Yadgir News: ಜಾನುವಾರುಗಳನ್ನು ಕದ್ದು ಸಾಗಿಸುತ್ತಿದ್ದ 8 ಆರೋಪಿಗಳ ಬಂಧನ: ಕರುಗಳು ಸೇರಿ 25 ಹಸುಗಳ ರಕ್ಷಣೆ

ಜಾನುವಾರುಗಳನ್ನು ಕದ್ದು ಸಾಗಿಸುತ್ತಿದ್ದ 8 ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ದಾಳಿ ವೇಳೆ ಕರುಗಳು ಸೇರಿ 25 ಜಾನುವಾರುಗಳ ರಕ್ಷಣೆ ಮಾಡಲಾಗಿದೆ.

Yadgir News: ಜಾನುವಾರುಗಳನ್ನು ಕದ್ದು ಸಾಗಿಸುತ್ತಿದ್ದ 8 ಆರೋಪಿಗಳ ಬಂಧನ: ಕರುಗಳು ಸೇರಿ 25 ಹಸುಗಳ ರಕ್ಷಣೆ
ದನಗಳ್ಳರ ಬಂಧಿಸಿದ ಯಾದಗಿರಿ ಪೊಲೀಸ್​
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 13, 2023 | 6:07 PM

ಯಾದಗಿರಿ: ಜಾನುವಾರುಗಳನ್ನು ಕದ್ದು ಸಾಗಿಸುತ್ತಿದ್ದ 8 ಆರೋಪಿ (accused) ಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ದಾಳಿ ವೇಳೆ ಕರುಗಳು ಸೇರಿ 25 ಜಾನುವಾರುಗಳ ರಕ್ಷಣೆ ಮಾಡಲಾಗಿದೆ. ಬಂಧಿತ 8 ಆರೋಪಿಗಳು ಕೂಡ ಕಲಬುರಗಿ ಜಿಲ್ಲೆ ಮೂಲದವರು ಎನ್ನಲಾಗಿದೆ. ರಾತ್ರಿವೇಳೆ ಕದ್ದು ಕಸಾಯಿಖಾನೆಗೆ ಹಸುಗಳನ್ನು ಕಳ್ಳರು ಸಾಗಿಸುತ್ತಿದ್ದರು. ಯಾದಗಿರಿಯಿಂದ ಕಲಬುರಗಿ ಕಡೆ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ಮಾಡಿ ಅರೆಸ್ಟ್​ ಮಾಡಿದ್ದಾರೆ. ಯಾದಗಿರಿ ಗ್ರಾಮಾಂತರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಾಂಸಕ್ಕಾಗಿ ಗೋವುಗಳ ಮಾರಣಹೋಮ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಗೋಮಾಂಸಕ್ಕೆ ಬೇಡಿಕೆ ಹೆಚ್ಚಾಗಿದ್ದು, ಮಾಂಸಕ್ಕಾಗಿ ಗೋವುಗಳ ಮಾರಣಹೋಮ ನಡೆಯುತ್ತಿದೆ. ಗೋವುಗಳ ಕಳ್ಳತನ ಮಾಡಿ ದಂಧೆಕೋರರು ಗೋಹತ್ಯೆ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಜಿಲ್ಲೆಯ N.R ಪುರ‌‌ ತಾಲೂಕಿನ ಮಾಗುಂಡಿ ಗ್ರಾಮದ ಸೇತುವೆ ಕೆಳಭಾಗದಲ್ಲಿ ಗೋವಿನ ಎರಡು ತಲೆ‌, ಎಂಟು ಕಾಲುಗಳು ಪತ್ತೆ ಆಗಿವೆ. ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ, N.Rಪುರ ತಾಲೂಕಿನಲ್ಲಿ ನಿರಂತರವಾಗಿ ಗೋಮಾಂಸ ದಂಧೆ ನಡೆಯುತ್ತಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಗೋವುಗಳನ್ನು ದಂಧೆಕೋರರು ಬಿಡುತ್ತಿಲ್ಲ. ಗೋವು ಕಳ್ಳರ‌ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ಮಲೆನಾಡು ಭಾಗದಲ್ಲಿ ಗೋಮಾಂಸ ದಂಧೆ: ಗೋವು ಕಳ್ಳರ‌ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೋವುಗಳ ಕಳ್ಳತನ ನಿರಂತರವಾಗಿ ನಡೆಯುತ್ತಿದೆ. ಸತ್ತಿಹಳ್ಳಿ ಗ್ರಾಮದಲ್ಲಿ ಗೋವುಗಳ ಕಳ್ಳತನ ನಡೆದಿದ್ದು, ಕೃತ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ. ಕಳ್ಳತನ ಮಾಡಿದ ಗೋವುಗಳ ಮಾಂಸವನ್ನು ದಂಧೆಕೋರರು ಮಾರಾಟ ಮಾಡುತ್ತಿದ್ದಾರೆ.

ಅದರಲ್ಲಿಯೂ ಕಾಫಿ ತೋಟಗಳಲ್ಲಿ ಕೂಲಿ ಕೆಲಸಕ್ಕೆ ಬಂದಿರುವ ಸಾವಿರಾರು ಅಸ್ಸಾಂ ಕಾರ್ಮಿಕರಿಂದ  ಮಾಂಸಕ್ಕೆ‌ ಹೆಚ್ಚಿನ ಬೇಡಿಕೆ ಬಂದಿದೆ. ಸದ್ಯ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ತಾಯಿ ಕೊಂದು ಸೂಟ್​​ಕೇಸ್​​ನಲ್ಲಿ ಠಾಣೆಗೆ ಶವ ತಂದ ಮಗಳು: ಆರೋಪಿ ಹೇಳಿಕೆಗೆ ಪೊಲೀಸರೇ ಶಾಕ್

ಅಕ್ರಮ ಗೋಮಾಂಸ ಸಾಗಾಟ ಪತ್ತೆ

ದಕ್ಷಿಣ ಕನ್ನಡ: ಟೂರಿಸ್ಟ್ ವಾಹನದಲ್ಲಿ ಮಹಿಳೆಯರನ್ನು ಮುಂದಿಟ್ಟುಕೊಂಡು ಕುಂದಾಪುರದ ಕಂಡ್ಲೂರು ನಿಂದ ಭಟ್ಕಳದ ಕಡೆಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. 300 ಕೆಜಿಗೂ ಅಧಿಕ ಗೋಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ದುಷ್ಕರ್ಮಿಗಳು ಅಕ್ರಮ ದಂಧೆಗೆ ಮಹಿಳೆಯರನ್ನು ಬಳಸಿಕೊಂಡಿದ್ದರು. ಪೊಲೀಸರು ಹಿಂದೂ ಸಂಘಟನೆಗಳ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬಯಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:59 pm, Tue, 13 June 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್