಿಎಂ ಬಿಎಸ್ಯಡಿಯೂರಪ್ಪ ಯೋಗ ದಿನದ ಶುಭಾಶಯ ತಿಳಿಸಿದ್ದಾರೆ. ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು. ಜೀವನದ ಸಮನ್ವಯತೆಯನ್ನೂ ನಮ್ಮ ಹಿರಿಯರು ಯೋಗವೆಂದೇ ಕರೆದರು. ಸಾಂಕ್ರಾಮಿಕದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯೋಗಾಭ್ಯಾಸದ ಪಾತ್ರ ಮಹತ್ವದ್ದಾಗಿದೆ. ...

World Yoga Day 2021: ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ.. ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಸಿಎಂ ಯಡಿಯೂರಪ್ಪ
ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯ ತಿಳಿಸಿದ ಸಿಎಂ
Follow us
TV9 Web
| Updated By: Skanda

Updated on:Jun 21, 2021 | 9:23 AM

ಬೆಂಗಳೂರು: ಜೂನ್ 21 ಇಂದು ಅಂತಾರಾಷ್ಟ್ರೀಯ ಯೋಗ ದಿನ. ಒಳ್ಳೆಯ ಆರೋಗ್ಯ, ದೀರ್ಘಾಯುಷ್ಯ ಸೇರಿ ನಮ್ಮ ಜೀವನದ ಅನೇಕ ಬದಲಾವಣೆಗೆ ಯೋಗ ಒಂದು ಮದ್ದು ಎಂಬುವುದು ಈಗಾಗಲೇ ಸಾಬೀತಾಗಿದೆ. ಹೀಗಾಗಿ ಇದರ ಪ್ರಮುಖ್ಯತೆಯನ್ನು ಸಾರುವ ಸಲುವಾಗಿ ಪ್ರತಿ ವರ್ಷ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತೆ. ಸದ್ಯ ಸಿಎಂ ಬಿ.ಎಸ್​.ಯಡಿಯೂರಪ್ಪ ಯೋಗ ದಿನದ ಶುಭಾಶಯ ತಿಳಿಸಿದ್ದಾರೆ.

ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು. ಜೀವನದ ಸಮನ್ವಯತೆಯನ್ನೂ ನಮ್ಮ ಹಿರಿಯರು ಯೋಗವೆಂದೇ ಕರೆದರು. ಸಾಂಕ್ರಾಮಿಕದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯೋಗಾಭ್ಯಾಸದ ಪಾತ್ರ ಮಹತ್ವದ್ದಾಗಿದೆ. ಆರೋಗ್ಯಪೂರ್ಣ ಶರೀರ, ಮನಸ್ಸುಗಳ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ ಎಂದು ಟ್ವೀಟ್ ಮೂಲಕ ಸಿಎಂ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

ಇಂದು 7ನೇ ಅಂತಾರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಯುಷ್ ಇಲಾಖೆಯಿಂದ ‘ಸ್ವಾಸ್ಥ್ಯಕ್ಕಾಗಿ ಯೋಗ’ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಾರಿ ಮನೆಯಲ್ಲಿಯೇ ಇದ್ದು ಯೋಗ ಮಾಡುವಂತೆ ಕರೆ ನೀಡಲಾಗಿದೆ. ಕೊರೊನಾ ಹಿನ್ನೆಲೆ ವರ್ಚುವಲ್ ಮೂಲಕ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಯೋಗಾಭ್ಯಾಸ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಯೋಗ ಮಾಡಿದ್ದಾರೆ.

ಜನರ ಆರೋಗ್ಯ ಕಾಪಾಡುವಲ್ಲಿ ಯೋಗ ಪಾತ್ರ ಮಹತ್ವದ್ದು ವಿಶ್ವಕ್ಕೆ ಭಾರತ ಕೊಟ್ಟ ಅತ್ಯಂತ ಮಹತ್ವದ ಕೊಡುಗೆ ಯೋಗ ಎಂದು ಯೋಗ ದಿನ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ತಿಳಿಸಿದ್ದಾರೆ. ವಿಶ್ವದ 225ಕ್ಕೂ ಹೆಚ್ಚು ದೇಶಗಳಲ್ಲಿ ಇಂದು ಯೋಗ ಆಚರಣೆ ಮಾಡಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ಯೋಗ ಮಾಡಿ. ಕೊರೊನಾ ಸಂಕಷ್ಟದ ವೇಳೆ ಜನರ ಆರೋಗ್ಯ ಕಾಪಾಡುವಲ್ಲಿ ಯೋಗ ಪಾತ್ರ ಮಹತ್ವದ್ದು. ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಲಗೊಳ್ಳುತ್ತೆ. ಸಮಾಜ ನಿರ್ಮಾಣದಲ್ಲಿ ಯೋಗ ಸಹಕಾರಿಯಾಗಲಿದೆ. ಏಕಾಗ್ರತೆಗೆ ಯೋಗ ಸಹಕಾರಿಯಾಗಲಿದೆ. ಯೋಗ ಔಷಧರಹಿತ ಚಿಕಿತ್ಸಾ ಪದ್ಧತಿಯಾಗಿದೆ. ಯಾವುದೇ ಅಡ್ಡಪರಿಣಾವಿಲ್ಲದ ಚಿಕಿತ್ಸಾ ಪದ್ಧತಿಯಾಗಿದೆ ಎಂದು ಯೋಗ ದಿನ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ಹೇಳಿದ್ರು.

ಇದನ್ನೂ ಓದಿ: CM Yediyurappa PC Live: 1 ವಾರ ಲಾಕ್​ಡೌನ್ ಮುಂದುವರಿಕೆ; 500 ಕೋಟಿಯ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ

Published On - 7:10 am, Mon, 21 June 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ