ಕಾಂಗ್ರೆಸ್​-ಬಿಜೆಪಿ ಕಾರ್ಯಕರ್ತರ ಘರ್ಷಣೆ: ಸುರಪುರದಲ್ಲಿ 2 ದಿನ ನಿಷೇಧಾಜ್ಞೆ ಜಾರಿ, ಕ್ಷೇತ್ರದಾದ್ಯಂತ ಖಾಕಿ ಸರ್ಪಗಾವಲು

|

Updated on: Apr 07, 2023 | 10:14 AM

ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ 2 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸುರಪುರ ಕ್ಷೇತ್ರದಲ್ಲಿ ಇಂದಿನಿಂದ ನಾಳೆ(ಏಪ್ರಿಲ್ 08) ರಾತ್ರಿ 8 ಗಂಟೆವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಯಾದಗಿರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್​-ಬಿಜೆಪಿ ಕಾರ್ಯಕರ್ತರ ಘರ್ಷಣೆ: ಸುರಪುರದಲ್ಲಿ 2 ದಿನ ನಿಷೇಧಾಜ್ಞೆ ಜಾರಿ, ಕ್ಷೇತ್ರದಾದ್ಯಂತ ಖಾಕಿ ಸರ್ಪಗಾವಲು
Follow us on

ಯಾದಗಿರಿ: ಜಿಲ್ಲೆಯ ಸುರಪುರ ಕ್ಷೇತ್ರದ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಕಾರ್ಯಕರ್ತರ ಮದ್ಯೆ ಗುರುವಾರ ಸಂಘರ್ಷ ನಡೆದಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ 2 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸುರಪುರ ಕ್ಷೇತ್ರದಲ್ಲಿ ಇಂದಿನಿಂದ ನಾಳೆ(ಏಪ್ರಿಲ್ 08) ರಾತ್ರಿ 8 ಗಂಟೆವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಯಾದಗಿರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಲಬುರಗಿ ಈಶಾನ್ಯ ವಲಯ ವಿಭಾಗೀಯ ಐಜಿಪಿ ಅನುಪಮ ಅಗರ್ವಾಲ್ ನಿನ್ನೆ ರಾತ್ರಿಯಿಂದಲೂ ಕೊಡೆಕಲ್​ನಲ್ಲೇ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ, 15 ಕಾರುಗಳು ಜಖಂ

ಮುಂಜಾಗ್ರತಾ ಕ್ರಮವಾಗಿ 3 ಕೆಎಸ್​​ಆರ್​ಪಿ ತುಕಡಿ, 1 ಅರೆಸೇನಾ ಪಡೆ, ಇಬ್ಬರು DySP, 5 ಸಿಪಿಐ, 10 PSI, 100 ಕಾನ್ಸ್​ಟೇಬಲ್​ಗಳನ್ನು ನಿಯೋಜಿಸಲಾಗಿದೆ. ಐಜಿಪಿ ಅನುಪಮ ಅಗರವಾಲ, ಎಸ್ಪಿ ಡಾ. ಸಿ.ಬಿ. ವೇದಮೂರ್ತಿ ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಯತ್ನಿಸುತ್ತಿಸುತ್ತಿದ್ದಾರೆ. ಇನ್ನು ಘಟನೆ ಸಂಬಂಧ ಪೊಲೀಸರು ಈಗಾಗಲೇ 4 ಪ್ರಕರಣ ದಾಖಲಿಸಿಕೊಂಡಿದ್ದು, ಗಲಾಟೆಯಲ್ಲಿ ಭಾಗಿಯಾದ 118 ಜನರ ಮೇಲೆ ಸಿಆರ್​ಪಿಸಿ 107 ಕಲಂ ದಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ. ಈವರೆಗೆ 18 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್​​​​​​ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕನ ಬೆಂಬಲಿಗರು ಕಾರುಗಳಲ್ಲಿ ಹಾರ್ನ್ ಮಾಡಿ ತೆರಳುತ್ತಿದ್ದರು. ಇದಕ್ಕೆ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಹಾರ್ನ್ ಮಾಡದಂತೆ ತಾಕೀತು ಮಾಡಿದ್ದರು. ಇದೇ ವಿಷಯಕ್ಕೆ ಜಗಳ ಆರಂಭವಾಗಿತ್ತು. ಮೊದಲು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡರ ಕಾರುಗಳ ಮೇಲೆ ಕಲ್ಲು ತೂರಿದ್ದಾರೆ ಎನ್ನಲಾಗಿದ್ದು, ಘಟನೆಯಲ್ಲಿ ಕೈ ಮುಖಂಡರ 15 ಕಾರುಗಳು ಗಾಜುಗಳು ಸಂಪೂರ್ಣವಾಗಿ ಪುಡಿ ಪುಡಿಯಾಗಿದ್ದವು. ಬಳಿಕ ಕಾಂಗ್ರೆಸ್​​​​​ ಕಾರ್ಯಕರ್ತರು ಪ್ರತಿದಾಳಿ ನಡೆಸಿದ್ದರು. ಘಟನೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರಿಗೂ ಗಾಯಗಳಾಗಿವೆ.

ಇನ್ನಷ್ಟು ಯಾದಗಿರಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ