AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಬಂಧನ

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಇತ್ತೀಚೆಗೆ ಅನ್ನಭಾಗ್ಯ ಪಡಿತರ ಅಕ್ಕಿ ಕಳ್ಳತನ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಶಹಾಪುರ ಠಾಣೆ ಪೊಲೀಸರು ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್​ ಅವರಿಗೆ ಸೇರಿದ ಶ್ರೀ ಲಕ್ಷ್ಮೀ ತಿಮ್ಮಪ್ಪ ರೈಸ್​ ಮಿಲ್​​ ​ಮೇಲೆ ಶನಿವಾರ (ಜ.27) ರಂದು ಮಾಡಿದ್ದರು. ಈ ವೇಳೆ ಅನ್ನಭಾಗ್ಯದ 550 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಬಂಧನ
ಬಂಧಿತ ರಾಜು ರಾಥೋಡ್​​
ಅಮೀನ್​ ಸಾಬ್​
| Edited By: |

Updated on: Jan 28, 2024 | 8:46 AM

Share

ಯಾದಗಿರಿ, ಜನವರಿ 28: ಅನ್ನಭಾಗ್ಯ ಯೋಜನೆಯ (Anna Bhagya Scheme) ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಮುಖಂಡ ಮಣಿಕಂಠ ರಾಠೋಡ್ (Manikanth Rathod) ಸಹೋದರ ರಾಜು ರಾಠೋಡ್ ಅವರನ್ನು ಶಹಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಹಾಪುರದಲ್ಲಿ ಇತ್ತೀಚೆಗೆ ಅನ್ನಭಾಗ್ಯ ಪಡಿತರ ಅಕ್ಕಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್​ ಅವರಿಗೆ ಸೇರಿದ ಶ್ರೀ ಲಕ್ಷ್ಮೀ ತಿಮ್ಮಪ್ಪ ರೈಸ್​ ಮಿಲ್​​ ​ಮೇಲೆ ಶನಿವಾರ (ಜ.27) ರಂದು ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಅನ್ನಭಾಗ್ಯದ 550 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್​​

ಬಡ ಜನರ ಹಸಿವಿನಿಂದ ಬಳಲಬಾರದು ಎಂದು ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಜಾರಿ ತಂದಿದ್ದಾರೆ. ಆದರೆ, ಈ ಯೋಜನೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ ಹಳ್ಳಹಿಡಿದಿದೆ. ಗದಗ-ಬೆಟಗೇರಿ ಅವಳಿ ನಗರದಲ್ಲೇ ಕಳೆದ ವರ್ಷ ಅಕ್ಟೋಬರ್​ ತಿಂಗಳಲ್ಲಿ ನಾಲ್ಕು ಅಕ್ರಮ ಅಕ್ಕಿ ಸಾಗಾಟ ಪ್ರಕರಣಗಳು ದಾಖಲಾಗಿದ್ದವು. ದಂಧೆಕೋರರು ಯಾವುದೇ ಭಯವಿಲ್ಲದೇ ರಾಜಾರೋಷವಾಗಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಿಸುತ್ತಿದ್ದರು. ಅಕ್ಕಿ ಸಿಗದೇ ಬೇಸತ್ತ ಜನರು ಪೊಲೀಸರಿಗೆ ದೂರು ನೀಡಿದ್ದರು. ಇದರಿಂದ ಎಚ್ಚೆತ್ತ ಅಧಿಕಾರಿಗಳು ದಾಳಿ ನಡೆಸಿ ಅಕ್ಕಿಯನ್ನ ಜಪ್ತಿ ಮಾಡಿದ್ದರು. ಈ ಅಕ್ರಮ ಅಕ್ಕಿ ದಂಧೆ ತಡೆಗೆ ಆಹಾರ ಇಲಾಖೆ ಮಾಸ್ಟರ್ ಪ್ಲ್ಯಾನ್​ ಮಾಡಿತ್ತು.

ಇದನ್ನೂ ಓದಿ: ಖಾತೆಗೆ ಬಾರದ ಅನ್ನಭಾಗ್ಯ ಗೃಹಲಕ್ಷ್ಮೀ ಯೋಜನೆ ಹಣ: ಚಾಮರಾಜನಗರದಲ್ಲಿ ರೊಚ್ಚಿಗೆದ್ದ ಮಹಿಳಾ ಮಣಿಯರು

ಇನ್ನು ನಾಲ್ಕು ಪ್ರಕರಣದಲ್ಲಿ 100 ಕ್ಕೂ ಕ್ವಿಂಟಲ್ ಅಕ್ಕಿಯನ್ನ ವಶಕ್ಕೆ ಪಡೆಯಲಾಗಿತ್ತು. ವಿಜಯಕುಮಾರ ಮಟ್ಟಿ, ವೀರಣ್ಣ ಬಡಿಗೇರಿ, ಶಿವಾನಂದ ಬಡಿಗೇರಿ, ಖಾಜಾಹುಸೇನ್ ದಂಧೆಕೋರರ ವಿರುದ್ಧ ದೂರು ದಾಖಲಾಗಿತ್ತು. ಇತ್ತ ಆಹಾರ ಇಲಾಖೆಯೂ ಅಕ್ರಮ ಅಕ್ಕಿ ದಂಧೆಕೋರರ ಪಟ್ಟಿ ರೆಡಿ ಮಾಡಿತ್ತು. ಗೂಂಡಾ ಕಾಯ್ದೆ ಅಥವಾ ಗಡಿಪಾರು ಮಾಡುವಂತೆ ಡಿಸಿಗೆ ಶಿಫಾರಸು ಮಾಡಿದೆ.

ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಮಾಡಿದ್ರೆ ಪಡಿತರ ರದ್ದು

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಿದ್ರೆ ಪಡಿತರ ಚೀಟಿ ರದ್ದುಪಡಿಸ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಎಚ್ಚರಿಕೆ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಅವರು ತವರು ಜಿಲ್ಲೆಯಲ್ಲೇ ಅಕ್ರಮ ದಂಧೆ ಸಕ್ರಿಯವಾಗಿರುವ ಬಗ್ಗೆ ‘ಟಿವಿ9’ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಮೈಸೂರು ಜಿಲ್ಲಾಡಳಿತ, ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವಂತಿಲ್ಲ. ಕಾಳಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಅಕ್ರಮವಾಗಿ ಮಾರಾಟ ಮಾರಿದ್ರೆ ಪಡಿತರ ಚೀಟಿ ರದ್ದುಪಡಿಸ್ತೇವೆ ಎಂದು ಎಚ್ಚರಿಕೆ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ