ಯಾದಗಿರಿ: ನಗರದಲ್ಲಿ ನಡೆದ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಗಾಳಿಯಲ್ಲಿ ಗುಂಡುಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾಗೆ ಸ್ವಾಗತ ಕೋರಲಾಗಿದೆ. ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಬಳಿ ಫೈರಿಂಗ್ ಮಾಡಲಾಗಿದೆ. ಘಟನೆ ಸಂಬಂಧ ಎಫ್ಐಆರ್ ದಾಖಲಿಸುವಂತೆ ಯಾದಗಿರಿ ಎಸ್ಪಿ ವೇದಮೂರ್ತಿ ಸೂಚನೆ ನೀಡಿದ್ದಾರೆ. ಸಚಿವರ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿರುವ ಕಾರಣ ಇದೀಗ ಎಫ್ಐಆರ್ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಹಿನ್ನೆಲೆ ಕಾರ್ಯಕ್ರಮಕ್ಕೆ ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಬಾಬುರಾವ್ ಚಿಂಚನಸೂರು ಗೈರಾಗಿದ್ದಾರೆ. ಯಾದಗಿರಿಯಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸದೆ, ಕಲಬುರಗಿಯತ್ತ ವಾಪಸಾಗಿದ್ದಾರೆ. ಗಾಳಿಯಲ್ಲಿ ಗುಂಡುಹಾರಿಸಿ ಕೇಂದ್ರ ಸಚಿವ ಖೂಬಾಗೆ ಸ್ವಾಗತ ನೀಡಲಾಗಿತ್ತು. ಕೇಂದ್ರ ಸಚಿವ ಭಗವಂತ ಖೂಬಾಗೆ ಬಿಜೆಪಿಯಿಂದ ಸ್ವಾಗತ ಕೋರಲಾಗಿತ್ತು. ಬಿಜೆಪಿ ಕಾರ್ಯಕರ್ತರೇ ಗುಂಡು ಹಾರಿಸಿದ್ದರು.
ಗಾಳಿಯಲ್ಲಿ ಗುಂಡು ಹಾರಿಸಲು ನಾಡ ಬಂದೂಕು ವ್ಯವಸ್ಥೆಯನ್ನು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುರುಮಠಕಲ್ ಕ್ಷೇತ್ರ ವ್ಯಾಪ್ತಿಯ ಯರಗೋಳ ಗ್ರಾಮದಲ್ಲಿ ಚಿಂಚನಸೂರು ಸ್ವತಃ ತಾವೇ ಕೈಯಲ್ಲಿ ಬಂದೂಕು ಹಿಡಿದಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಗಾಳಿಯಲ್ಲಿ ಗುಂಡುಹಾರಿಸುವಂತೆ ಚಿಂಚನಸೂರು ಹೇಳಿದ್ದರು ಎಂದು ತಿಳಿದುಬಂದಿದೆ. ಇದೀಗ ಘಟನೆ ಸಂಬಂಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಬಾಬುರಾವ್ ಚಿಂಚನಸೂರ್ ಜನಾಶೀರ್ವಾದ ಯಾತ್ರೆಗೆ ಗೈರಾಗಿದ್ದಾರೆ.
ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ನಿಯಮ ಉಲ್ಲಂಘನೆ
ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಮಾಡಲಾಗಿದೆ. ಯಾದಗಿರಿಯಲ್ಲಿ ಕೇಂದ್ರ ಸಚಿವ ಖೂಬಾ ನೇತೃತ್ವದಲ್ಲಿ ಯಾತ್ರೆ ನಡೆಯುತ್ತಿದೆ. ಆದರೆ, ಕೊರೊನಾ ನಿಯಮಾವಳಿಗಳು ಯಾವುದೂ ಯಾತ್ರೆಗೆ ಅನ್ವಯ ಆದಂತಿಲ್ಲ. ಯಾದಗಿರಿ ಜಿಲ್ಲಾಡಳಿತದಿಂದ ಜನಸಾಮಾನ್ಯರಿಗೊಂದು ರೂಲ್ಸ್, ರಾಜಕಾರಣಿಗಳಿಗೆ ಒಂದು ರೂಲ್ಸ್ ಎಂಬಂತಾಗಿದೆ. ಜಿಲ್ಲಾಡಳಿತವು ರಾಜಕೀಯ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಆದರೆ ಬಿಜೆಪಿ ನಾಯಕರಿಂದ ಜಿಲ್ಲಾಡಳಿತದ ರೂಲ್ಸ್ ಬ್ರೇಕ್ ಮಾಡಿ, ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಜಮಾವಣೆ ಮಾಡಲಾಗಿದೆ.
ಕೇಂದ್ರ ಸಚಿವ ಭಗವಂತ ಖೂಬಾ ಸ್ವಾಗತಕ್ಕೆ, ಜನಾಶೀರ್ವಾದ ಯಾತ್ರೆಯಲ್ಲಿ 1000ಕ್ಕೂ ಹೆಚ್ಚು ಕಾರ್ಯಕರ್ತರ ಜಮಾವಣೆ ಆಗಿದೆ. ಮಾಸ್ಕ್, ದೈಹಿಕ ಅಂತರವಿಲ್ಲದೆ ಕಾರ್ಯಕರ್ತರ ಸೇರಿದ್ದಾರೆ. ಆದರೆ, ರಾಜಕೀಯ ನಾಯಕರ ನಡೆಯ ಬಗ್ಗೆ ಜಿಲ್ಲಾಡಳಿತ ಮೌನ ವಹಿಸಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ದಿನದ 18 ಗಂಟೆ ಕೆಲಸ ಮಾಡುತ್ತಾರೆ; ಒಂದು ಸೂಟ್ಕೇಸ್ ಬಟ್ಟೆ ಮಾತ್ರ ಅವರ ಆಸ್ತಿ: ಶೋಭಾ ಕರಂದ್ಲಾಜೆ