ಯಾದಗಿರಿ: ಬಾಬುರಾವ್ ಚಿಂಚನಸೂರ್ (Baburao Chinchansur) ಬಿಜೆಪಿ ತ್ಯಜಿಸಿ ಮರಳಿ ಕಾಂಗ್ರೆಸ್ (Congress) ಸೇರ್ಪಡೆಯಾಗಿರುವ ಬೆನ್ನಲ್ಲೇ ಮತ್ತೊಬ್ಬ ಮಾಜಿ ಸಚಿವ ಎ.ಬಿ ಮಾಲಕರೆಡ್ಡಿ ಮರಳಿ ‘ಕೈ’ ಹಿಡಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಯಾದಗಿರಿ ಕ್ಷೇತ್ರದಲ್ಲಿ ಮಾಜಿ ಸಚಿವರ ಘರ್ ವಾಪ್ಸಿ ಸಾಧ್ಯತೆ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಮಾಲಕರೆಡ್ಡಿ ಈಗಾಗಲೇ ಮಗಳು ಅನುರಾಗ ಹೆಸರಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಹಾಕಿಸಿದ್ದಾರೆ. ಯಾದಗಿರಿ ಕ್ಷೇತ್ರದ ಟಿಕೆಟ್ಗೆ ಅರ್ಜಿ ಹಾಕಿಸಿದ್ದಾರೆ. ಕಳೆದ ಬಾರಿ ಇದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಲಕರೆಡ್ಡಿ ಸೋಲನುಭವಿಸಿದ್ದರು.
ಲೋಕಸಭಾ ಚುನಾವಣೆ ವೇಳೆ ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಮಾಲಕರೆಡ್ಡಿ ಬಿಜೆಪಿ ಸೇರಿದ್ದರು. ಮಾಲಕರೆಡ್ಡಿ, ಚಿಂಚನಸೂರ್ ಹಾಗೂ ಮಾಲಿಕಯ್ಯ ಗುತ್ತೆದಾರ್ ಕಾಂಗ್ರೆಸ್ ತ್ಯಜಿಸಿದ್ದರು.
ಕಾಂಗ್ರೆಸ್ನಿಂದ ಐದು ಬಾರಿ ಶಾಸಕರಾಗಿ ಒಂದು ಬಾರಿ ಸಚಿವರಾಗಿದ್ದ ಮಾಲಕರೆಡ್ಡಿ ಈ ಬಾರಿ ತಮ್ಮ ಮಗಳನ್ನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲು ಚಿಂತನೆ ಮಾಡಿದ್ದಾರೆ.
ಇದನ್ನೂ ಓದಿ: ಡಿಕೆ ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಬಾಬುರಾವ್ ಚಿಂಚನಸೂರ್
ಬಾಬುರಾವ್ ಚಿಂಚನಸೂರ್ ಸೋಮವಾರವಷ್ಟೇ ವರಿಷತ್ ಸದಸ್ಯ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಇಂದು (ಮಾರ್ಚ್ 22) ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರು ಕೂಡ 2019 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ ಆಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸೋತಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವಲ್ಲಿ ಚಿಂಚನಸೂರ್ ಕೂಡ ಪ್ರಮುಖ ಪಾತ್ರ ವಹಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ