Tejasvi Surya: ಮುಂದಿನ ಸಿಎಂ ಕುರಿತ ಬೊಮ್ಮಾಯಿ ಹೇಳಿಕೆ ನೂರಕ್ಕೆ ನೂರು ನಿಜ; ತೇಜಸ್ವಿ ಸೂರ್ಯ

‘ರಾಜ್ಯದಲ್ಲಿ ನಾನೇ ಮತ್ತೆ ಮುಖ್ಯಮಂತ್ರಿಯಾಗಲಿದ್ದೇನೆ’ ಎಂಬುದಾಗಿ ಬಸವರಾಜ ಬೊಮ್ಮಾಯಿ ಹೇಳಿರುವುದು ನೂರಕ್ಕೆ ನೂರರಷ್ಟು ನಿಜ ಎಂದು ಸಂಸದ ತೇಜಸ್ವಿ ಸೂರ್ಯ ಯಾದಗಿರಿಯಲ್ಲಿ ಹೇಳಿದ್ದಾರೆ.

Tejasvi Surya: ಮುಂದಿನ ಸಿಎಂ ಕುರಿತ ಬೊಮ್ಮಾಯಿ ಹೇಳಿಕೆ ನೂರಕ್ಕೆ ನೂರು ನಿಜ; ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ Image Credit source: financialexpress.com
Follow us
Ganapathi Sharma
|

Updated on:Mar 23, 2023 | 6:15 PM

ಯಾದಗಿರಿ: ‘ರಾಜ್ಯದಲ್ಲಿ ನಾನೇ ಮತ್ತೆ ಮುಖ್ಯಮಂತ್ರಿಯಾಗಲಿದ್ದೇನೆ’ ಎಂಬುದಾಗಿ ಬಸವರಾಜ ಬೊಮ್ಮಾಯಿ ಹೇಳಿರುವುದು ನೂರಕ್ಕೆ ನೂರರಷ್ಟು ನಿಜ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದ್ದಾರೆ. ಯಾದಗಿರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಗೆ (BJP) ಬಹುಮತ ಬರುವುದರಲ್ಲಿ ಸಂಶಯ ಇಲ್ಲ. ನಾವೇ ಅಧಿಕಾರಕ್ಕೆ ಬರುತ್ತೇವೆ. ಬಸವರಾಜ ಬೊಮ್ಮಾಯಿ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ. ಬಿಎಸ್ ಯಡಿಯೂರಪ್ಪ, ಬೊಮ್ಮಾಯಿ ನೇತೃತ್ವದ ಸರ್ಕಾರದಿಂದ ಉತ್ತಮ ಅಭಿವೃದ್ಧಿ ಕೆಲಸವಾಗಿದೆ. ಸರ್ಕಾರದ ಯೋಜನೆಗಳ ಫಲಾನುಭವಿಗಳು ನಮ್ಮ ಜತೆ ಇದ್ದಾರೆ. ನಾವು ಮತ್ತೊಮ್ಮೆ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿಂದನೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿಕ್ಷೆ ಪ್ರಕಟವಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸೂರತ್ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ. ರಾಹುಲ್ ಗಾಂಧಿ ಇಂದಿನ ಕೇಸ್ ಸೇರಿದಂತೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರದ ಪ್ರಕರಣ ವಿಚಾರಣೆ ಹಂತದಲ್ಲಿದೆ. ಅದರಲ್ಲೂ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಮೋದಿ ವಿರುದ್ದ ಹಗುರವಾಗಿ, ಅವಮಾನವಾಗುವಂತೆ ಮಾತನಾಡಿದ್ದಕ್ಕೆ ಸೂರತ್ ಕೋರ್ಟ್ ಶಿಕ್ಷೆ ಕೊಟ್ಟಿದೆ ಎಂದು ಹೇಳಿದ್ದಾರೆ.

ಈ ದೇಶದ ಪ್ರಧಾನಿ ಆಗಬೇಕೆಂದು ಕನಸು ಕಂಡಿರುವ ರಾಷ್ಟ್ರೀಯ ನಾಯಕರು ರಾಹುಲ್ ಗಾಂಧಿ. ಯಾವ ರೀತಿ ಮಾತನಾಡಬೇಕು, ಹೇಗೆ ವರ್ತಿಸಬೇಕು ಅನ್ನುವುದನ್ನು ಈಗಲಾದರೂ ಕಲಿಯಬೇಕು. ಆದರೆ ಅವರು ತಪ್ಪನ್ನೇ ಪುನರಾವರ್ತನೆ ಮಾಡುತ್ತಿದ್ದಾರೆ. ಮೋದಿ ಬಗ್ಗೆ ಪದೇಪದೆ ಅವಾಚ್ಯ ಶಬ್ದಗಳನ್ನು ಬಳಸಿ ಟೀಕಿಸುತ್ತಾರೆ. ವೈಯಕ್ತಿಕ ಟೀಕೆಗಳನ್ನು ಮಾಡುವುದು ಕಾಂಗ್ರೆಸ್ ಪಾರ್ಟಿಗೆ ಹೊಸದಲ್ಲ. ಮೋದಿ ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ‘ಮೌತ್ ಕಾ ಸೌದಾಗಾರ್’ ಎಂದು ಸೋನಿಯಾ ಗಾಂಧಿ ಹೇಳಿದ್ದರು. ಮಣಿಶಂಕರ್ ಅಯ್ಯರ್ ಮೋದಿಯನ್ನು ನೀಚ ಎಂಬುದಾಗಿ ಕರೆದಿದ್ದರು. 2019ರಲ್ಲಿ ರಾಹುಲ್ ಗಾಂಧಿ ಅದೇ ರೀತಿ ಮಾತನಾಡಿದ್ದಕ್ಕೆ ಕೋರ್ಟ್ ಇವತ್ತು ಶಿಕ್ಷೆ ಕೊಟ್ಟಿದೆ. ಈಗಲಾದರೂ ಪಶ್ಚಾತ್ತಾಪ ಪಟ್ಟು, ಸಾರ್ವಜನಿಕ ಜೀವನದಲ್ಲಿ ಇರಬೇಕಾದ ಸಭ್ಯತೆಯನ್ನು ಕಲಿಯಲಿ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿಯನ್ನು ಲೋಕಸಭೆಯಿಂದ ಅನರ್ಹಗೊಳಿಸುವಂತೆ ಸುಪ್ರೀಂ ಕೋರ್ಟ್ ವಕೀಲ ಮನವಿ

ರಾಹುಲ್ ಗಾಂಧಿ ಈ ರೀತಿ ಹೇಳಿಕೆ ಕೊಡುವುದರಿಂದ, ಮೋದಿ ಬಗ್ಗೆ ಕೆಟ್ಟದಾಗಿ ಮಾತನಾಡುವುದರಿಂದ ಜನ ಅವರ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸ ಕಡಿಮೆ ಆಗುವುದಿಲ್ಲ. ಅದು ಮತ್ತಷ್ಟು ಗಟ್ಟಿಯಾಗುತ್ತಾ ಹೋಗುತ್ತದೆ ಎಂದು ಅವರು ಹೇಳಿದ್ದಾರೆ.

ನಾನೇ ಮುಂದಿನ ಸಿಎಂ ಎಂದಿದ್ದ ಬೊಮ್ಮಾಯಿ

ಇತ್ತೀಚೆಗೆ ಮುಧೋಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬೊಮ್ಮಾಯಿ, ನಾನೇ ಮುಂದಿನ ಮುಖ್ಯಮಂತ್ರಿ ಎನ್ನುವ ಮೂಲಕ ಸಚಿವ ಮುರುಗೇಶ್​ ನಿರಾಣಿ ಅವರನ್ನು ನಗುನಗುತ್ತಲೇ ಕಾಲೆಳೆದ ವಿದ್ಯಮಾನ ನಡೆದಿತ್ತು. ಮುಧೋಳದ ಬೀಳಗಿ ಕ್ಷೇತ್ರದಲ್ಲಿ ನೀರಾವರಿ ಸೇರಿದಂತೆ ನೂರಾರು ಅಭಿವೃದ್ಧಿ ಕಾರ್ಯಗಳಾಗಿವೆ. ಆದರೆ, ಮುರುಗೇಶ್​ ನಿರಾಣಿ ನನ್ನನ್ನೇ ಅಲ್ಲಿಗೆ ಕರೆದುಕೊಂಡು ಹೋಗಿಲ್ಲ. ನನ್ನನ್ನು ಕರೆದುಕೊಂಡು ಹೋದರೆ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ನನಗೆ ಗೊತ್ತಾಗಬಹುದು ಎಂದು ಅವರು ಕರೆದೊಯ್ದಿಲ್ಲ. ಚಿಂತೆ ಮಾಡಬೇಡಿ, ನಾನು ಮತ್ತೆ ಮುಖ್ಯಮಂತ್ರಿಯಾಗಿ ಬೀಳಗಿಗೆ ಬರುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದರು. ಅದಕ್ಕೂ ಎರಡು ದಿನಗಳ ಹಿಂದೆ ಮಾತನಾಡಿದ್ದ ಬಿಎಸ್​ ಯಡಿಯೂರಪ್ಪ, ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಮರಳಿದ ಬಳಿಕವಷ್ಟೇ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸಲಾಗುವುದು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Thu, 23 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ