ಬಿಜೆಪಿ ಜನಾಶೀರ್ವಾದ ಯಾತ್ರೆ: ಗಾಳಿಯಲ್ಲಿ ಗುಂಡು ಹಾರಿಸಿ ಭಗವಂತ ಖೂಬಾಗೆ ಸ್ವಾಗತ; ಘಟನೆ ವಿರುದ್ಧ ಎಫ್​ಐಆರ್ ದಾಖಲು

BJP Janashirvada Yatra: ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಹಿನ್ನೆಲೆ ಕಾರ್ಯಕ್ರಮಕ್ಕೆ ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಬಾಬುರಾವ್ ಚಿಂಚನಸೂರು ಗೈರಾಗಿದ್ದಾರೆ. ಯಾದಗಿರಿಯಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸದೆ, ಕಲಬುರಗಿಯತ್ತ ವಾಪಸಾಗಿದ್ದಾರೆ.

ಬಿಜೆಪಿ ಜನಾಶೀರ್ವಾದ ಯಾತ್ರೆ: ಗಾಳಿಯಲ್ಲಿ ಗುಂಡು ಹಾರಿಸಿ ಭಗವಂತ ಖೂಬಾಗೆ ಸ್ವಾಗತ; ಘಟನೆ ವಿರುದ್ಧ ಎಫ್​ಐಆರ್ ದಾಖಲು
ಗಾಳಿಯಲ್ಲಿ ಗುಂಡು
Follow us
| Updated By: ganapathi bhat

Updated on: Aug 18, 2021 | 4:02 PM

ಯಾದಗಿರಿ: ನಗರದಲ್ಲಿ ನಡೆದ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಗಾಳಿಯಲ್ಲಿ ಗುಂಡುಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾಗೆ ಸ್ವಾಗತ ಕೋರಲಾಗಿದೆ. ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಬಳಿ ಫೈರಿಂಗ್​ ಮಾಡಲಾಗಿದೆ. ಘಟನೆ ಸಂಬಂಧ ಎಫ್​ಐಆರ್​ ದಾಖಲಿಸುವಂತೆ ಯಾದಗಿರಿ ಎಸ್​ಪಿ ವೇದಮೂರ್ತಿ ಸೂಚನೆ ನೀಡಿದ್ದಾರೆ. ಸಚಿವರ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿರುವ ಕಾರಣ ಇದೀಗ ಎಫ್​ಐಆರ್ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಹಿನ್ನೆಲೆ ಕಾರ್ಯಕ್ರಮಕ್ಕೆ ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಬಾಬುರಾವ್ ಚಿಂಚನಸೂರು ಗೈರಾಗಿದ್ದಾರೆ. ಯಾದಗಿರಿಯಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸದೆ, ಕಲಬುರಗಿಯತ್ತ ವಾಪಸಾಗಿದ್ದಾರೆ. ಗಾಳಿಯಲ್ಲಿ ಗುಂಡುಹಾರಿಸಿ ಕೇಂದ್ರ ಸಚಿವ ಖೂಬಾಗೆ ಸ್ವಾಗತ ನೀಡಲಾಗಿತ್ತು. ಕೇಂದ್ರ ಸಚಿವ ಭಗವಂತ ಖೂಬಾಗೆ ಬಿಜೆಪಿಯಿಂದ ಸ್ವಾಗತ ಕೋರಲಾಗಿತ್ತು. ಬಿಜೆಪಿ ಕಾರ್ಯಕರ್ತರೇ ಗುಂಡು ಹಾರಿಸಿದ್ದರು.

ಗಾಳಿಯಲ್ಲಿ ಗುಂಡು ಹಾರಿಸಲು ನಾಡ ಬಂದೂಕು ವ್ಯವಸ್ಥೆಯನ್ನು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುರುಮಠಕಲ್​ ಕ್ಷೇತ್ರ ವ್ಯಾಪ್ತಿಯ ಯರಗೋಳ ಗ್ರಾಮದಲ್ಲಿ ಚಿಂಚನಸೂರು ಸ್ವತಃ ತಾವೇ ಕೈಯಲ್ಲಿ ಬಂದೂಕು ಹಿಡಿದಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಗಾಳಿಯಲ್ಲಿ ಗುಂಡುಹಾರಿಸುವಂತೆ ಚಿಂಚನಸೂರು ಹೇಳಿದ್ದರು ಎಂದು ತಿಳಿದುಬಂದಿದೆ. ಇದೀಗ ಘಟನೆ ಸಂಬಂಧ ಎಫ್​ಐಆರ್ ದಾಖಲಾದ ಹಿನ್ನೆಲೆಯಲ್ಲಿ ಬಾಬುರಾವ್ ಚಿಂಚನಸೂರ್ ಜನಾಶೀರ್ವಾದ ಯಾತ್ರೆಗೆ ಗೈರಾಗಿದ್ದಾರೆ.

ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ನಿಯಮ ಉಲ್ಲಂಘನೆ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಮಾಡಲಾಗಿದೆ. ಯಾದಗಿರಿಯಲ್ಲಿ ಕೇಂದ್ರ ಸಚಿವ ಖೂಬಾ ನೇತೃತ್ವದಲ್ಲಿ ಯಾತ್ರೆ ನಡೆಯುತ್ತಿದೆ. ಆದರೆ, ಕೊರೊನಾ ನಿಯಮಾವಳಿಗಳು ಯಾವುದೂ ಯಾತ್ರೆಗೆ ಅನ್ವಯ ಆದಂತಿಲ್ಲ. ಯಾದಗಿರಿ ಜಿಲ್ಲಾಡಳಿತದಿಂದ ಜನಸಾಮಾನ್ಯರಿಗೊಂದು ರೂಲ್ಸ್, ರಾಜಕಾರಣಿಗಳಿಗೆ ಒಂದು ರೂಲ್ಸ್ ಎಂಬಂತಾಗಿದೆ. ಜಿಲ್ಲಾಡಳಿತವು ರಾಜಕೀಯ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಆದರೆ ಬಿಜೆಪಿ ನಾಯಕರಿಂದ‌ ಜಿಲ್ಲಾಡಳಿತದ‌ ರೂಲ್ಸ್ ಬ್ರೇಕ್ ಮಾಡಿ, ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಜಮಾವಣೆ ಮಾಡಲಾಗಿದೆ.

Bhagawanth Khuba welcome Yadgir

ಕೊರೊನಾ ನಿಯಮಾವಳಿ ಉಲ್ಲಂಘನೆ

ಕೇಂದ್ರ ಸಚಿವ ಭಗವಂತ ಖೂಬಾ ಸ್ವಾಗತಕ್ಕೆ, ಜನಾಶೀರ್ವಾದ ಯಾತ್ರೆಯಲ್ಲಿ 1000ಕ್ಕೂ ಹೆಚ್ಚು ಕಾರ್ಯಕರ್ತರ ಜಮಾವಣೆ ಆಗಿದೆ. ಮಾಸ್ಕ್, ದೈಹಿಕ ಅಂತರವಿಲ್ಲದೆ ಕಾರ್ಯಕರ್ತರ ಸೇರಿದ್ದಾರೆ. ಆದರೆ, ರಾಜಕೀಯ ನಾಯಕರ ನಡೆಯ ಬಗ್ಗೆ ಜಿಲ್ಲಾಡಳಿತ ಮೌನ ವಹಿಸಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ದಿನದ 18 ಗಂಟೆ ಕೆಲಸ ಮಾಡುತ್ತಾರೆ; ಒಂದು ಸೂಟ್​ಕೇಸ್ ಬಟ್ಟೆ ಮಾತ್ರ ಅವರ ಆಸ್ತಿ: ಶೋಭಾ ಕರಂದ್ಲಾಜೆ

ಅಫ್ಘಾನಿಸ್ತಾನ ತಾಲಿಬಾನ್ ವಶ: ನರೇಂದ್ರ ಮೋದಿ ಈ ಪರಿಸ್ಥಿತಿ ಊಹಿಸಿದ್ದರು; ಹಾಗಾಗಿ ಭಾರತದಲ್ಲಿ ಸಿಎಎ ಜಾರಿ: ಪ್ರತಾಪ್ ಸಿಂಹ

ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು
ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ
ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ
ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಕಾಮೆಂಟ್ ಮಾಡಲ್ಲ: ಡಿಕೆ ಶಿವಕುಮಾರ್
ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಕಾಮೆಂಟ್ ಮಾಡಲ್ಲ: ಡಿಕೆ ಶಿವಕುಮಾರ್
ರೈತರ ಜಮೀನು ಯಾವ ಕಾರಣಕ್ಕೂ ವಕ್ಫ್ ಬೋರ್ಡ್​ಗೆ ಹೋಗಲ್ಲ: ಸಿದ್ದರಾಮಯ್ಯ
ರೈತರ ಜಮೀನು ಯಾವ ಕಾರಣಕ್ಕೂ ವಕ್ಫ್ ಬೋರ್ಡ್​ಗೆ ಹೋಗಲ್ಲ: ಸಿದ್ದರಾಮಯ್ಯ
ಪುನೀತ್ 3ನೇ ವರ್ಷದ ಪುಣ್ಯಸ್ಮರಣೆ; ಅಪ್ಪು ದೇವಾಲಯದಲ್ಲಿ ವಿಶೇಷ ಪೂಜೆ
ಪುನೀತ್ 3ನೇ ವರ್ಷದ ಪುಣ್ಯಸ್ಮರಣೆ; ಅಪ್ಪು ದೇವಾಲಯದಲ್ಲಿ ವಿಶೇಷ ಪೂಜೆ