AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir News: ನಿಂತಿದ್ದ ಲಾರಿಗೆ ಕ್ರೂಷರ್ ವಾಹನ ಡಿಕ್ಕಿ ಐವರು ಭಕ್ತರ ಸಾವು

ನಿಂತಿದ್ದ ಲಾರಿಗೆ ಕ್ರೂಷರ್​ ವಾಹನ ಡಿಕ್ಕಿಯಾಗಿ ಐವರು ಭಕ್ತರು ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 ಎ‌ ನಲ್ಲಿ ನಡೆದಿದೆ.

Yadgir News: ನಿಂತಿದ್ದ ಲಾರಿಗೆ ಕ್ರೂಷರ್ ವಾಹನ ಡಿಕ್ಕಿ ಐವರು ಭಕ್ತರ ಸಾವು
ಲಾರಿಗೆ ಕ್ರೂಷರ್​ ವಾಹನ ಡಿಕ್ಕಿ
ವಿವೇಕ ಬಿರಾದಾರ
|

Updated on:Jun 06, 2023 | 8:18 AM

Share

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಷರ್​ ವಾಹನ (Crusher vehicle) ಡಿಕ್ಕಿಯಾಗಿ ಐವರು ಭಕ್ತರು (Devotees) ಸಾವನ್ನಪ್ಪಿರುವ ಘಟನೆ ಯಾದಗಿರಿ (Yadgiri) ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 ಎ‌ ನಲ್ಲಿ ನಡೆದಿದೆ. ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು, ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುನೀರ್(40), ನಯಾಮತ್ (40), ಮುದಶಿರ್ (12), ರಮೀಜಾ ಬೇಗಂ (50), ಸುಮ್ಮಿ (12) ಮೃತ ದುರ್ದೈವಿಗಳು. ಘಟನೆಯಲ್ಲಿ ಓರ್ವ ಬಾಲಕಿ, ಓರ್ವ ಬಾಲಕ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಭಕ್ತರು ಆಂಧ್ರಪ್ರದೇಶದ (Andhra Pradesh) ನಂದ್ಯಾಲ್ ಜಿಲ್ಲೆಯವರಾಗಿದ್ದು, ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ಆಗಮಿಸುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿದ್ದಾರೆ.

ಹೈವೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕ್ರೂಷರ್ ವಾಹನ ಡಿಕ್ಕಿ ಹೊಡೆದಿದೆ. ಕ್ರೂಷರ್ ವಾಹನದಲ್ಲಿದ್ದ ಐದು ಜನ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ನಂದ್ಯಾಲ ಗ್ರಾಮದ 18 ಜನ ಕ್ರೂಷರ್ ವಾಹನದಲ್ಲಿ ಪ್ರಯಾಣ ಮಾಡುತ್ತಿದ್ದರು. ಕಲಬುರಗಿಯ ಖಾಜಾ ಬಂದೇನವಾಜ ಉರುಸ್​ಗೆ ಬರುತ್ತಿದ್ದರು. ನಸುಕಿನ ಜಾವ ನಾಲ್ಕು ಗಂಟೆಗೆ ಅಪಘಾತ ಸಂಭವಿಸಿದೆ. ಗಾಯಗೊಂಡ 13 ಜನರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಯಾದಗಿರಿ ಎಸ್ ಪಿ ಡಾ. ಸಿಬಿ ವೇದಮೂರ್ತಿ ಹೇಳಿದ್ದಾರೆ.

ಹೈವೇಯಲ್ಲಿ ಟೈರ್​ ಸ್ಫೋಟಗೊಂಡು ಕಾರು ಪಲ್ಟಿ, ಐವರಿಗೆ ಗಾಯ

ಮಂಡ್ಯ: ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಐವರು ಗಾಯಗೊಂಡಿರುವ ಘಟನೆ ಮಂಡ್ಯ ಸಮೀಪದ ಚಿಕ್ಕಮಂಡ್ಯದ ಎಕ್ಸ್​ಪ್ರೆಸ್​​ ವೇನಲ್ಲಿ ನಡೆದಿದೆ. ಕಾರಿನಲ್ಲಿದ್ದ ಐವರಿಗೂ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿಂದ ಮೈಸೂರಿನತ್ತ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ.

ಗಾಯಗೊಂಡ ಐವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮಂಡ್ಯದ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸಾವು: ಚಾಲಕ ವಶಕ್ಕೆ

ಕತ್ತು ಕುಯ್ದ ಸ್ಥಿತಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಶವ ಪತ್ತೆ

ತುಮಕೂರು: ಕತ್ತು ಕುಯ್ದ ಸ್ಥಿತಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಶವ ಪತ್ತೆಯಾಗಿರುವಂತಹ ಘಟನೆ  ಅಂತಸರನಹಳ್ಳಿ ತರಕಾರಿ ಮಾರ್ಕೆಟ್‌ನಲ್ಲಿ ನಡೆದಿತ್ತು. ಸಾರ್ವಜನಿಕ ಶೌಚಾಲಯದಲ್ಲಿ ಲಖನ್ ಮಾಂಜಿ(36) ಶವ ಪತ್ತೆಯಾಗಿತ್ತು. ಮಾಂಜಿ 6 ತಿಂಗಳಿಂದ ಮಾರ್ಕೆಟ್‌ನ ಶೌಚಾಲಯ ಕೀಪರ್ ಆಗಿದ್ದನು. ತುಮಕೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಆರ್ಕೆಸ್ಟ್ರಾ ಹಾಡಿಗಾಗಿ ಮರ್ಡರ್​​: 7 ಆರೋಪಿಗಳ ಬಂಧನ

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲಿ ವ್ಯಕ್ತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ತರೀಕೆರೆ ನಿವಾಸಿಗಳಾದ ಮೂರ್ತಿ, ಮಂಜು, ನವೀನ್​​, ಧನು, ಈಶ್ವರ್​, ಪರಮೇಶ್ವರ್​, ನಿತಿನ್​ನನ್ನು ಬಂಧಿತರು. ಘಟನೆ ಸಂಬಂಧ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ವರುಣ್​ಗೆ ಚಾಕು ಇರಿದು ಕಬಾಬ್ ಮೂರ್ತಿ ಎಂಬಾತ ಪರಾರಿಯಾಗಿದ್ದ. ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಘಟನೆ ನಡೆದಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:48 am, Tue, 6 June 23

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ