AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಚಿಕಿತ್ಸೆ ಕೊಡಿಸಲು ಪುತ್ರಿಯನ್ನು ಹೆಗಲ ಮೇಲೆ 8 ಕಿಲೋಮೀಟರ್ ಹೊತ್ತುಕೊಂಡು ಬಂದ ತಂದೆ

ಬಸ್​ಗಳಿಲ್ಲದೆ ಜನ ಸಾಮಾನ್ಯರು ಪಡುವ ಪರದಾಟ ಹೇಳತೀರದಂತಾಗಿದೆ. ಆದರೂ ಆಸ್ಪತ್ರೆಗೆ ಹೋಗಲೇ ಬೇಕಾದ್ದರಿಂದ ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗೆ ಜಿಲ್ಲೆಯಲ್ಲೊಬ್ಬರು ಚಿಕಿತ್ಸೆ ಕೊಡಿಸಲು ತನ್ನ ಮಗಳನ್ನು ಹೆಗಲ ಮೇಲೆ ಹೊತ್ತಿಕೊಂಡು ಸುಮಾರು 8 ಕಿಲೋಮೀಟರ್ ನಡೆದು ಆಸ್ಪತ್ರೆಗೆ ಬಂದಿದ್ದಾರೆ.

ಯಾದಗಿರಿ: ಚಿಕಿತ್ಸೆ ಕೊಡಿಸಲು ಪುತ್ರಿಯನ್ನು ಹೆಗಲ ಮೇಲೆ 8 ಕಿಲೋಮೀಟರ್ ಹೊತ್ತುಕೊಂಡು ಬಂದ ತಂದೆ
ಹೆಗಲ ಮೇಲೆ ಮಗಳನ್ನು ಹೊತ್ತುಕೊಂಡು ಬಂದ ತಂದೆ
sandhya thejappa
|

Updated on: May 20, 2021 | 12:13 PM

Share

ಯಾದಗಿರಿ: ಮಹಾಮಾರಿ ಕೊರೊನಾ ಎರಡನೇ ಅಲೆಯ ಆರ್ಭಟ ರಾಜ್ಯದಲ್ಲಿ ಜೋರಾಗಿದೆ. ಹೀಗಾಗಿ ಸೋಂಕನ್ನು ನಿಯಂತ್ರಿಸಲು ಸರ್ಕಾರ ಲಾಕ್​ಡೌನ್​ ಕೂಡಾ ಜಾರಿಗೊಳಿಸಿದೆ. ಇನ್ನು ಲಾಕ್​ಡೌನ್​ ಮುಂದೂಡುವ ಸಾಧ್ಯತೆಯೂ ಇದೆ. ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯವರೆಗೆ ಅವಕಾಶ ನೀಡಿದೆ. ಆದರೆ ಯಾವುದೇ ಬಸ್​ಗಳು, ಇತರೆ ವಾಹನಗಳು ಓಡಾಡದಂತೆ ಸರ್ಕಾರ ಕಠಿಣ ನಿಯಮಗಳನ್ನು ವಿಧಿಸಿದೆ. ಹೀಗಾಗಿ ಜನ ಸಾಮಾನ್ಯರಿಗೆ ಆಸ್ಪತ್ರೆಗೂ ಹೋಗಲು ಪರದಾಡುತ್ತಿದ್ದಾರೆ.

ಆಸ್ಪತ್ರೆಗೆ ಹೋಗಲು ಬಸ್​ಗಳಿಲ್ಲದೆ ಜನ ಸಾಮಾನ್ಯರು ಪಡುವ ಪರದಾಟ ಹೇಳತೀರದಂತಾಗಿದೆ. ಆದರೂ ಆಸ್ಪತ್ರೆಗೆ ಹೋಗಲೇ ಬೇಕಾದ್ದರಿಂದ ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗೆ ಜಿಲ್ಲೆಯಲ್ಲೊಬ್ಬರು ಚಿಕಿತ್ಸೆ ಕೊಡಿಸಲು ತನ್ನ ಮಗಳನ್ನು ಹೆಗಲ ಮೇಲೆ ಹೊತ್ತಿಕೊಂಡು ಸುಮಾರು 8 ಕಿಲೋಮೀಟರ್ ನಡೆದು ಆಸ್ಪತ್ರೆಗೆ ಬಂದಿದ್ದಾರೆ. ಪುತ್ರಿ ಅನುಶಾ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಕೊಡಿಸಲು ತಂದೆ ಮರೇಪ್ಪ ನಡೆದುಕೊಂಡು ಮಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಯಾದಗಿರಿಗೆ ಬಂದಿದ್ದಾರೆ.

ತಂದೆ ಮರೇಪ್ಪ ಯಾದಗಿರಿ ತಾಲೂಕಿನ ಪಗಲಾಪುರ ಗ್ರಾಮದಿಂದ ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಮಗಳನ್ನು ಕರೆದುಕೊಂಡು ಬಂದಿದ್ದಾರೆ. ಯಾದಗಿರಿಯಲ್ಲಿ ನಿನ್ನೆಯಿಂದ (ಮೇ 19) ಮೂರು ದಿನಗಳ ಕಾಲ ಕಠಿಣ ಲಾಕ್​ಡೌನ್​ ಹಿನ್ನೆಲೆ ಓಡಾಡುವ ವಾಹನಗಳನ್ನು ಪೊಲೀಸರು ಸೀಜ್ ಮಾಡುತ್ತಾರೆ. ಗಾಡಿಯನ್ನು ಸೀಜ್ ಮಾಡುತ್ತಾರೆಂದು ತಿಳಿದು ಪೊಲೀಸರಿಗೆ ಹೆದರಿ ಬೈಕ್ ಬಿಟ್ಟು ಸುಮಾರು 8 ಕಿಲೋಮೀಟರ್ ಮಗಳನ್ನು ಹೊತ್ತಿಕೊಂಡು ಬಂದಿದ್ದಾರೆ.

ಇದನ್ನೂ ಓದಿ

ಜಿಂದಾಲ್ ಕಂಪನಿ ಸಹಯೋಗದಿಂದ ರಾಜ್ಯದಲ್ಲಿ ಮೊದಲ ಬಾರಿಗೆ 1 ಸಾವಿರ ಆಕ್ಸಿಜನ್ ಬೆಡ್​ಗಳ ಆಸ್ಪತ್ರೆ ಬಳ್ಳಾರಿಯಲ್ಲಿ ಆರಂಭ

ಎರಡು ವರ್ಷದ ನನ್ನ ಮಗನನ್ನು ನನ್ನೊಟ್ಟಿಗೆ ಕರೆದೊಯ್ಯಲು ಅನುಮತಿ ಕೊಡಿ: ಸಾನಿಯಾ ಮಿರ್ಜಾ

(A Yadgir father carrying his daughter on shoulder for 8 kilometer for treatment)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ