ರಾಯಚೂರು: ಈಜಲು ಹೋಗಿದ್ದ ಅಣ್ಣ-ತಮ್ಮ ನದಿ ಪಾಲು

ಈಜಲು ನದಿಗೆ ಇಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ.

ರಾಯಚೂರು: ಈಜಲು ಹೋಗಿದ್ದ ಅಣ್ಣ-ತಮ್ಮ ನದಿ ಪಾಲು
(ಸಾಂದರ್ಭಿಕ ಚಿತ್ರ
Follow us
Rakesh Nayak Manchi
|

Updated on: May 15, 2023 | 8:08 PM

ರಾಯಚೂರು: ಈಜಲು ಹೋಗಿದ್ದ ಅಣ್ಣ ಮತ್ತು ತಮ್ಮ ಇಬ್ಬರು ನದಿ ಪಾಲಾದ ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು ತಾಲ್ಲೂಕಿನ ದಡೆಸುಗೂರು ಗ್ರಾಮದಲ್ಲಿ ನಡೆದಿದೆ. ಮುದಿಯಪ್ಪ ಎಂಬವರ ಪುತ್ರರಾದ ಅಮರ್ (18) ಹಾಗೂ ಮಲ್ಲಿಕಾರ್ಜುನ (16) ಮೃತಪಟ್ಟವರು. ಹೆಚ್ಚಿನ ತಾಪಮಾನ ಹಿನ್ನೆಲೆ ಇಂದು ಮದ್ಯಾಹ್ನ ದಡೆಸುಗೂರು ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ಅಮತ್ ಮತ್ತು ಮಲ್ಲಿಕಾರ್ಜನ ತೆರಳಿದ್ದರು. ಈ ವೇಳೆ ಕೆಸರಿನಲ್ಲಿ ಸಿಲುಕಿಕೊಂಡು ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಗದಗದಲ್ಲಿ ಅಪಘಾತ: ಮೂವರ ದುರ್ಮರಣ

ಗದಗ: ಎರಡು ದ್ವಿಚಕ್ರ ವಾಹನಗಳಿಗೆ ಕಾರು ಡಿಕ್ಕಿಯಾಗಿ (Gadag Accident) ಮೂವರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ. ಶಿಂಗಟಾರಯನಕೇರಿ ತಾಂಡಾ ನಿವಾಸಿ ಶಿವಪ್ಪ ನಾಯ್ಕ್ (50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾಣಿ (33), ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್ (31) ಸಾವನ್ನಪ್ಪಿದವರು. ಎರಡು ಬೈಕ್​ಗಳಿಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಿಂದ ಹೊರಬಂದ ಚಾಲಕ ಪರಾರಿಯಾಗಿದ್ದಾನೆ.

ಇದನ್ನೂ ಓದಿ: Mangaluru news: ಬೈಕಂಪಾಡಿಯಲ್ಲಿ ಗೂಡ್ಸ್​ ರೈಲಿಗೆ ಸಿಲುಕಿ 20 ಎಮ್ಮೆಗಳು ಸಾವು

ಅಪಘಾತ ಸ್ಥಳದಲ್ಲಿ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗದಗ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಡೋಣಿ ತಾಂಡಾ, ಛಬ್ಬಿ ತಾಂಡಾ ಹಾಗೂ ಸಿಂಗಟರಾಯನಕೇರ ತಾಂಡಾದವರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ