AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹೇಳಿಕೆಯ ಹಿಂದಿದ್ದ ಭಾವ ಇದು: ಸಾಹಿತಿ ದೊಡ್ಡರಂಗೇಗೌಡ ಸ್ಪಷ್ಟನೆ

‘ನನ್ನ ಈ ಹೇಳಿಕೆ ದಲಿತರ ವಿರುದ್ಧವಾದದ್ದಲ್ಲ. ಉಳ್ಳವರ ವಿರುದ್ಧವಾದದ್ದು, ಬಡವರ ಪರವಾದದ್ದು. ಇದು ತಪ್ಪು ಅರ್ಥಗಳಿಗೆ ಎಡೆಮಾಡಬಾರದು. ಇದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ’ ಎಂದು ದೊಡ್ಡರಂಗೇಗೌಡರು ಸ್ಪಷ್ಟನೆ ನೀಡಿದ್ದಾರೆ.

ನನ್ನ ಹೇಳಿಕೆಯ ಹಿಂದಿದ್ದ ಭಾವ ಇದು: ಸಾಹಿತಿ ದೊಡ್ಡರಂಗೇಗೌಡ ಸ್ಪಷ್ಟನೆ
ಡಾ.ದೊಡ್ಡರಂಗೇಗೌಡ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 22, 2021 | 3:42 PM

Share

ಬೆಂಗಳೂರು: ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರೂ ಆಗಿರುವ ಸಾಹಿತಿ ದೊಡ್ಡರಂಗೇಗೌಡರು ಸಂವಿಧಾನ ತಿದ್ದುಪಡಿ ಕುರಿತು ನೀಡಿದ್ದ ಹೇಳಿಕೆ ವ್ಯಾಪಕ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಸ್ವತಃ ದೊಡ್ಡರಂಗೇಗೌಡರೇ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿ, ಗೊಂದಲ ನಿವಾರಿಸುವ ಪ್ರಯತ್ನ ಮಾಡಿದ್ದಾರೆ.

‘ನಮ್ಮದು ಬಹುಮುಖಿ ರಾಷ್ಟ್ರ; ಆದರೂ ಏಕರೂಪದ ಶಿಕ್ಷಣ ಇಲ್ಲಿಲ್ಲ. ಈಗ ನಮಗೆ ನಮ್ಮ ದೇಶದಲ್ಲಿ ಏಕರೂಪ ಶಿಕ್ಷಣ ಅನಿವಾರ್ಯ ಎಂದು ಅನ್ನಿಸುತ್ತಿದೆ. ಬಡವರು ಬಡವರಾಗಿಯೇ ಉಳಿಯುತ್ತಿದ್ದಾರೆ. ಬಲ್ಲಿದರು ಹೆಚ್ಚಿನ ಲಾಭಗಳನ್ನು ಗಳಿಸುತ್ತಿದ್ದಾರೆ. ಎಲ್ಲರಿಗೂ ಒಂದೇ ರೀತಿ ಶಿಕ್ಷಣ ದೊರೆಯುವಂತಾಗಬೇಕು’ ಎಂದು ಅವರು ತಿಳಿಸಿದ್ದಾರೆ.

‘ಏಕರೂಪದ ಶಿಕ್ಷಣ ಪದ್ಧತಿ ಜಾರಿಗೆ ಬಂದಾಗ ಮಾತ್ರ ಸಮಾನತೆ ಸಾಧ್ಯ; ಉಳ್ಳವರು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಹೀಗಾಗಿ ‘ಸಾಮಾಜಿಕ ನ್ಯಾಯ’ ಸಿಗದಂತಾಗಿದೆ. 12ನೇ ಶತಮಾನದಲ್ಲಿ ಅದರಲ್ಲೂ ಅನುಭವ ಮಂಟಪವು ಎಲ್ಲರಿಗೂ ಮಾದರಿಯಾಗಬೇಕು. ಮುಖ್ಯವಾಗಿ ಹಿಂದುಳಿದವರಿಗೆ ಹೆಚ್ಚಿನ ಅವಕಾಶ ಸಿಗುವಂತಾಗಬೇಕು’ ಎಂದು ಹೇಳಿದ್ದಾರೆ.

‘ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗಬಾರದು; ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಮೊದಲು ನಮ್ಮಲ್ಲಿ ಏಕರೂಪದ ಶಿಕ್ಷಣ ಜಾರಿಗೆ ಬರಬೇಕು. ಈ ನಿಟ್ಟಿನಲ್ಲಿ ಭಾರತದ ಸಂವಿಧಾನದಲ್ಲಿ ಮಾರ್ಪಾಟು ಮಾಡುವುದು ಸೂಕ್ತವಾದೀತು. ನನ್ನ ಈ ಹೇಳಿಕೆ ದಲಿತರ ವಿರುದ್ಧವಾದದ್ದಲ್ಲ. ಉಳ್ಳವರ ವಿರುದ್ಧವಾದದ್ದು, ಬಡವರ ಪರವಾದದ್ದು. ಇದು ತಪ್ಪು ಅರ್ಥಗಳಿಗೆ ಎಡೆಮಾಡಬಾರದು. ಇದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ’ ಎಂದು ದೊಡ್ಡರಂಗೇಗೌಡರು ಸ್ಪಷ್ಟನೆ ನೀಡಿದ್ದಾರೆ.

ಸಂವಿಧಾನ ತಿದ್ದುಪಡಿ ಬಗ್ಗೆ ದೊಡ್ಡರಂಗೇಗೌಡರ ಮಾತು ಹಾಸನದಲ್ಲಿ ಶನಿವಾರ (ಫೆ.20) ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ್ದ ದೊಡ್ಡರಂಗೇಗೌಡ, ‘ಸಂವಿಧಾನದ ಕೆಲ ವಿಷಯಗಳು 2021ಕ್ಕೆ ಪ್ರಸ್ತುತ ಅಲ್ಲ. ಸಂವಿಧಾನ ತಿದ್ದುಪಡಿ ಅನಿವಾರ್ಯ’ ಎಂದು ಹೇಳಿದ್ದರು.

‘ಹೊಸ ಕಾಲದ ಅವಶ್ಯಕತೆಗಳಿಗೆ ತಕ್ಕಂತೆ ಸಂವಿಧಾನವನ್ನು ಮಾರ್ಪಡಿಸುವುದು ಅಗತ್ಯ. ಇದರಿಂದ ಸರ್ವರಿಗೂ ಸಮಪಾಲು ಮತ್ತು ಸಮಬಾಳು ಸಿಗಲು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಈ ಪ್ರಯತ್ನ ಮಾಡಬೇಕು’ ಎಂದು ಹೇಳಿದ್ದರು.

ದೊಡ್ಡರಂಗೇಗೌಡರ ಈ ಹೇಳಿಕೆಯ ಬಗ್ಗೆ ವ್ಯಾಪಕ ಆಕ್ಷೇಪಗಳು ವ್ಯಕ್ತವಾಗಿದ್ದವು.

Doddarangegowda Clarification

ದೊಡ್ಡರಂಗೇಗೌಡರು ನೀಡಿರುವ ಸ್ಪಷ್ಟನೆ

Published On - 2:14 pm, Mon, 22 February 21

ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!