AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳಿಬ್ಬರ ಮದುವೆಗೆ ಅಡ್ಡಿಯಾದ ಜಾತಿ; ಮನೆಯವರ ವಿರೋಧಕ್ಕೆ ರಕ್ಷಣೆ ಕೋರಿ ಯುವ ಜೋಡಿ ಪೊಲೀಸ್​ ಮೊರೆ

ಅವರಿಬ್ಬರು ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದಾರೆ. ಇದೀಗ ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಇಬ್ಬರ ಜಾತಿ ಬೇರೆ ಬೇರೆಯಾಗಿದ್ದರಿಂದ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದೆ. ಮೇಲ್ಚಾತಿಯ ಯುವತಿಗೆ ಕೆಳ ಜಾತಿಯ ಯುವಕ ಮದುವೆಯಾಗುತ್ತಿದ್ದ ಹಿನ್ನಲೆ ಯುವತಿ ಮನೆಯಿಂದ ವಿರೋಧ ವ್ಯಕ್ತವಾಗಿದೆ. ಇದೆ ಕಾರಣಕ್ಕೆ ರಕ್ಷಣೆ ಕೋರಿ ಯುವ ಜೋಡಿ ಪೊಲೀಸರ ಮೊರೆ ಹೋಗಿದ್ದಾರೆ.

ಪ್ರೇಮಿಗಳಿಬ್ಬರ ಮದುವೆಗೆ ಅಡ್ಡಿಯಾದ ಜಾತಿ; ಮನೆಯವರ ವಿರೋಧಕ್ಕೆ ರಕ್ಷಣೆ ಕೋರಿ ಯುವ ಜೋಡಿ ಪೊಲೀಸ್​ ಮೊರೆ
ಅಂತರ್ಜಾತಿ ವಿವಾಹಕ್ಕೆ ಮನೆಯವರ ಅಡ್ಡಿ;ರಕ್ಷಣೆ ಕೋರಿ ಯುವ ಜೋಡಿ ಪೊಲೀಸ್ ಮೊರೆ
ಅಮೀನ್​ ಸಾಬ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 17, 2024 | 7:38 PM

Share

ಯಾದಗಿರಿ, ಜು.17: ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ ಹಿನ್ನಲೆ ಪ್ರೇಮಿಗಳಿಬ್ಬರು(Lovers) ಪೊಲೀಸರ ಮೊರೆ ಹೋದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಮೇಲ್ಜಾತಿಯ ಯುವತಿ ಜೊತೆ ಕೆಳ ಜಾತಿಯ ಯುವಕ ಮದುವೆಯಾಗಲು ಹೊರಟಿದ್ದಾನೆ ಎಂಬ ಕಾರಣಕ್ಕೆ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದೆ. ಇನ್ನು ಯಾದಗಿರಿ(Yadgiri) ಜಿಲ್ಲೆಯ ಶಹಾಪುರ ತಾಲೂಕಿನ ಹುಲಕಲ್ ಗ್ರಾಮದ ರವಿಕಿರಣ್ ಎಂಬಾತ್ ಧಾರವಾಡ ಮೂಲದ ಸುಪ್ರೀತಾ ಎಂಬಾಕೆಯನ್ನ ಪ್ರೀತಿಸುತ್ತಿದ್ದಾನೆ. ಪರಸ್ಪರ ಪ್ರೀತಿ ಮಾಡಿದ ಜೋಡಿ ಈಗ ಮದುವೆಗೆ ಮುಂದಾಗಿದೆ. ಆದ್ರೆ, ಯುವಕ ದಲಿತ ಸಮುದಾಯಕ್ಕೆ ಸೇರಿದ್ರೆ, ಯುವತಿ ಜಂಗಮ ಸಮುದಾಯಕ್ಕೆ ಸೇರಿದ್ದಾಳೆ. ಇದೆ ಕಾರಣಕ್ಕೆ ಯುವತಿ ಕುಟುಂಬಸ್ಥರು ಮದುವೆಗೆ ಒಪ್ಪುತ್ತಿಲ್ಲ. ಮೇಲ್ನೋಟಕ್ಕೆ ಮದುವೆ ಮಾಡಿಸುತ್ತೆವೆ ಎಂದು ಹೇಳುತ್ತಿದ್ದಾರೆ. ಆದರೆ ಮದುವೆ ಹೆಸರಲ್ಲಿ ಏನಾದರೂ ಮಾಡುತ್ತಾರೆ ಎಂದು ಪ್ರೇಮಿಗಳಿಗೆ ಭಯ ಶುರುವಾಗಿದೆ.

ಯಾದಗಿರಿ ಮೂಲದ ರವಿಕಿರಣ್ ಸಹೋದರ ಧಾರವಾಡದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಅದೇ ಕಾಲೇಜಿನಲ್ಲಿ ಸುಪ್ರೀತಾ ಕೂಡ ಪದವಿ ಓದುತ್ತಿದ್ದಾಳೆ. ಸಹೋದರನನ್ನ ನೋಡಿಕೊಂಡು ಮಾತಾಡಿಸಲು ಹೋದಾಗ ರವಿಕಿರಣ್​ಗೆ ಸುಪ್ರೀತಾ ಪರಿಚಯವಾಗಿದ್ದಾಳೆ. ಇದೆ ವೇಳೆ ಪರಿಚಯ ಸ್ನೇಹಕ್ಕೆ ತಿರುಗಿದೆ. ಕೆಲ ತಿಂಗಳುಗಳ ಬಳಿಕ ಸ್ನೇಹ ಪ್ರೀತಿಯಾಗಿ ಬದಲಾಗಿದೆ. ಹೀಗಾಗಿ ಪರಸ್ಪರ ಫೋನ್​ನಲ್ಲಿ ಕಳೆದ ಒಂದು ವರ್ಷದಿಂದ ಮಾತಾಡುತ್ತಾ ಬಂದಿದ್ದಾರೆ. ಕೊನೆಗೆ ಇಬ್ಬರು ಮದುವೆಯಾಗಲು ಸಹ ಸಿದ್ದರಾಗಿದ್ದರು. ಈ ವಿಚಾರ ಸುಪ್ರೀತಾ ಪೋಷಕರ ಮುಂದೆ ಹೇಳಿದ್ದಾಳೆ. ಆದ್ರೆ, ಪೋಷಕರು ಯುವಕ ಕೆಳ ಜಾತಿಗೆ ಸೇರಿದ್ದರಿಂದ ಮದುವೆಗೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ ಕೊನೆಗೆ ಇಬ್ಬರು ಮನೆ ಬಿಟ್ಟು ಬಂದು ಮದುವೆಯಾಗಲು ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ:ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ, ದೂರು ನೀಡಿದರೂ ಕ್ಯಾರೇ ಅನ್ನದ ಪೊಲೀಸರು

ಮನೆ ಬಿಟ್ಟು ಬಂದ ಯುವತಿ

ಬಿಕಾಂ ಎರಡನೇ ಸೆಮಿಸ್ಟರ್​ನಲ್ಲಿ ಓದುತ್ತಿರುವ ಸುಪ್ರೀತಾ ಕಳೆದ ಎರಡು ದಿನಗಳ ಹಿಂದೆ, ಪದವಿ ಮುಗಿಸಿರುವ ರವಿಕಿರಣ್ ಜೊತೆಗೆ ಮದುವೆ ಮಾಡಿಕೊಳ್ಳಲು ಧಾರವಾಡದಿಂದ ಯಾದಗಿರಿಗೆ ಮನೆ ಬಿಟ್ಟು ಬಂದಿದ್ದಾಳೆ. ಆದ್ರೆ, ಪೋಷಕರು ಮದುವೆಗೆ ಅಡ್ಡಿ ಪಡಿಸುತ್ತಾರೆ, ಮುಂದೆ ಜೀವಕ್ಕೆ ಹಾನಿಯುಂಟು ಮಾಡುತ್ತಾರೆ ಎನ್ನುವ ಭಯ ಈಗ ಪ್ರೇಮಿಗಳಿಗೆ ಕಾಡುತ್ತಿದೆ. ಹೀಗಾಗಿ ಪೊಲೀಸರ ಮೊರೆ ಹೋಗಿರುವ ಜೋಡಿ, ನಮಗೆ ರಕ್ಷಣೆ ಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಜಾತಿ ಎಂದು ಹೊಡೆದಾಡುವ ಕಾಲದಲ್ಲಿ ಯುವ ಪ್ರೇಮಿಗಳು ಜಾತಿಯ ಸರಪಳಿಯನ್ನ ಹರಿದು ಪ್ರೀತಿಸಿ ಮದುವೆಗೆ ಮುಂದಾಗಿದ್ದಾರೆ. ಆದ್ರೆ, ಪೋಷಕರು ಮುಂದೆ ಏನಾದರೂ ಮಾಡಬಹುದು ಎಂದು ಪೊಲೀಸರ ಮೊರೆ ಹೋಗಿದ್ದಾರೆ. ಹೀಗಾಗಿ ಪೊಲೀಸರು ಪ್ರೇಮಿಗಳಿಗೆ ರಕ್ಷಣೆ ಕೊಡುವ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ