AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂಚನಸೂರ್ ಆಯ್ತು, ಈಗ ಎ.ಬಿ ಮಾಲಕರೆಡ್ಡಿ ಸರದಿ; ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಾಬುರಾವ್ ಚಿಂಚನಸೂರ್ (Baburao Chinchansur) ಬಿಜೆಪಿ ತ್ಯಜಿಸಿ ಮರಳಿ ಕಾಂಗ್ರೆಸ್ (Congress) ಸೇರ್ಪಡೆಯಾಗಿರುವ ಬೆನ್ನಲ್ಲೇ ಮತ್ತೊಬ್ಬ ಮಾಜಿ ಸಚಿವ ಎ.ಬಿ ಮಾಲಕರೆಡ್ಡಿ ಮರಳಿ ‘ಕೈ’ ಹಿಡಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಚಿಂಚನಸೂರ್ ಆಯ್ತು, ಈಗ ಎ.ಬಿ ಮಾಲಕರೆಡ್ಡಿ ಸರದಿ; ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ಕಾಂಗ್ರೆಸ್​ ಪಕ್ಷದ ಧ್ವಜ (ಸಾಂದರ್ಭಿಕ ಚಿತ್ರ)
Ganapathi Sharma
|

Updated on: Mar 22, 2023 | 4:30 PM

Share

ಯಾದಗಿರಿ: ಬಾಬುರಾವ್ ಚಿಂಚನಸೂರ್ (Baburao Chinchansur) ಬಿಜೆಪಿ ತ್ಯಜಿಸಿ ಮರಳಿ ಕಾಂಗ್ರೆಸ್ (Congress) ಸೇರ್ಪಡೆಯಾಗಿರುವ ಬೆನ್ನಲ್ಲೇ ಮತ್ತೊಬ್ಬ ಮಾಜಿ ಸಚಿವ ಎ.ಬಿ ಮಾಲಕರೆಡ್ಡಿ ಮರಳಿ ‘ಕೈ’ ಹಿಡಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಯಾದಗಿರಿ ಕ್ಷೇತ್ರದಲ್ಲಿ ಮಾಜಿ ಸಚಿವರ ಘರ್ ವಾಪ್ಸಿ ಸಾಧ್ಯತೆ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಮಾಲಕರೆಡ್ಡಿ ಈಗಾಗಲೇ ಮಗಳು ಅನುರಾಗ ಹೆಸರಲ್ಲಿ ಕಾಂಗ್ರೆಸ್ ಟಿಕೆಟ್​ಗಾಗಿ ಅರ್ಜಿ ಹಾಕಿಸಿದ್ದಾರೆ. ಯಾದಗಿರಿ ಕ್ಷೇತ್ರದ ಟಿಕೆಟ್​​ಗೆ ಅರ್ಜಿ ಹಾಕಿಸಿದ್ದಾರೆ. ಕಳೆದ ಬಾರಿ ಇದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಲಕರೆಡ್ಡಿ ಸೋಲನುಭವಿಸಿದ್ದರು.

ಲೋಕಸಭಾ ಚುನಾವಣೆ ವೇಳೆ ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಮಾಲಕರೆಡ್ಡಿ ಬಿಜೆಪಿ ಸೇರಿದ್ದರು. ಮಾಲಕರೆಡ್ಡಿ, ಚಿಂಚನಸೂರ್ ಹಾಗೂ ಮಾಲಿಕಯ್ಯ ಗುತ್ತೆದಾರ್ ಕಾಂಗ್ರೆಸ್ ತ್ಯಜಿಸಿದ್ದರು.

ಕಾಂಗ್ರೆಸ್​​ನಿಂದ ಐದು ಬಾರಿ ಶಾಸಕರಾಗಿ ಒಂದು ಬಾರಿ ಸಚಿವರಾಗಿದ್ದ ಮಾಲಕರೆಡ್ಡಿ ಈ ಬಾರಿ ತಮ್ಮ ಮಗಳನ್ನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲು ಚಿಂತನೆ ಮಾಡಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಬಾಬುರಾವ್ ಚಿಂಚನಸೂರ್

ಬಾಬುರಾವ್ ಚಿಂಚನಸೂರ್ ಸೋಮವಾರವಷ್ಟೇ ವರಿಷತ್ ಸದಸ್ಯ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಇಂದು (ಮಾರ್ಚ್ 22) ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರು ಕೂಡ 2019 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ ಆಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಸೋತಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವಲ್ಲಿ ಚಿಂಚನಸೂರ್ ಕೂಡ ಪ್ರಮುಖ ಪಾತ್ರ ವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್