ಅನಂತಕುಮಾರ್ ಹೆಗಡೆ ಅಪ್ಪ ಬಂದರೂ ಸಂವಿಧಾನ ಬದಲಾಯಿಸಲು ಅಸಾಧ್ಯ: ಬಿಜೆಪಿ ಉಪಾಧ್ಯಕ್ಷ ರಾಜುಗೌಡ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಆ್ಯಕ್ಟಿವ್ ಆದ ಬಿಜೆಪಿ ಸಂಸದ ಅನಂತಕುಮರ್ ಹಗಡೆ ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಸ್ವಪಕ್ಷ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ನಡವೆ ರಾಜ್ಯ ಬಿಜೆಪಿ ಉಪಾಧ್ಯಕ್ಷರೇ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅನಂತಕುಮಾರ್ ಹೆಗಡೆ ಅಪ್ಪ ಬಂದರೂ ಸಂವಿಧಾನ ಬದಲಾಯಿಸಲು ಅಸಾಧ್ಯ: ಬಿಜೆಪಿ ಉಪಾಧ್ಯಕ್ಷ ರಾಜುಗೌಡ
ಅನಂತಕುಮಾರ್ ಹೆಗಡೆ ಅಪ್ಪ ಬಂದರೂ ಸಂವಿಧಾನ ಬದಲಾಯಿಸಲು ಅಸಾಧ್ಯ ಎಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ
Follow us
ಅಮೀನ್​ ಸಾಬ್​
| Updated By: Rakesh Nayak Manchi

Updated on: Mar 14, 2024 | 10:32 AM

ಯಾದಗಿರಿ, ಮಾ.14: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಆ್ಯಕ್ಟಿವ್ ಆದ ಬಿಜೆಪಿ ಸಂಸದ ಅನಂತಕುಮರ್ ಹಗಡೆ (Anantkumar Hegde) ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಸ್ವಪಕ್ಷ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ನಡವೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜುಗೌಡ (Raju Gowda) ಅವರು ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಅನಂತಕುಮಾರ್ ಹೆಗಡೆ ಅಲ್ಲ, ಅವರ ಅಪ್ಪ ಬಂದರೂ ಸಂವಿಧಾನ ಬದಲಾವಣೆ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಯಾದಗಿರಿ ನಗರದಲ್ಲಿ ಮಾತನಾಡಿದ ರಾಜುಗೌಡ, ಅನಂತಕುಮಾರ್ ಹೆಗಡೆ ಅಲ್ಲ ಅವರಪ್ಪ ಬಂದರೂ ಸಂವಿಧಾನ ಬದಲಾವಣೆ ಮಾಡಲು ಆಗಲ್ಲ. ಇದೆ ತರಹ 2018 ರಲ್ಲಿ ವಿವಾದಾತ್ಮಕ ಹೇಳಿಕೆ‌ ನೀಡಿ ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಬರೋದ್ದಕ್ಕೆ ಕಲ್ಲು ಹಾಕಿದ್ದರು. ಹಿಂದುತ್ವ, ಮೋದಿ ಗಾಳಿಯಲ್ಲಿ ಸಂಸದರಾಗುತ್ತಾರೆ. ಸಂಸದರಾದ‌ ಮೇಲೆ ನಾಲ್ಕು ವರ್ಷ ಮಾಯ ಆಗಿಬಿಡುತ್ತದ್ದಾರೆ. ಚುನಾವಣೆ ಸಂದರ್ಭದಲ್ಲಿ ಈ ರೀತಿ ಹುಚ್ಚುಚ್ಚಾಗಿ ಹೇಳಿಕೆ‌ ನೀಡುತ್ತಾರೆ ಎಂದು ಆಕ್ರೋಶ ಹೊರಹಾಕಿದರು.

ಅಂಬೇಡ್ಕರ್ ಅವರಿಗೆ ಮೋದಿ ಅವರಷ್ಟು ಗೌರವ ಕೊಡುವ ನಾಯಕ ಮತ್ತೊಬ್ಬ ಇಲ್ಲ. ಅಂಬೇಡ್ಕರ್ ಮಾರ್ಗದರ್ಶನದಲ್ಲಿ ಮೋದಿ ಅವರು ಹೊರಟಿದ್ದಾರೆ. ನಾಲ್ಕು ವರ್ಷ ಕಾಣೆ ಆಗಿದ್ದಕ್ಕೆ ಈ ರೀತಿ ಹೇಳಿಕೆ ನೀಡಿ ಟಿಕೆಟ್ ಪಡೆಯಲು ಯತ್ನಿಸುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದ ನಾನು ಬಿಜೆಪಿ ರಾಜ್ಯ ಉಪಾಧ್ಯಕ್ಷನಾಗಿ ಹೇಳುತ್ತಿದ್ದೇನೆ. ಎಲ್ಲೋ ನಾಲ್ಕು ಜನರ ಮಧ್ಯೆ ಮಾತಾಡಿ ವೈರಲ್ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ವಿಧಾನಸಭೆ ಚುನಾವಣೆಯಲ್ಲಿ ನಾನು ಸೋಲಲು ಅನಂತಕುಮಾರ್​ ಹೆಗಡೆ ಕಾರಣ: ರೂಪಾಲಿ ನಾಯ್ಕ

ಹಿಂದೊಮ್ಮೆ ಅನಂತಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾತನಾಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಅಲ್ಲದೇ ಸಚಿವ ಸ್ಥಾನವನ್ನೂ ಸಹ ಕಳೆದುಕೊಂಡಿದ್ದರು. ಇದೀಗ ಮತ್ತೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್​ ಪ್ರಬಲ ಅಸ್ತ್ರವನ್ನು ನೀಡಿದ್ದು, ಇದನ್ನೇ ಉಲ್ಲೇಖಿಸಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಶಾಸಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ, ಅನಂತಕುಮಾರ್ ಅವರು ಸಂವಿಧಾನ ಬದಲಾವಣೆ ಹೇಳಿಕೆ ಪಕ್ಷಕ್ಕೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಬಿಜೆಪಿ ನಾಯಕರು ಅನಂತಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದ್ದಾರೆ. ಇದರ ಮುಜುಗರ ತಾಳಲಾರದೇ ಹೆಗಡೆ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡಿದ್ದು, ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

ಅನಂತಕುಮಾರ್ ಹೆಗಡೆ ಹೇಳಿದ್ದೇನು?

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ್ದ ಅನಂತಕುಮಾರ್ ಹಗಡೆ, ಕಾಂಗ್ರೆಸ್​ನವರು ಅನಗತ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ. ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದರು.

ಕಾಂಗ್ರೆಸ್‌ನವರು ಸಂವಿಧಾನದ ಮೂಲರೂಪವನ್ನೇ ತಿರುಚಿದ್ದಾರೆ. ಸಂವಿಧಾನದಲ್ಲಿ ಬೇಡದೇ ಇರುವುದನ್ನೆಲ್ಲ ಸೇರಿಸಿದ್ದಾರೆ. ಇಡೀ ಹಿಂದೂ ಸಮಾಜವನ್ನು ದಮನಿಸುವ ರೀತಿ ಕಾನೂನು ತಂದಿದ್ದಾರೆ. ಇದೆಲ್ಲವೂ ಬದಲಾಗಬೇಕಿದ್ದರೆ ಬಹುಮತ ಇಲ್ಲದಿದ್ದರೆ ಆಗುವುದಿಲ್ಲ. ರಾಜ್ಯಸಭೆಯಲ್ಲೂ ನಮಗೆ ಬಹುಮತ ಬೇಕಾಗುತ್ತದೆ. ಎರಡೂ ಕಡೆ 2/3 ರಷ್ಟು ಬಹುಮತ ಬೇಕಾಗುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ