Yadgir News: ಆ್ಯಂಬುಲೆನ್ಸ್ ಸಿಬ್ಬಂದಿಗಳ ಸಮಯ ಪ್ರಜ್ಞೆ: ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಹೆಣ್ಣು ಮಗವಿಗೆ ಜನ್ಮ ನೀಡಿದ ಮಹಿಳೆ

ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಮಾರ್ಗ ಮಧ್ಯೆ ಸುರಕ್ಷಿತ ಹೆರಿಗೆ ಮಾಡಿಸುವ ಮೂಲಕ ಆ್ಯಂಬುಲೆನ್ಸ್ ಸಿಬ್ಬಂದಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾದಲ್ಲಿ ಘಟನೆ ನಡೆದಿದೆ.

Yadgir News: ಆ್ಯಂಬುಲೆನ್ಸ್ ಸಿಬ್ಬಂದಿಗಳ ಸಮಯ ಪ್ರಜ್ಞೆ: ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಹೆಣ್ಣು ಮಗವಿಗೆ ಜನ್ಮ ನೀಡಿದ ಮಹಿಳೆ
ಮಾರ್ಗ ಮಧ್ಯೆ ಹೆಣ್ಣು ಮಗುವಿಗೆ ಜನನ ನೀಡಿದ ಮಹಿಳೆ
Follow us
ಗಂಗಾಧರ​ ಬ. ಸಾಬೋಜಿ
|

Updated on:May 26, 2023 | 5:01 PM

ಯಾದಗಿರಿ: ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ (Pregnant) ಗೆ ಮಾರ್ಗ ಮಧ್ಯೆ ಸುರಕ್ಷಿತ ಹೆರಿಗೆ ಮಾಡಿಸುವ ಮೂಲಕ ಆ್ಯಂಬುಲೆನ್ಸ್ ಸಿಬ್ಬಂದಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾದಲ್ಲಿ ಘಟನೆ ನಡೆದಿದೆ. ಕಕ್ಕೇರಾದಿಂದ ರಾಯಚೂರಿನ ಲಿಂಗಸಗೂರು ಆಸ್ಪತ್ರೆಗೆ ಹೋಗುವಾಗ ಮಾರ್ಗ ಮಧ್ಯೆ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ಮಲ್ಲಮ್ಮ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿನ ತೂಕ ಹೆಚ್ಚಾಗಿದ್ದರಿಂದ ಲಿಂಗಸಗೂರು ಆಸ್ಪತ್ರೆಗೆ ವೈದ್ಯರು ರವಾನಿಸಿದ್ದಾರೆ.

ಆ್ಯಂಬುಲೆನ್ಸ್ ಸಿಬ್ಬಂದಿ ಮಹಾಂತೇಶ ಹಾಗೂ ಲಾಲಸಾಬ್​ರಿಂದ ಸುರಕ್ಷಿತ ಹೆರಿಗೆ ಮಾಡಲಾಗಿದೆ. ಹೆರಿಗೆ ನಂತರ ತಾಯಿ-ಮಗು ಆರೋಗ್ಯವಾಗಿದ್ದು, ಲಿಂಗಸಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತದಾನ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ

ಬಳ್ಳಾರಿ: ಮೇ 10ರಂದು ಮತದಾನ ಕೇಂದ್ರದ ಆವರಣದಲ್ಲಿ ತಾಯಿ ಮಗುವಿಗೆ ಜನ್ಮ ನೀಡಿರುವಂತಹ ಅಪರೂಪದ ಘಟನೆಯೊಂದು ಕುರುಗೋಡು ತಾಲೂಕಿನ ಕೊರ್ಲಾಗುಂದಿ ಗ್ರಾಮದ ಮತದಾನ ಕೇಂದ್ರದಲ್ಲಿ ಕಂಡುಬಂದಿದೆ.

ಇದನ್ನೂ ಓದಿ: ಮತದಾನ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಅಪರೂಪದ ಘಟನೆಗೆ ಸಾಕ್ಷಿಯಾಯ್ತು ಬಳ್ಳಾರಿ

ಮತದಾನ ಕೇಂದ್ರದಲ್ಲಿಯೇ ಹೆರಿಗೆ ನೋವು ಪ್ರಾರಂಭವಾಗಿದ್ದು, ಕೂಡಲೇ ಪಕ್ಕದ ಕೊಠಡಿ ಗೆ ಕರೆದುಕೊಂಡು ಹೋಗಲಾಗಿತ್ತು. ಅಷ್ಟರಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದರು. ಹೆರಿಗೆ ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾಯಿ ಮತ್ತು ಮಗು ಇಬ್ಬರನ್ನು ಶಿಫ್ಟ್ ಮಾಡಲಾಗಿತ್ತು.

ಕೆಎಸ್​ಆರ್​​ಟಿಸಿ ಬಸ್​​ನಲ್ಲಿಯೇ ಹೆರಿಗೆ

ಹಾಸನ: ಮಹಿಳಾ ಕಂಡಕ್ಟರೊಬ್ಬರು ಬಸ್‌ನಲ್ಲಿಯೇ ಗರ್ಭಿಣಿಗೆ ಹೆರಿಗೆ ಮಾಡಿಸಿರುವಂತಹ ಘಟನೆ ಒಂದು ಇತ್ತೀಚೆಗೆ ಹಾಸನದಲ್ಲಿ ನಡೆದಿತ್ತು. ಚಿಕ್ಕಮಗಳೂರು ಡಿಪೋದ ಕೆಎ 18 ಎಫ್ 0865 ಕೆಎಸ್‌ಆರ್‌ಟಿಸಿ ಬಸ್ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿತ್ತು.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಮಧ್ಯಾಹ್ನ 1.25ರ ಸುಮಾರಿಗೆ ಹಾಸನದ ಉದಯಪುರ ಕೃಷಿ ಕಾಲೇಜು ಬಳಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಹತ್ತಿರದಲ್ಲಿ ಯಾವುದೇ ಆಸ್ಪತ್ರೆ ಇಲ್ಲದ ಕಾರಣ, ಮಹಿಳಾ ಕಂಡಕ್ಟರ್ ಎಸ್ ವಸಂತಮ್ಮ ಬಸ್ ನಿಲ್ಲಿಸಿ, ಎಲ್ಲಾ 45 ಪ್ರಯಾಣಿಕರನ್ನು ಕೆಳಗಿಳಿಸಿದರು. ನಂತರ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:58 pm, Fri, 26 May 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್