AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಿರ್ಲಕ್ಷ್ಯ ಆರೋಪ; ಚಿಕಿತ್ಸೆ ಇಲ್ಲದೆ ನರಳಿ ನರಳಿ ಸತ್ತ ವ್ಯಕ್ತಿ, ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 60 ವರ್ಷದ ವ್ಯಕ್ತಿಯನ್ನು ಮೊದಲು ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಯಾದಗಿರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಯಾದಗಿರಿ ಜಿಲ್ಲಾಸ್ಪತ್ರೆ ವೈದ್ಯರು ಚಿಕಿತ್ಸೆಗೆ ತಡ ಮಾಡಿದ್ದು ವ್ಯಕ್ತಿ ನರಳಿ ನರಳಿ ಆಸ್ಪತ್ರೆಯಲ್ಲೇ ಪ್ರಾಣ ಬಿಟ್ಟಿದ್ದಾರೆ. ಹೀಗಾಗಿ ಕುಟಂಬಸ್ಥರು ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಆಸ್ಪತ್ರೆ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

ವೈದ್ಯರ ನಿರ್ಲಕ್ಷ್ಯ ಆರೋಪ; ಚಿಕಿತ್ಸೆ ಇಲ್ಲದೆ ನರಳಿ ನರಳಿ ಸತ್ತ ವ್ಯಕ್ತಿ, ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ
ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ
ಅಮೀನ್​ ಸಾಬ್​
| Updated By: ಆಯೇಷಾ ಬಾನು|

Updated on: Apr 02, 2024 | 9:01 AM

Share

ಯಾದಗಿರಿ, ಏಪ್ರಿಲ್.02: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದು (Death) ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ (Doctor’s Negligence) ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯಾದಗಿರಿ (Yadgir) ಜಿಲ್ಲಾಸ್ಪತ್ರೆಯ ಮುಂದೆ ಶವವಿಟ್ಟು ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಚಿಕಿತ್ಸೆ ಸಿಗದೆ ನರಳಿ ನರಳಿ ಆಸ್ಪತ್ರೆಯಲ್ಲೇ ರೋಗಿ ಪ್ರಾಣ ಬಿಟ್ಟಿದ್ದಾನೆ. ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿದ್ದಾನೆ.

ವಾಂತಿ ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ವನದುರ್ಗ ಗ್ರಾಮದ ಭೀಮರಾಯ (60) ಎಂಬುವವರನ್ನು ಕುಟುಂಬಸ್ಥರು ಶಹಾಪುರ‌ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಇಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗೆ ಯಾದಗಿರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ಸೂಚನೆ ನೀಡಿದ್ದಾರೆ. ಅದರಂತೆ ರೋಗಿ ಭೀಮರಾಯ ಅವರ ಪುತ್ರ ತಕ್ಷಣವೇ ಯಾದಗಿರಿ ಜಿಲ್ಲಾಸ್ಪತ್ರೆಗೆ ತಂದೆಯನ್ನು ಕರೆದುಕೊಂಡು ಬಂದು ಸೇರಿಸಿದ್ದಾರೆ. ಆದರೆ ರೋಗಿ ಆಸ್ಪತ್ರೆಯಲ್ಲಿ ದಾಖಲಾಗಿ ಎರಡು ಗಂಟೆ ಕಳೆದರೂ ವೈದ್ಯರು ಚಿಕಿತ್ಸೆ ನೀಡಿಲ್ಲ. ಕಾಲಿಗೆ ಬಿದ್ದು ಅಂಗಲಾಚಿದರೂ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ. ಕೊನೆಗೆ ರೋಗಿ ನರಳಿ ನರಳಿ ಆಸ್ಪತ್ರೆಯಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆಂದು ಭೀಮರಾಯ ಅವರ ಪುತ್ರ ಆರೋಪಿಸಿದ್ದಾರೆ. ಆಸ್ಪತ್ರೆ ಮುಂದೆ ಶವ ಇಟ್ಟು ಆಕ್ರೋಶ ಹೊರ ಹಾಕಿದ್ದಾರೆ. ಜೊತೆಗೆ ಯಾದಗಿರಿ ಜಿಲ್ಲಾಸ್ಪತ್ರೆ ವೈದ್ಯರ ನಡೆ ವಿರುದ್ಧ ಸಾರ್ವಜನಿಕರು ಕೂಡ ಆಕ್ರೋಶ ಹೊರ ಹಾಕಿದ್ದು ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದಾರಿಯಲ್ಲಿ ಮಾಟ, ಮಂತ್ರದ ವಸ್ತುಗಳನ್ನು ದಾಟಿದ್ರೆ ಏನಾಗುತ್ತೆ? ಇಲ್ಲಿದೆ ಮಾಹಿತಿ

ಸುಟ್ಟ ಸ್ಥಿತಿಯಲ್ಲಿ ಯುವತಿ ಮೃತ ದೇಹ

ರಾಷ್ಟ್ರೀಯ ಹೆದ್ದಾರಿ 206ರ ಪಕ್ಕದಲ್ಲಿ ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ತುಮಕೂರು ಜಿಲ್ಲೆ, ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು 25 ವರ್ಷದ ಯುವತಿಯನ್ನ ಕೊಲೆ ಮಾಡಿ‌ ಬಳಿಕ ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಚೇಳೂರು ಪೊಲೀಸ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ

ತನ್ನ ಇಚ್ಛೆಯಂತೆ ನಡೆದುಕೊಳ್ಳಲು ನಿರಾಕರಿಸಿದ ಪ್ರೇಯಸಿಗೆ ಪ್ರಿಯಕರ ಚಾಕುವಿನಿಂದ ಇರಿದಿದ್ದಾನೆ. ಕಾರವಾರದ ಕಾಜುಭಾಗದಲ್ಲಿ ಘಟನೆ ನಡೆಿದೆ. ನಂದನಗದ್ದಾ ನಿವಾಸಿ, ಆಟೋಚಾಲಕ ರವಿಶಂಕರ್​ನನ್ನ ಬಂಧಿಸಲಾಗಿದೆ. ಮಹಿಳೆಯೊಂದಿಗೆ ಈತ ಪ್ರೇಮ ಸಂಬಂಧ ಹೊಂದಿದ್ದ. ಆದ್ರೆ ಮೊನ್ನೆ ರಾತ್ರಿ ಹಣದ ವಿಚಾರಕ್ಕೆ ಗಲಾಟೆಯಾಗಿದ್ದು, ಚಾಕು ಇರಿದಿದ್ದಾನೆ. ಆಕೆಯನ್ನ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ