ಜೆ.ಸಿ.ನಗರದ ಖಬರಸ್ತಾನದಲ್ಲಿ ನಿಸಾರ್ ಅಹಮದ್ ಅಂತ್ಯಕ್ರಿಯೆ

ಬೆಂಗಳೂರು: ಹಿರಿಯ ಸಾಹಿತಿ ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರಿನ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ನಾಳೆ ಜೆ.ಸಿ.ನಗರದ ಖಬರಸ್ತಾನದಲ್ಲಿ ಪಾರ್ಥಿವ ಶರೀರದ ಅಂತ್ಯಕ್ರಿಯೆಗೆ ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಪದ್ಮನಾಭನಗರದ ನಿಸಾರ್ ಅಹಮದ್ ನಿವಾಸದ ಬಳಿ ಅಂತಿಮ ದರ್ಶನಕ್ಕಾಗಿ ಅಭಿಮಾನಿಗಳು ಸಾಲಾಗಿ ನಿಂತಿದ್ದಾರೆ. ಮನೆ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ. ಇದೇ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಪೊಲೀಸರು ಸಲಹೆ ನೀಡುತ್ತಿದ್ದಾರೆ. ಕೊರೊನಾ ಲಾಕ್​ಡೌನ್ ಇರುವ ಕಾರಣ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಕುಟುಂಬ ನಿರಾಕರಿಸುತ್ತಿದೆ. ನಾಳೆ ಜೆ.ಸಿ.ನಗರದ ಖಬರಸ್ತಾನದಲ್ಲಿ ಅಂತ್ಯಕ್ರಿಯೆ ಮಾಡಲು‌ […]

ಜೆ.ಸಿ.ನಗರದ ಖಬರಸ್ತಾನದಲ್ಲಿ ನಿಸಾರ್ ಅಹಮದ್ ಅಂತ್ಯಕ್ರಿಯೆ

Updated on: May 03, 2020 | 3:35 PM

ಬೆಂಗಳೂರು: ಹಿರಿಯ ಸಾಹಿತಿ ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರಿನ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ನಾಳೆ ಜೆ.ಸಿ.ನಗರದ ಖಬರಸ್ತಾನದಲ್ಲಿ ಪಾರ್ಥಿವ ಶರೀರದ ಅಂತ್ಯಕ್ರಿಯೆಗೆ ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಪದ್ಮನಾಭನಗರದ ನಿಸಾರ್ ಅಹಮದ್ ನಿವಾಸದ ಬಳಿ ಅಂತಿಮ ದರ್ಶನಕ್ಕಾಗಿ ಅಭಿಮಾನಿಗಳು ಸಾಲಾಗಿ ನಿಂತಿದ್ದಾರೆ. ಮನೆ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ. ಇದೇ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಪೊಲೀಸರು ಸಲಹೆ ನೀಡುತ್ತಿದ್ದಾರೆ.

ಕೊರೊನಾ ಲಾಕ್​ಡೌನ್ ಇರುವ ಕಾರಣ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಕುಟುಂಬ ನಿರಾಕರಿಸುತ್ತಿದೆ. ನಾಳೆ ಜೆ.ಸಿ.ನಗರದ ಖಬರಸ್ತಾನದಲ್ಲಿ ಅಂತ್ಯಕ್ರಿಯೆ ಮಾಡಲು‌ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಒಬ್ಬ ಮಗ ದುಬೈನಲ್ಲಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.